Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ ಮೊದಲ...

ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ ಮೊದಲ ಸರಕಾರಿ ಪ್ರೋಟಾನ್ ಚಿಕಿತ್ಸಾ ಘಟಕ ಸ್ಥಾಪನೆ

ಕೇಂದ್ರ ಸಚಿವ ಜೆಪಿ ನಡ್ಡಾಗೆ 500 ಕೋಟಿ ರೂ. ಅನುದಾನಕ್ಕೆ ಮನವಿ : ಡಾ.ಶರಣ ಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ9 Jun 2025 6:39 PM IST
share
ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ ಮೊದಲ ಸರಕಾರಿ ಪ್ರೋಟಾನ್ ಚಿಕಿತ್ಸಾ ಘಟಕ ಸ್ಥಾಪನೆ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕತೆ ಹಾಗೂ ವಿಶೇಷ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯಲ್ಲಿ (ಕೆಎಂಐಒ) ದೇಶದಲ್ಲೇ ಮೊದಲ ಬಾರಿಗೆ ಪ್ರೋಟಾನ್ ಚಿಕಿತ್ಸಾ ಸೌಲಭ್ಯವನ್ನು ಸ್ಥಾಪಿಸಲು ಮುಂದಾಗಿದೆ.

ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರೊಂದಿಗಿನ ಸಭೆಯಲ್ಲಿ ಈ ಸುಧಾರಿತ ಚಿಕಿತ್ಸಾ ಸೌಲಭ್ಯವನ್ನು ಕಿದ್ವಾಯಿ ಸಂಸ್ಥೆಯಲ್ಲಿ ಸ್ಥಾಪಿಸಲು ಕೇಂದ್ರದಿಂದ 500 ಕೋಟಿ ರೂ.ಅನುದಾನ ಕೋರಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಪ್ರಸ್ತಾವನೆಯನ್ನು ಸಲ್ಲಿಸಿದರು.

ಭಾರತದ ಪ್ರಮುಖ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಒಂದಾದ ಕೆಎಂಐಒದಲ್ಲಿ ವಾರ್ಷಿಕವಾಗಿ 21 ಸಾವಿರಕ್ಕೂ ಹೆಚ್ಚು ಹೊಸ ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿದೆ. ವಿಕಿರಣ ಚಿಕಿತ್ಸೆಯಲ್ಲಿ ಗೆಡ್ಡೆಯ ಅಕ್ಕಪಕ್ಕದ ಭಾಗಗಳಿಗೂ ಪರಿಣಾಮವಾಗುವ ಸಾಧ್ಯತೆ ಇರುತ್ತದೆ. ಆದರೆ ಸುಧಾರಿತ ರೂಪವಾದ ಪ್ರೋಟಾನ್ ಚಿಕಿತ್ಸೆಯು ಗೆಡ್ಡೆಯ ಬಳಿ ನಿರ್ಣಾಯಕ ಅಂಗಗಳಿಗೆ ಯಾವುದೇ ರೀತಿಯ ಹಾನಿ ಮಾಡುವುದಿಲ್ಲ. ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ದೀರ್ಘಕಾಲೀನ ಅಡ್ಡಪರಿಣಾಮಗಳನ್ನು ಕಡಿಮೆ ಮಾಡುತ್ತದೆ ಎಂದು ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಗಾಮಾ ಕಿರಣಗಳು ಅಥವಾ ಎಕ್ಸ್-ಕಿರಣಗಳನ್ನು ಬಳಸುವುದು ಸಾಂಪ್ರದಾಯಿಕ ರೇಡಿಯೊ ಥೆರಪಿಗಿಂತ ಭಿನ್ನವಾಗಿರುತ್ತದೆ. ಪ್ರೋಟಾನ್ ಚಿಕಿತ್ಸೆಯು ನಿಖರವಾಗಿ ಸಮಸ್ಯೆ ಇರುವ ಜಾಗಕ್ಕೆ ಮಾತ್ರ ಚಿಕಿತ್ಸೆ ಒದಗಿಸುತ್ತದೆ. ಇದರಿಂದ ಹಾನಿ ಪ್ರಮಾಣ ಕಡಿಮೆ ಎಂದು ಅವರು ಹೇಳಿದ್ದಾರೆ.

