Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಬಿಎಲ್‍ಒಗಳಿಂದ ಕಚೇರಿಯಿಂದಲೆ ಗಣತಿ...

‘ಬಿಎಲ್‍ಒಗಳಿಂದ ಕಚೇರಿಯಿಂದಲೆ ಗಣತಿ ನಮೂನೆ ವಿತರಣೆ ಆರೋಪ’: ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 July 2026 9:25 PM IST
share
‘ಬಿಎಲ್‍ಒಗಳಿಂದ ಕಚೇರಿಯಿಂದಲೆ ಗಣತಿ ನಮೂನೆ ವಿತರಣೆ ಆರೋಪ’: ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ

ಬೆಂಗಳೂರು: ಬೂತ್ ಮಟ್ಟದ ಅಧಿಕಾರಿ(ಬಿಎಲ್‍ಒ)ಗಳು ಮನೆ ಮನೆಗೆ ಭೇಟಿ ನೀಡಿ ಗಣತಿ(ಎನ್ಯುಮರೇಷನ್) ನಮೂನೆಗಳನ್ನು ವಿತರಣೆ ಮಾಡಬೇಕು. ಈ ನಿಟ್ಟಿನಲ್ಲಿ ಭಾರತದ ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಸೂಚಿಸಿದ್ದಾರೆ.

ಜಿಬಿಎ ಮುಖ್ಯ ಆಯುಕ್ತ, ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ, ಎಲ್ಲ ಜಿಲ್ಲೆಗಳ ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಬಿಎ ವಿಶೇಷ ಆಯುಕ್ತರು(ಚುನಾವಣೆ), ಬಿಬಿಎಂಪಿ ಕೇಂದ್ರ, ಉತ್ತರ ಹಾಗೂ ದಕ್ಷಿಣ ಚುನಾವಣಾ ಜಿಲ್ಲೆಗಳ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಬೆಂಗಳೂರು ನಗರ ಪಾಲಿಕೆಗಳ(ಉತ್ತರ, ದಕ್ಷಿಣ ಹಾಗೂ ಕೇಂದ್ರ) ಆಯುಕ್ತರಿಗೆ ಅವರು ಈ ಸಂಬಂಧ ಪತ್ರ ಬರೆದಿದ್ದಾರೆ.

ಭಾರತದ ಚುನಾವಣಾ ಆಯೋಗವು ಹೊರಡಿಸಿರುವ ನಿರ್ದೇಶನಗಳು, ಮಾರ್ಗಸೂಚಿಗಳು ಹಾಗೂ ವೇಳಾಪಟ್ಟಿಯಂತೆ ರಾಜ್ಯದಲ್ಲಿ ಮತದಾರರಿಗೆ ಗಣತಿ ನಮೂನೆಗಳ ವಿತರಣೆ ಜೂ.30ರಿಂದ ಆರಂಭವಾಗಿದೆ. ಆದರೆ, ಕೆಲವು ದೂರುಗಳು ಬಂದಿದ್ದು, ಬೂತ್ ಮಟ್ಟದ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡದೆ ಕಚೇರಿಗಳಿಂದಲೆ ನಮೂನೆಗಳನ್ನು ವಿತರಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೇಲ್ಕಂಡ ದೂರುಗಳ ಹಿನ್ನೆಲೆಯಲ್ಲಿ, ಎಲ್ಲ ಬೂತ್ ಮಟ್ಟದ ಅಧಿಕಾರಿಗಳಿಗೆ ಮನೆಮನೆಗೆ ಭೇಟಿ ನೀಡಿ, ಭಾರತದ ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಗಣತಿ ನಮೂನೆಗಳನ್ನು ವಿತರಿಸುವಂತೆ ಅಗತ್ಯ ನಿರ್ದೇಶನಗಳನ್ನು ನೀಡಬೇಕು. ಜೊತೆಗೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‍ಐಆರ್) ಕಾರ್ಯಕ್ರಮದ ಎಲ್ಲ ಅಂಶಗಳಲ್ಲಿ ಚುನಾವಣಾ ಆಯೋಗದ ನಿರ್ದೇಶನಗಳು ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಅನ್ಬುಕುಮಾರ್ ಹೇಳಿದ್ದಾರೆ.

ಇದಲ್ಲದೆ, ಗಣತಿ ನಮೂನೆಗಳನ್ನು ಭರ್ತಿ ಮಾಡಲು ತೊಂದರೆ ಅನುಭವಿಸುವ ಮತದಾರರು ಅಗತ್ಯ ಸಹಾಯಕ್ಕಾಗಿ ಮತದಾರರ ಸೌಲಭ್ಯ ಕೇಂದ್ರಗಳಿಗೆ (Voter Facilitation Centres) ಭೇಟಿ ನೀಡುವ ಅವಕಾಶವಿದ್ದು, ಈ ಸೌಲಭ್ಯದ ಕುರಿತು ವ್ಯಾಪಕವಾಗಿ ಜನಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದ್ದಾರೆ.

Tags

SIRElection Commission
share
ವಾರ್ತಾಭಾರತಿ
ವಾರ್ತಾಭಾರತಿ
Next Story
X