ದ್ವಿತೀಯ ಪಿಯುಸಿ, ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1, 2ರ ಅಂತಿಮ ವೇಳಾಪಟ್ಟಿ ಪ್ರಕಟ
ದ್ವಿತೀಯ ಪಿಯು-ಫೆ.27ರಿಂದ, ಎಸೆಸೆಲ್ಸಿ-ಮಾ.22ರಿಂದ ಪ್ರಾರಂಭ

ಸಾಂದರ್ಭಿಕ ಚಿತ್ರ | Image by rawpixel.com on Magnific
ಬೆಂಗಳೂರು : 2026-27ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1 ಮತ್ತು ಪರೀಕ್ಷೆ-2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಗುರುವಾರ ಅಧಿಕೃತವಾಗಿ ಪ್ರಕಟಿಸಿದೆ.
ಈ ಹಿಂದೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ, ಇದೀಗ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಂಡಳಿಯ ಪ್ರಕಟನೆಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 27ರಿಂದ ಮಾರ್ಚ್ 18ರ ವರೆಗೆ ಹಾಗೂ ಪರೀಕ್ಷೆ-2 ಮೇ 3ರಿಂದ ಮೇ 15ರ ವರೆಗೆ ನಡೆಯಲಿದೆ. ಅದೇ ರೀತಿ ಎಸೆಸೆಲ್ಸಿ ಪರೀಕ್ಷೆ-1 ಮಾರ್ಚ್ 22ರಿಂದ ಎಪ್ರಿಲ್ 5ರ ವರೆಗೆ ಹಾಗೂ ಪರೀಕ್ಷೆ-2 ಮೇ 24 ರಿಂದ ಮೇ 31ರ ವರೆಗೆ ನಡೆಯಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-01: ಫೆ.27ರಂದು ಕನ್ನಡ ಮತ್ತು ಅರೇಬಿಕ್ ವಿಷಯಗಳೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ. ಮಾ.1ರಂದು ಇಂಗ್ಲಿಷ್, ಮಾ.2ರಂದು ತೆಲುಗು, ತಮಿಳು, ಮರಾಠಿ, ಉರ್ದು, ಸಂಸ್ಕೃ ತ, ಫ್ರೆಂಚ್ ಮತ್ತು ಮಲಯಾಳಂ ಪರೀಕ್ಷೆಗಳು ನಡೆಯಲಿವೆ.
ಮಾ.3ರಂದು ಭೂಗೋಳಶಾಸ್ತ್ರ ಮತ್ತು ಮನಃಶಾಸ್ತ್ರ, ಮಾ.4ರಂದು ಸಮಾಜಶಾಸ್ತ್ರ ಮತ್ತು ಭೌತಶಾಸ್ತ್ರ, ಮಾ.5ರಂದು ಲೆಕ್ಕಶಾಸ್ತ್ರ, ಮಾ.8ರಂದು ರಸಾಯನಶಾಸ್ತ್ರ, ಶಿಕ್ಷ ಣಶಾಸ್ತ್ರ ಮತ್ತು ಮೂಲ ಗಣಿತ ಪರೀಕ್ಷೆಗಳಿವೆ. ಮಾ.9ರಂದು ಅರ್ಥಶಾಸ್ತ್ರ ಮತ್ತು ಭೂಗರ್ಭಶಾಸ್ತ್ರ ಪರೀಕ್ಷೆ ನಡೆಯಲಿದೆ.
ಮಾ.11ರಂದು ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೊಮೊಬೈಲ್, ಆರೋಗ್ಯ ರಕ್ಷಣೆ ಹಾಗೂ ಬ್ಯೂಟಿ ಆ್ಯಂಡ್ ವೆಲ್ನೆಸ್ ವಿಷಯಗಳ ಪರೀಕ್ಷೆ ನಡೆಯಲಿದೆ. ಮಾ.12ರಂದು ವ್ಯವಹಾರ ಅಧ್ಯಯನ ಮತ್ತು ಗಣಿತ, ಮಾ.13ರಂದು ಐಚ್ಛಿಕ ಕನ್ನಡ, ತರ್ಕಶಾಸ್ತ್ರ ಮತ್ತು ಗೃಹವಿಜ್ಞಾನ ಪರೀಕ್ಷೆಗಳಿವೆ.
ಮಾ.15ರಂದು ರಾಜ್ಯಶಾಸ್ತ್ರ, ಜೀವಶಾಸ್ತ್ರ ಮತ್ತು ಗಣಕ ವಿಜ್ಞಾನ, ಮಾ.16ರಂದು ಸಂಖ್ಯಾಶಾಸ್ತ್ರ ಮತ್ತು ವಿದ್ಯುನ್ಮಾನಶಾಸ್ತ್ರ, ಮಾ.17ರಂದು ಹಿಂದಿ ಹಾಗೂ ಮಾ.18ರಂದು ಇತಿಹಾಸ ಪರೀಕ್ಷೆ ನಡೆಯಲಿದೆ.
ಎಸೆಸೆಲ್ಸಿ ಪರೀಕ್ಷೆ-01: ಎಸೆಸೆಲ್ಸಿ ಪರೀಕ್ಷೆಗಳು ಮಾ.22ರಂದು ಪ್ರಥಮ ಭಾಷೆಯ ವಿಷಯಗಳೊಂದಿಗೆ ಆರಂಭವಾಗಲಿವೆ. ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್(ಎನ್ಸಿಇಆರ್ಟಿ) ಮತ್ತು ಸಂಸ್ಕೃತ ಭಾಷೆಗಳ ಪರೀಕ್ಷೆಗಳು ನಡೆಯಲಿದ್ದು, ಮಾ.25ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತ, ಮಾ.27ರಂದು ದ್ವಿತೀಯ ಭಾಷೆಗಳಾದ ಇಂಗ್ಲಿಷ್ ಮತ್ತು ಕನ್ನಡ, ಮಾ.30ರಂದು ಗಣಿತ, ಸಮಾಜಶಾಸ್ತ್ರ ಪರೀಕ್ಷೆ ನಡೆಯಲಿದೆ.
