Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚಾಮರಾಜನಗರ: ಕಾಡಾನೆ ಜೊತೆ ಸೆಲ್ಫಿ...

ಚಾಮರಾಜನಗರ: ಕಾಡಾನೆ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಇಬ್ಬರು ಪ್ರವಾಸಿಗರಿಗೆ 20 ಸಾವಿರ ರೂ. ದಂಡ

ವಾರ್ತಾಭಾರತಿವಾರ್ತಾಭಾರತಿ6 July 2023 8:00 PM IST
share
ಚಾಮರಾಜನಗರ: ಕಾಡಾನೆ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಇಬ್ಬರು ಪ್ರವಾಸಿಗರಿಗೆ 20 ಸಾವಿರ ರೂ. ದಂಡ

ಚಾಮರಾಜನಗರ : ಕಾಡಾನೆ ಜೊತೆ ಸೆಲ್ಪಿ ಕ್ಲಿಕ್ಕಿಸಿಕೊಂಡ ಇಬ್ಬರು ಪ್ರವಾಸಿಗರಿಗೆ ಅರಣ್ಯ ಇಲಾಖೆ 20 ಸಾವಿರ ದಂಡ ವಿಧಿಸಿದೆ. ತೆಲಂಗಾಣ ನಿಜಾಂಪೇಟೆ ನಿವಾಸಿಗಳಾದ ದಿಲೀಪ್ ಕುಮಾರ್ (42) ಹಾಗೂ ಶ್ಯಾಂಪ್ರಸಾದ್(31) ಎಂಬವರಿಗೆ ದಂಡ ವಿಧಿಸಿದೆ.

ಬುಧವಾರ ಸಂಜೆ ಈ ಇಬ್ಬರು ತಮ್ಮ ಕಾರಿನಲ್ಲಿ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಮೂಲಕ ಕೊಯಮತ್ತೂರಿಗೆ ತೆರಳುತ್ತಿದ್ದರು. ಈ ವೇಳೆ ಆಸನೂರು ಬಳಿ ರಸ್ತೆ ಬದಿಯಲ್ಲಿ ಕಾಡಾನೆ ನಿಂತಿದ್ದನ್ನು ಕಂಡಿದ್ದಾರೆ. ಈ ವೇಳೆ ಕಾರಿನಿಂದ ಇಳಿದ ಇವರು ಕಾಡಾನೆಯ ತೀರಾ ಸಮೀಪ ಹೋಗಿ ಸೆಲ್ಪಿ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನು ಗಸ್ತು ತಿರುಗುತ್ತಿದ್ದ ತಮಿಳುನಾಡಿನ ಅರಣ್ಯ ಇಲಾಖೆ ಸಿಬ್ಬಂದಿ ಕಂಡಿದ್ದಾರೆ. ಇನ್ನೇನೂ ವಿಚಾರಿಸಬೇಕು ಎನ್ನುವಷ್ಟರಲ್ಲಿ ಇಬ್ಬರು ಕಾರು ಹತ್ತಿ ಪರಾರಿಯಾಗಿದ್ದರು. ಬಳಿಕ, ಈ ಬಗ್ಗೆ ಬಣ್ಣಾರಿ ಚೆಕ್ ಪೋಸ್ಟ್ ಗೆ ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ರವಾನಿಸಿದ್ದಾರೆ. ಅಲ್ಲಿ ಇವರ ಕಾರನ್ನು ಅಡ್ಡ ಹಾಕಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೇಜವಾಬ್ದಾರಿ ತೋರಿದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರಿಗೂ ತಲಾ 10 ಸಾವಿರ ರೂ. ದಂಡ ವಿಧಿಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆಸನೂರು ವಲಯ ಅರಣ್ಯಾಧಿಕಾರಿ ಪಾಂಡಿರಾಜನ್,' 'ರಾಷ್ಟ್ರೀಯ ಹೆದ್ದಾರಿಯಲ್ಲಿ ಆಗಾಗ್ಗೆ ಕಾಡಾನೆ ಕಾಣಿಸಿಕೊಳ್ಳುತ್ತದೆ. ವಾಹನ ಸವಾರರು ಆದಷ್ಟು ಜಾಗರೂಕರಾಗಿ ವಾಹನ ಚಾಲನೆ ಮಾಡಬೇಕು. ಕೆಲವರು‌ ಕೀಟಲೆ ಮಾಡಿ, ಫೋಟೋ ವಿಡಿಯೋ ತೆಗೆದುಕೊಳ್ಳಲು ಹೋಗಿ ಪ್ರಾಣಕ್ಕೇ ಕುತ್ತು ತಂದುಕೊಳ್ಳುತ್ತಿದ್ದಾರೆ. ಈ ರೀತಿ ಕಾಡಾನೆ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ತೆಲಂಗಾಣದ ಇಬ್ಬರಿಗೆ ದಂಡ ವಿಧಿಸಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X