ಐದು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯ ಸರಕಾರವು ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರಕಾರದ ಕಾರ್ಯದರ್ಶಿ ಡಿ.ರಣದೀಪ್ ಅವರಿಗೆ ಸಮಾಜ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕ ನಿತೇಶ್ ಪಾಟೀಲ್ ಅವರನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಆರ್.ರಾಮಚಂದ್ರನ್ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ಕಾರ್ಯಕಾರಿ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ಸತೀಶ ಬಿ.ಸಿ. ಅವರನ್ನು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕರನ್ನಾಗಿ, ಡಾ.ಎಂ.ಎಸ್.ದಿವಾಕರ್ ಅವರನ್ನು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೇ. ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕರ ಹೆಚ್ಚುವರಿ ಹೊಣೆಗಾರಿಕೆಯನ್ನು ದಿವಾಕರ್ ಅವರಿಗೆ ವಹಿಸಲಾಗಿದೆ.





