Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಂದಿ, ಭೀಮಾ, ಕೃಷ್ಣಾ ಸಕ್ಕರೆ...

ನಂದಿ, ಭೀಮಾ, ಕೃಷ್ಣಾ ಸಕ್ಕರೆ ಕಾರ್ಖಾನೆಗಳಿಗೆ ಹಣಕಾಸು ನೆರವು : ಎಂ.ಬಿ. ಪಾಟೀಲ್

"ಸಮರ್ಪಕ ಯೋಜನೆ ರೂಪಿಸಲು ಹಣಕಾಸು ಇಲಾಖೆಗೆ ಮುಖ್ಯಮಂತ್ರಿ ಸೂಚನೆ"

ವಾರ್ತಾಭಾರತಿವಾರ್ತಾಭಾರತಿ5 May 2025 6:30 PM IST
share
ನಂದಿ, ಭೀಮಾ, ಕೃಷ್ಣಾ ಸಕ್ಕರೆ ಕಾರ್ಖಾನೆಗಳಿಗೆ ಹಣಕಾಸು ನೆರವು : ಎಂ.ಬಿ. ಪಾಟೀಲ್

ಬೆಂಗಳೂರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿರುವ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ, ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಇಂಡಿ ತಾಲೂಕಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಅಗತ್ಯವಿರುವ ಆರ್ಥಿಕ ನೆರವನ್ನು ಹೇಗೆ ಒದಗಿಸಬೇಕು ಎನ್ನುವ ಬಗ್ಗೆ ಸರಿಯಾದ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಯವರು ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಒದಗಿಸಬೇಕಾದ ನೆರವು ಕುರಿತು ಚರ್ಚಿಸಲು ಸೋಮವಾರ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕ ನೆರವು ಬೇಕಾಗಿದೆ. ಅವಧಿ ಸಾಲ, ರೈತರಿಗೆ ಮಾಡಬೇಕಾದ ಹಣ ಪಾವತಿ, ಕಬ್ಬಿನ ಕಟಾವು, ಸಾಗಣೆ, ಸಕ್ಕರೆ ಮತ್ತು ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆ ವೆಚ್ಚಗಳ ಭಾರ ವಿಪರೀತವಾಗಿದೆ. ಈ ಕಾರ್ಖಾನೆಗಳಿಗೆ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ ಅಥವಾ ಬ್ಯಾಂಕ್ ಖಾತರಿ ಮೂಲಕ ಆರ್ಥಿಕ ಸಹಾಯ ದೊರಕಿಸಿ ಕೊಡಬೇಕೆಂದು ಸಭೆಯ ಗಮನಕ್ಕೆ ತರಲಾಯಿತು. ಈ ಬಗ್ಗೆ ನಿಗಮದ ಜತೆಗೂ ಚರ್ಚಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಅವರು ಹೇಳಿದರು.

ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಗೆ 192 ಕೋಟಿ ರೂ.ಮತ್ತು ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಗೆ 150 ಕೋಟಿ ರೂ.ಹಾಗೂ ಭೀಮಾ ಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ 130 ಕೋಟಿ ರೂ.ಬೇಕಾಗಿದೆ. ಇಷ್ಟು ನೆರವು ದೊರಕಿಸಿ ಕೊಟ್ಟರೆ, ವಿದ್ಯುತ್ ಉತ್ಪಾದನೆಯಿಂದ ಬರುವ ಹಣವನ್ನು ಸಾಲದ ಕಡೆಗೇ ಪಾವತಿಸಲು ಕಾರ್ಖಾನೆಗಳು ಆಸಕ್ತಿ ಹೊಂದಿವೆ ಎಂದು ಅವರು ನುಡಿದರು.

ಕೃಷ್ಣಾ ಕಾರ್ಖಾನೆಯು 27 ಮೆಗಾವ್ಯಾಟ್ ಮತ್ತು ನಂದಿ ಕಾರ್ಖಾನೆಯು 37 ಮೆಗಾವ್ಯಾಟ್ ಸಾಮಥ್ರ್ಯದ ಸಹವಿದ್ಯುತ್ (ಕೋಜೆನ್) ಘಟಕ ಸ್ಥಾಪಿಸುವ ಆಸಕ್ತಿ ಹೊಂದಿವೆ. ಜೊತೆಗೆ ಕೃಷ್ಣಾ ಹಾಗೂ ಭೀಮಾ ಕಾರ್ಖಾನೆಯು ಎಥೆನಾಲ್ ಉತ್ಪಾದನಾ ಘಟಕವನ್ನೂ ಸ್ಥಾಪಿಸಲು ಮುಂದಾಗಿದೆ. ಸಹಕಾರಿ ತತ್ವದ ಮೇಲೆ ನಡೆಯುತ್ತಿರುವ ಈ ಕಾರ್ಖಾನೆಗಳ ಪುನಶ್ಚೇತನ ಸಮರ್ಪಕವಾಗಿ ನಡೆಯಬೇಕಾಗಿದೆ ಎಂದು ಎಂ.ಬಿ. ಪಾಟೀಲ್ ಹೇಳಿದರು.

ಈ ಸಂಬಂಧ ಸಕ್ಕರೆ ಆಯುಕ್ತರು ಮತ್ತು ಎನ್.ಸಿ.ಡಿ.ಸಿ. ಅಧಿಕಾರಿಗಳ ಜತೆ ಸಮಗ್ರವಾಗಿ ಚರ್ಚಿಸಿ, ಸಮರ್ಪಕ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಈ ಎರಡೂ ಕಾರ್ಖಾನೆಗಳಿಗೆ ಸರಕಾರದ ಕಡೆಯಿಂದ ಸಕಾಲಿಕ ನೆರವು ಸಿಗುವಂತೆ ಮಾಡಲು ಎಲ್ಲ ಪ್ರಯತ್ನಗಳನ್ನೂ ಮಾಡಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ಯಶವಂತರಾಯ ಗೌಡ ಪಾಟೀಲ್, ಬೀಳಗಿ ಶಾಸಕ ಜೆ.ಟಿ.ಪಾಟೀಲ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್, ನಂದಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ ಜೈನಾಪುರ, ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಜಗೋಪಾಲ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X