ಎ.2ರಂದು ತೃತೀಯ ಭಾಷೆಗಳ ಪರೀಕ್ಷೆ ಹಾಗೂ ಎನ್ಎಸ್ಕ್ಯೂಎಫ್ ವಿಷಯಗಳ ಪರೀಕ್ಷೆಗಳು ನಿಗದಿಯಾಗಿವೆ. ಎ.3ರಂದು ಅರ್ಥಶಾಸ್ತ್ರ ಮತ್ತು ಇಂಜಿನಿಯರಿಂಗ್ ವಿಷಯಗಳ ಪರೀಕ್ಷೆ ನಡೆಯಲಿದ್ದು, ಎ.5ರಂದು ಸಮಾಜ ವಿಜ್ಞಾನ ಪರೀಕ್ಷೆಯೊಂದಿಗೆ ಮುಖ್ಯ ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ.
ದ್ವಿತೀಯ ಪಿಯುಸಿ ಪರೀಕ್ಷೆ-02: ಮೇ.3ರಂದು ಕನ್ನಡ-ಅರೇಬಿಕ್, ಮೇ.4ರಂದು ಲೆಕ್ಕಶಾಸ್ತ್ರ, ಜೀವಶಾಸ್ತ್ರ, ಭೂಗರ್ಭಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಮೇ.5ರಂದು ರಾಜ್ಯಶಾಸ್ತ್ರ ಮತ್ತು ಗಣಕ ವಿಜ್ಞಾನ, ಮೇ.6ರಂದು ಇತಿಹಾಸ ಮತ್ತು ರಸಾಯನಶಾಸ್ತ್ರ, ಮೇ.7ರಂದು ವ್ಯವಹಾರ ಅಧ್ಯಯನ, ಮನಃ ಶಾಸ್ತ್ರ, ಶಿಕ್ಷಣ ಶಾಸ್ತ್ರ ಪರೀಕ್ಷೆ ನಡೆಯಲಿವೆ.
ಮೇ.8ರಂದು ಐಚ್ಛಿಕ ಕನ್ನಡ, ಭೌತಶಾಸ್ತ್ರ, ಮೂಲ ಗಣಿತ, ಮೇ.10ರಂದು ಅರ್ಥಶಾಸ್ತ್ರ ಮತ್ತು ಗಣಿತ, ಮೇ.11ರಂದು ಹಿಂದಿ, ಮೇ.12ರಂದು ಇಂಗ್ಲಿಷ್, ಮೇ.13ರಂದು ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ, ಮೇ.14ರಂದು ತರ್ಕಶಾಸ್ತ್ರ, ಭೂಗೋಳಶಾಸ್ತ್ರ, ಗೃಹ ವಿಜ್ಞಾನ, ಮೇ.15ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃ ತ, ಪ್ರೆಂಚ್ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 1ಗಂಟೆಯವರೆಗೆ ನಡೆಯಲಿವೆ.
ಮೇ.15ರಂದು ಮಧ್ಯಾಹ್ನ 2ರಿಂದ ಸಾಯಂಕಾಲ 4:15ರವರೆಗೆ ಹಿಂದೂಸ್ತಾನಿ ಸಂಗೀತ, ಇಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಆ್ಯಂಡ್ ವೆಲ್ನೆಸ್ ಪರೀಕ್ಷೆ ನಡೆಯಲಿವೆ.
ಎಸೆಸೆಲ್ಸಿ ಪರೀಕ್ಷೆ-02: ಮೇ 24ರ ಬೆಳಗ್ಗೆ 10ರಿಂದ ಮಧ್ಯಾಹ್ನ 1:15ರ ವರೆಗೆ ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(ಎನ್ಸಿಇಆರ್ಟಿ), ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ.
ಮೇ.25ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ, ಮೇ.26ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, ಮೇ.27ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಮೇ.28ರಂದು ತೃತೀಯ ಭಾಷೆಗಳಾದ ಹಿಂದಿ, ಹಿಂದಿ(ಎನ್ಸಿಇಆರ್ಟಿ), ಕನ್ನಡ(ಪುನರಾವರ್ತಿತ ಅಭ್ಯರ್ಥಿಗಳಿಗೆ), ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕøತ, ಕೊಂಕಣಿ, ತುಳು ಹಾಗೂ ಎನ್.ಎಸ್.ಕ್ಯೂ.ಎಫ್ ವಿಷಯಗಳಾದ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಬ್ಯೂಟಿ ಆ್ಯಂಡ್ ವೆಲ್ನೆಸ್, ಅಪರೇಲ್ ಮೇಡ್ ಅಪ್ಸ್ ಆ್ಯಂಡ್ ಹೋಮ್, ಇಲೆಕ್ಟ್ರಾನಿಕ್ಸ್ ಆಂ್ಯಡ್ ಹಾರ್ಡ್ವೇರ್ ಪರೀಕ್ಷೆಗಳು ನಡೆಯಲಿವೆ.
ಮೇ.29ರಂದು ಸಮಾಜ ವಿಜ್ಞಾನ, ಮೇ.31ರಂದು ಜೆಟಿಎಸ್ ವಿಷಯಗಳಾದ ಎಲಿಮೆಂಟ್ಸ್ ಆಫ್ ಇಲೆಕ್ಟ್ರಿಕಲ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಇಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಎ.ಎನ್.ಎಸ್.ಐ ಹಾಗೂ ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿವೆ.