ಈ ಪ್ರಸ್ತಾವನೆಯು ಮಕ್ಕಳ ಕ್ಯಾನ್ಸರ್ ಪ್ರಕರಣಗಳು, ವಿಶೇಷವಾಗಿ ಎನ್.ಎಫ್-1 ಮತ್ತು ರೆಟಿನೋಬ್ಲಾಸ್ಟೊಮಾದಂತಹ ಆನುವಂಶಿಕ ಪ್ರಕಾರಗಳು ಮತ್ತು ಕಣ್ಣು, ಕಕ್ಷೆ, ತಲೆಬುರುಡೆಯ ಬುಡ, ಬೆನ್ನುಮೂಳೆ, ಯಕೃತ್ತು, ಪ್ರಾಸ್ಟೇಟ್, ಸ್ತನ, ತಲೆ ಮತ್ತು ಕುತ್ತಿಗೆ ಮತ್ತು ಪ್ಯಾರಾನಾಸಲ್ ಸೈನಸ್‍ಗಳ ಕ್ಯಾನ್ಸರ್‍ಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಇತರ ಮಾರಕ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತದೆ. ಮರು-ವಿಕಿರಣ ಪ್ರಕರಣಗಳು ಮತ್ತು ತೆಗೆದುಹಾಕಲಾಗದ ಗೆಡ್ಡೆಗಳ ಪ್ರಕರಣಗಳಿಗೂ ಬಳಸಬಹುದಾಗಿದೆ. ಇದರಿಂದ ವಾಸಿಯಾಗುವ ಭರವಸೆ ಹೆಚ್ಚಾಗಿರುತ್ತದೆ ಎಂದು ಶರಣ ಪ್ರಕಾಶ್ ಪಾಟೀಲ್ ವಿವರಿಸಿದ್ದಾರೆ.

2025ರ ವೇಳೆಗೆ ಭಾರತದಲ್ಲಿ 1.2 ಲಕ್ಷಕ್ಕೂ ಹೆಚ್ಚು ರೋಗಿಗಳಿಗೆ ಪ್ರೋಟಾನ್ ಚಿಕಿತ್ಸೆಯ ಅಗತ್ಯವಿರಬಹುದು ಎಂದು ಅಂದಾಜಿಸಲಾಗಿದೆ. ಕೆಎಂಐಓ ನಲ್ಲಿರುವ ಈ ಸೌಲಭ್ಯವು ಅತ್ಯಾಧುನಿಕ ಕ್ಯಾನ್ಸರ್ ಆರೈಕೆಯನ್ನು ಒದಗಿಸುವುದಲ್ಲದೆ, ನಿಮ್ಹಾನ್ಸ್ ಮತ್ತು ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಿಂದ ಉಲ್ಲೇಖಿತ ಪ್ರಕರಣಗಳಿಗೂ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರೋಟಾನ್ ಚಿಕಿತ್ಸೆಯ ಪ್ರಮುಖ ಪ್ರಯೋಜನಗಳು: ಮಕ್ಕಳ ಮತ್ತು ಆನುವಂಶಿಕ ಗೆಡ್ಡೆಗಳಿಗೆ ಹೆಚ್ಚು ಪರಿಣಾಮಕಾರಿ, ಚಿಕಿತ್ಸೆಯ ನಂತರ ವೇಗವರ್ಧಿತ ಚೇತರಿಕೆ, ದ್ವಿತೀಯಕ ಕ್ಯಾನ್ಸರ್‍ಗಳ ಸಾಧ್ಯತೆ ಕಡಿಮೆ ಹಾಗೂ ದೀರ್ಘಾವಧಿಯ ಬದುಕುಳಿಯುವಿಕೆಯ ಪ್ರಯೋಜನಗಳಿವೆ ಎಂದು ಶರಣ ಪ್ರಕಾಶ್ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X