Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಲುಲು ಮಾಲ್‌ನಲ್ಲಿ ರಾಷ್ಟ್ರಧ್ವಜಕ್ಕೆ...

ಲುಲು ಮಾಲ್‌ನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ಎಂದು ಸುಳ್ಳು ಸುದ್ದಿ ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಿರುದ್ಧ FIR

ವಾರ್ತಾಭಾರತಿವಾರ್ತಾಭಾರತಿ14 Oct 2023 4:25 PM IST
share
ಲುಲು ಮಾಲ್‌ನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ಎಂದು ಸುಳ್ಳು ಸುದ್ದಿ ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಿರುದ್ಧ FIR

ಬೆಂಗಳೂರು: ಕೇರಳದ ಕೊಚ್ಚಿ ನಗರದಲ್ಲಿರುವ ಲುಲು ಮಾಲ್‌ನಲ್ಲಿ ಭಾರತದ ಧ್ವಜಕ್ಕೆ ಅಗೌರವ ತೋರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕಾಗಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೇರಳದ ಲುಲು ಮಾಲ್‌ನಲ್ಲಿ ಭಾರತದ ರಾಷ್ಟ್ರಧ್ವಜಕ್ಕಿಂತ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ದೊಡ್ಡದಾಗಿ ಇರಿಸಲಾಗಿದೆ ಎಂಬ ಫೋಟೋಗಳು ಮತ್ತು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದೇ ರೀತಿಯ ಪೋಸ್ಟ್‌ ಹಂಚಿಕೊಂಡಿರುವ ಆಕೆ ʼʼಭಾರತದ ಬಾವುಟಕ್ಕಿಂತ ಬೇರೆ ಯಾವುದೇ ಬಾವುಟ ಎತ್ತರದಲ್ಲಿ ಇರಬಾರದು ಅನ್ನೋ ಸಾಮಾನ್ಯ ಜ್ಞಾನ ಇಲ್ಲವೇ? ನಿಮ್ಮ ಮಾಲ್​ನವರಿಗೆ ಎಂದು ಪ್ರಶ್ನೆ ಮಾಡಿದ್ದಾರೆ. ಇದರ ಜತೆಗೆ ಬೆಂಗಳೂರಿನ ಲುಲು ಮಾಲ್​ ಬಹಿಷ್ಕರಿಸಿʼʼ ಎಂದು ಹ್ಯಾಷ್​ಟ್ಯಾಗ್​ ಬಳಸಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರಿಗೆ ಟ್ಯಾಗ್​ ಮಾಡಿದ್ದಾಳೆ.

ಬಿಜೆಪಿ ಕಾರ್ಯಕರ್ತೆಯ ಈ ಪೋಸ್ಟ್ ನಕಲಿ ಮತ್ತು ಸುಳ್ಳು ಎಂದು ಸತ್ಯ ಪರಿಶೀಲನಾ ವಿಭಾಗ ಖಚಿತಪಡಿಸಿದ್ದು, ನಂತರ ಆಕೆಯ ವಿರುದ್ಧ ತುಮಕೂರು ನಗರದ ಜಯನಗರ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್ 153 (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಸಹ ನೀಡಿದ್ದಾರೆ.

ಉಡುಪಿ ಖಾಸಗಿ ಕಾಲೇಜಿನ ವೀಡಿಯೊ ಪ್ರಕರಣವನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿ, ಬಂಧನಕ್ಕೊಳಗಾದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಸಾಮಾಜಿಕ ಜಾಲತಾಣಗಳಲ್ಲಿ ಈ ಥರ ಸುಳ್ಳು ಸುದ್ದಿ, ವಿವಾದಾತ್ಮಕ ಪೋಸ್ಟ್ ಗಳನ್ನು ಹಂಚಿರುವುದು ಇದೇ ಮೊದಲಲ್ಲ.

► ಒಡಿಶಾದಲ್ಲಿ ನಡೆದ ರೈಲು ಅಪಘಾತ ಪ್ರಕರಣಕ್ಕೆ ಕೋಮು ಬಣ್ಣ ನೀಡಿದ್ದ ಶಕುಂತಲಾ

250ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿರುವ ಜೂನ್ 2 ರಂದು ನಡೆದ ಒಡಿಶಾದ ರೈಲು ಅಪಘಾತ ಪ್ರಕರಣಕ್ಕೆ ಕೋಮು ಬಣ್ಣ ನೀಡಿದ್ದ ಆಕೆ, ಹಳಿಯ ಬಳಿ ಮಸೀದಿಯಿತ್ತು. ಘಟನೆಗೆ ಮಸೀದಿ ಪಕ್ಕದಲ್ಲಿ ಇರುವುದು ಕಾರಣ ಎಂದು ಬಿಂಬಿಸುವ ಅರ್ಥದಲ್ಲಿ ಫೋಟೊವೊಂದನ್ನು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಳು. ವಾಸ್ತವದಲ್ಲಿ ಅದು ಮಸೀದಿಯಾಗಿರಲಿಲ್ಲ, ಇಸ್ಕಾನ್‌ ದೇವಾಲಯವಾಗಿತ್ತು. ಅಲ್ಲಿ ಮಸೀದಿ ಇರಲೇ ಇಲ್ಲ. ಈ ಬಗ್ಗೆ altnews.in ಸೇರಿ ಹಲವು ಸುದ್ದಿ ಸಂಸ್ಥೆಗಳು ಫ್ಯಾಕ್ಟ್ ಚೆಕ್ ಮಾಡಿ ಶಕುಂತಲಾ ಸುಳ್ಳನ್ನು ಬಯಲು ಮಾಡಿದ್ದವು.

ಅಲ್ಲದೇ, ಈ ಘಟನೆಗೆ 'ಕೋಮು ಆಯಾಮ' ನೀಡಲು ಪ್ರಯತ್ನಿಸಿದ್ದ ಶಕುಂತಲಾ ವಿರುದ್ಧ ಒಡಿಶಾ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ >>> Fact Check: ಲುಲು ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ದೊಡ್ಡ ಗಾತ್ರದಲ್ಲಿ ಪಾಕ್‌ ಧ್ವಜ ಹಾರಿಸಲಾಗಿದೆಯೇ?



share
ವಾರ್ತಾಭಾರತಿ
ವಾರ್ತಾಭಾರತಿ
Next Story
X