Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇಸ್ಲಾಂ ಧರ್ಮಕ್ಕೆ ಮತಾಂತರ ಆರೋಪ: ಮೂವರ...

ಇಸ್ಲಾಂ ಧರ್ಮಕ್ಕೆ ಮತಾಂತರ ಆರೋಪ: ಮೂವರ ವಿರುದ್ಧದ ಎಫ್‌ಐಆರ್ ರದ್ದು

ವಾರ್ತಾಭಾರತಿವಾರ್ತಾಭಾರತಿ26 July 2025 5:14 PM IST
share
ಇಸ್ಲಾಂ ಧರ್ಮಕ್ಕೆ ಮತಾಂತರ ಆರೋಪ: ಮೂವರ ವಿರುದ್ಧದ ಎಫ್‌ಐಆರ್ ರದ್ದು

ಬೆಂಗಳೂರು: ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರಚೋದಿಸಿದ ಆರೋಪದಡಿ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಮೂವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಆರೋಪಿಗಳಾದ ಮುಸ್ತಾಫ ಬಿನ್‌ ಮುರ್ತಜ್‌ಸಾಬ್‌ ಮೊಮಿನ್‌, ಅಲಿಸಾಬ್ ಬಿನ್ ಶಬ್ಬೀರ್‌ ಅಳಗುಂಡಿ ಮತ್ತು ಸುಲೇಮಾನ್‌ ಬಿನ್‌ ರಿಯಾಜ್‌ ಅಹಮದ್‌ ಗಲಗಲಿ ಎಂಬವರು ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌((ಧಾರವಾಡ ಪೀಠ)ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ಪುರಸ್ಕರಿಸಿರುವ ನ್ಯಾ.ವೆಂಕಟೇಶ್‌ ಟಿ.ನಾಯ್ಕ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಎಫ್‌ಐಆರ್‌ ರದ್ದುಪಡಿಸಿ ಆದೇಶಿಸಿದೆ.

ವಕೀಲರಾದ ಇಫ್ತೀಕರ್‌ ಶಹಾಪುರಿ ಮತ್ತು ಅನ್ವರ್ ಅಲಿ ಡಿ.ನದಾಫ್‌ ಅರ್ಜಿದಾರರ ಪರ ವಾದ ಮಂಡಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ರಕ್ಷಣೆ ಕಾಯ್ದೆ-2022ರ ಕಲಂ 4ರ ಅಡಿಯಲ್ಲಿ ಧಾರ್ಮಿಕ ಮತಾಂತರ ಪ್ರಕರಣದಲ್ಲಿ ಪ್ರಚೋದನೆಗೆ ಒಳಗಾಗಿ ಮತಾಂತರಗೊಂಡ ವ್ಯಕ್ತಿಯ ರಕ್ತ ಸಂಬಂಧಿಕರು ಹಾಗೂ ಪೋಷಕರು ಮಾತ್ರವೇ ದೂರು ಸಲ್ಲಿಸಲು ಅಧಿಕಾರವಿರಲಿದೆ. ಆದರೆ, ಈ ಪ್ರಕರಣದಲ್ಲಿ ದೂರು ದಾಖಲಿಸಿರುವ ವ್ಯಕ್ತಿ ಮೂರನೆ ವ್ಯಕ್ತಿಯಾಗಿದ್ದಾರೆ. ಅರ್ಜಿದಾರರ ವಿರುದ್ದ ಕಲಂ 3ರ ಅಡಿಯಲ್ಲಿ ತಿಳಿಸಿರುವಂತೆ ಮತಾಂತರಕ್ಕೆ ಪ್ರಚೋದನೆ ಮಾಡಿರುವ ಸಂಬಂಧ ಆರೋಪಗಳು ಇಲ್ಲವಾಗಿವೆ ಎಂದು ಹೇಳಿ ಮೂವರ ವಿರುದ್ಧದ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ.

ಏನಿದು ಪ್ರಕರಣ :

ʼಜಮಖಂಡಿಯ ರಾಮತೀರ್ಥ ದೇವಾಲಯ ಬಳಿ ಕೆಲವರು ಇಸ್ಲಾಂ ಧರ್ಮದ ಬೋಧನೆಯನ್ನು ಉತ್ತೇಜಿಸುವ ಮತ್ತು ಅವರ ಧಾರ್ಮಿಕ ನಂಬಿಕೆಗಳನ್ನು ವಿವರಿಸುವ ಕರಪತ್ರಗಳನ್ನು ಹಂಚುತ್ತಿದ್ದರು, ಅಲ್ಲದೆ, ಉದ್ಯೋಗಾವಕಾಶ ಕಲ್ಪಿಸುತ್ತೇವೆ ಎಂದು ಜನರನ್ನು ಇಸ್ಲಾಂ ಧರ್ಮದೆಡೆ ಆಕರ್ಷಿತರನ್ನಾಗಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ರಮೇಶ್‌ ಮಲ್ಲಪ್ಪ ನಾವಿ ಎಂಬವರು ದೂರು ನೀಡಿದ್ದರು. ಈ ದೂರಿನ್ವಯ ಜಮಖಂಡಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X