Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅರಣ್ಯ ಒತ್ತುವರಿ | ನ್ಯಾಯಾಲಯದಲ್ಲಿ...

ಅರಣ್ಯ ಒತ್ತುವರಿ | ನ್ಯಾಯಾಲಯದಲ್ಲಿ ಇತ್ಯರ್ಥವಾಗಿರುವ ಪ್ರಕರಣಗಳಲ್ಲಿ ಮಾತ್ರ ತೆರವು : ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ13 Aug 2024 9:11 PM IST
share
ಅರಣ್ಯ ಒತ್ತುವರಿ | ನ್ಯಾಯಾಲಯದಲ್ಲಿ ಇತ್ಯರ್ಥವಾಗಿರುವ ಪ್ರಕರಣಗಳಲ್ಲಿ ಮಾತ್ರ ತೆರವು : ಈಶ್ವರ್ ಖಂಡ್ರೆ

ಬೆಂಗಳೂರು: ಅರಣ್ಯ ಭೂಮಿ ಒತ್ತುವರಿ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದರೂ ತೆರವಾಗಿರದ ಒತ್ತುವರಿಗಳನ್ನು ಮಾತ್ರ ತೆರವುಗೊಳಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಈ ಬಗ್ಗೆ ರೈತರು ಆತಂಕ ಪಡುವ ಅಗತ್ಯ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ತಮ್ಮನ್ನು ಭೇಟಿಯಾದ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ನೇತೃತ್ವದ ಜನಪ್ರತಿನಿಧಿಗಳ ಮತ್ತು ಮಲೆನಾಡು ಕರಾವಳಿ ಜನಪರ ಒಕ್ಕೂಟದ ಪ್ರತಿನಿಧಿಗಳ ನಿಯೋಗಕ್ಕೆ ಅವರು ಈ ಭರವಸೆ ನೀಡಿದ್ದಾರೆ.

ಒತ್ತುವರಿ ತೆರವುಗೊಳಿಸುವ ಕುರಿತು ಈಗಾಗಲೇ ಸ್ಪಷ್ಟವಾಗಿ ಆದೇಶ ಕೊಟ್ಟಿದ್ದೇನೆ. ಒತ್ತುವರಿ ಪ್ರಕರಣ ನ್ಯಾಯಾಲಯದಲ್ಲಿ ಇತ್ಯಾರ್ಥವಾಗಿದ್ದರೂ ತೆರವಾಗದೆ ಇರುವ ಬಗ್ಗೆ ನ್ಯಾಯಾಲಯ ಸರಕಾರಕ್ಕೆ ನೋಟಿಸ್ ನೀಡುತ್ತಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಆದುದರಿಂದ, ಇಂತಹ ಒತ್ತುವರಿಗಳನ್ನು ಹಾಗೂ 2015ರ ನಂತರ ಅತಿಕ್ರಮಣವಾಗಿರುವುದನ್ನು ಮಾತ್ರ ತೆರವಿಗೆ ಸೂಚನೆ ನೀಡಲಾಗಿದೆ. ಉಳಿದಂತೆ 3 ಎಕರೆ ಒಳಗಿನ ಒತ್ತುವರಿ, ಇತರೆ ಅರ್ಜಿಗಳು, ವಿಲೇವಾರಿ ಆಗದೆ ಇರುವ ಒತ್ತುವರಿಗಳನ್ನು ಮುಟ್ಟಬಾರದು ಎಂದು ಸೂಚಿಸಿರುವುದಾಗಿ ಅವರು ಹೇಳಿದರು.

ಒತ್ತುವರಿ ತೆರವುಗೊಳಿಸುವಂತೆ ಸಚಿವರು ನೀಡಿದ ಸೂಚನೆಗಳಿಂದಾಗಿ ಮಲೆನಾಡಿಗರಲ್ಲಿ ಆತಂಕವಿದ್ದು ಸಣ್ಣ ಹಾಗೂ ಅತೀ ಸಣ್ಣ ರೈತರು ಹಾಗೂ ಮನೆಗಳನ್ನು ಕಟ್ಟಿಕೊಂಡವರೆಲ್ಲ ಭಯ ಭೀತಾರಾಗಿದ್ದಾರೆ ಎಂದು ನಿಯೋಗವು ಸಚಿವರ ಗಮನ ಸೆಳೆಯಿತು.

