ಬೆದರಿಕೆ, ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ ಆರೋಪ; ಬಿಜೆಪಿ ಶಾಸಕ ಮುನಿರತ್ನ ವಿರುದ್ದ FIR ದಾಖಲು

ಮುನಿರತ್ನ
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಹೆಸರನ್ನು ಬಹಿರಂಗಪಡಿಸಿದ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಯಶವಂತಪುರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಈ ಹಿಂದೆ ಶಾಸಕ ಮುನಿರತ್ನ ವಿರುದ್ದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಸಂತ್ರಸ್ತೆಯ ಗುರುತನ್ನು ಈಗ ಮುನಿರತ್ನ ಸಾರ್ವಜನಿಕವಾಗಿ ಹೇಳಿದ್ದಾರೆ ಎಂದು ದೂರು ನೀಡಲಾಗಿದೆ.
ಇದರ ಜೊತೆ ಸಂತ್ರಸ್ತೆಗೆ ಜೀವ ಬೆದರಿಕೆಯನ್ನು ಹಾಕಲಾಗಿದೆ ಎಂದು ಮುನಿರತ್ನ ವಿರುದ್ದ ನೀಡಲಾಗಿರುವ ದೂರಿನಲ್ಲಿ ಆರೋಪಿಸಲಾಗಿದೆ.
Next Story