ಅರಣ್ಯ ಇಲಾಖೆಯ ಈ ನಿಲುವಿನಿಂದಾಗಿ ಹಳ್ಳಿಗಳಲ್ಲಿ ಸಣ್ಣ ಪುಟ್ಟ ರೈತರ ಮೇಲೆ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ. ಹಾಗಾಗಿ ನಿಮ್ಮ ಸ್ಪಷ್ಟವಾದ ನಿಲುವನ್ನು ತಿಳಿಸಬೇಕು. ಅಲ್ಲದೆ, ನ್ಯಾಯಾಲಯದಲ್ಲಿ ಇತ್ಯರ್ಥವಾಗಿರುವ ಕೃಷಿ ಭೂಮಿಯನ್ನು ಮುಂದಿನ ಫಸಲು ಕುಯ್ಯುವವವರೆಗೆ ತೆರವು ಮಾಡಬಾರದು ಎಂದು ನಿಯೋಗ ಮನವಿ ಮಾಡಿಕೊಂಡಿತು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಈಶ್ವರ್ ಖಂಡ್ರೆ, ನಿಮ್ಮೆಲ್ಲರ ಕೋರಿಕೆ ಮೇರೆಗೆ ಇನ್ನೊಂದು ಸ್ಪಷ್ಟವಾದ ಸೂಚನೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೀಡುವುದಾಗಿ ಭರವಸೆ ಕೊಟ್ಟರು. ಯಾವುದನ್ನು ತೆರವು ಮಾಡಬೇಕು ಹಾಗೂ ಯಾವುದನ್ನು ತೆರವು ಮಾಡಬಾರದು ಮತ್ತು ಏತಕ್ಕಾಗಿ ಒತ್ತುವರಿ ತೆರವು ಮಾಡುತ್ತಿದ್ದೇವೆ ಎಂಬ ಸ್ಪಷ್ಟ ಮಾಹಿತಿಯನ್ನು ಅಧಿಕಾರಿಗಳು ಹಾಗೂ ಜನಸಾಮಾನ್ಯರಿಗೆ ತಲುಪುವಂತೆ ವ್ಯವಸ್ಥೆ ಮಾಡುತ್ತೇನೆ ಎಂಬ ಆಶ್ವಾಸನೆಯನ್ನೂ ನಿಯೋಗಕ್ಕೆ ನೀಡಿದರು.

ಒತ್ತುವರಿ ಮಾಡಿಕೊಂಡು ಕೃಷಿ ಮಾಡುತ್ತಿದ್ದಲ್ಲಿ, ಫಸಲನ್ನು ಪಡೆಯಲು ಅವಕಾಶ ಮಾಡಿಕೊಡಲು, ಸದ್ಯ ಜಾಗದ ಗಡಿ ಗುರುತಿಸಿ ಈಗ ಬಂದಿರುವ ಫಸಲನ್ನು ರೈತರು ಕೊಯ್ಲು ಮಾಡುವವರೆಗೂ ಕಾದು, ನಂತರ ಒತ್ತವರಿ ತೆರವು ಮಾಡಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಪಾರಂಪರಿಕ ಅರಣ್ಯ ಕಾಯ್ದೆಗೆ ತಿದ್ದುಪಡಿ ಮಾಡಲು ವಿಧಾನಸಭೆಯಲ್ಲಿ ನಿರ್ಣಯ ಮಾಡಿ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿರುವುದಕ್ಕೆ ಈ ನಿಯೋಗವು ಸಚಿವರಿಗೆ ಕೃತಜ್ಞತೆ ಸಲ್ಲಿಸಿತು. ಈ ವಿಚಾರವಾಗಿ ಕೇಂದ್ರದ ಮೇಲೆ ಸರಕಾರವು ಒತ್ತಡ ಹೇರಲು ನಿಯೋಗ ಕರೆದುಕೊಂಡು ಹೋಗುವಂತೆಯೂ ಮನವಿ ಮಾಡಿಕೊಂಡಿತು.

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ನೇತೃತ್ವದ ಈ ನಿಯೋಗದಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ತರಿಕೆರೆ ಶಾಸಕ ಶ್ರೀನಿವಾಸ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಪರಿಷತ್ ಮಾಜಿ ಸದಸ್ಯ ಗೋಪಾಲಸ್ವಾಮಿ, ಗುಂಡ್ಲು ಪೇಟೆ ಶಾಸಕ ಗಣೇಶ್ ಹಾಗೂ ಮಲೆನಾಡು ಜನಪರ ಒಕ್ಕೂಟದ ಅನಿಲ್ ಹೊಸಕೊಪ್ಪ, ಸುಕೇಶ್ ದಾಸನಕೋಡಿ ನಿಯೋಗದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X