Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅರಣ್ಯ ಭೂಮಿ ಒತ್ತುವರಿ ಮಾಡಿದರೆ ಕಠಿಣ...

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ಕಠಿಣ ಕ್ರಮ: ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ

ಇಲಾಖೆಯ ಲಾಂಛನ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ26 Jun 2023 6:36 PM IST
share
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ಕಠಿಣ ಕ್ರಮ: ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ

ಬೆಂಗಳೂರು, ಜೂ.26: ಅರಣ್ಯ, ಸಸ್ಯ, ಪ್ರಾಣಿ, ಪಕ್ಷಿ ಸಂಕುಲದ ಸಂರಕ್ಷಣೆಯೆ ಅರಣ್ಯ ಇಲಾಖೆಯ ಆದ್ಯ ಕರ್ತವ್ಯವಾಗಿದ್ದು, ಅರಣ್ಯ ವ್ಯಾಪ್ತಿಯಲ್ಲಿ ಯಾರೇ ಅಕ್ರಮವಾಗಿ ಮರ ಕಡಿದರೂ, ಅರಣ್ಯ ಭೂಮಿ ಒತ್ತುವರಿ ಮಾಡಿದರೂ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದರು.

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಅರಣ್ಯನಾಶ ಮತ್ತು ವನ್ಯ ಮೃಗಗಳ ಸಾವು, ಮಾನವ-ಮೃಗ ಸಂಘರ್ಷದ ವಿಚಾರ ಬಹಳ ಗಂಭೀರವಾದದ್ದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದರು.

ಅರಣ್ಯಕ್ಕೆ ಎದುರಾಗುವ ಪ್ರಮುಖ ಆಪತ್ತು ಕಾಡ್ಗಿಚ್ಚು. ಈ ಕಾಡ್ಗಿಚ್ಚು ಉದ್ದೇಶಪೂರ್ವಕವಾದದ್ದೊ, ಸ್ವಾಭಾವಿಕವಾದದ್ದೊ ಎಂಬುದು ಮುಖ್ಯವಾಗುತ್ತದೆ. ಕೆಲವೆಡೆ ಮರ ಕಡಿದು ಬುಡಕ್ಕೆ ಬೆಂಕಿ ಹಚ್ಚಿ, ಜೆಸಿಬಿಯಿಂದ ಭೂಮಿ ಮಟ್ಟ ಮಾಡಿ ಅರಣ್ಯ ಭೂಮಿ ಕಬಳಿಸಲಾಗುತ್ತಿದೆ ಎಂಬ ಆರೋಪ ಇದೆ. ಈ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಮಾನವ ಮತ್ತು ಕಾಡು ಮೃಗಗಳ ನಡುವಿನ ಸಂಘರ್ಷ ದೊಡ್ಡ ಸವಾಲಾಗಿದೆ. ರಾಜ್ಯದಲ್ಲಿ 2022-23ನೆ ಸಾಲಿನಲ್ಲಿ ವನ್ಯಮೃಗ ದಾಳಿಯಿಂದ 51 ಸಾವು ಸಂಭವಿಸಿದ್ದು, ಇದರಲ್ಲಿ 29 ಸಾವು ಆನೆಗಳಿಂದಲೆ ಆಗಿದೆ ಎಂದು ಮಾಹಿತಿ ಇದೆ. ರಾಜ್ಯದಲ್ಲಿ ಸುಮಾರು 6,030 ಆನೆ ಇದೆ ಎಂದು ಅಂದಾಜು ಮಾಡಲಾಗಿದೆ. ಮನುಷ್ಯರ ಜೀವ ಅಮೂಲ್ಯವಾಗಿದ್ದು, ಅರಣ್ಯ ಇಲಾಖೆ ಜನರಪರ ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.

ಆನೆಗಳು ನಾಡಿಗೆ ಬರುವುದರಿಂದ ಅಪಾಯ ಹೆಚ್ಚು. ರಾಜ್ಯದಲ್ಲಿ ಸುಮಾರು 641 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಲು ಯೋಜನೆ ರೂಪಿಸಲಾಗಿದೆ. ಈ ಪೈಕಿ 310 ಕಿ.ಮೀ. ಪೂರ್ಣವಾಗಿದೆ. ಒಂದು ಕಿ.ಮೀ.ರೈಲ್ವೆ ಬ್ಯಾರಿಕೇಡ್ ಮಾಡಲು ಒಂದೂವರೆ ಕೋಟಿ ವೆಚ್ಚವಾಗುತ್ತದೆ. ಉಳಿದ ಕಾಮಗಾರಿ ಮಾಡಲು ಬಜೆಟ್ ನಲ್ಲಿ ಹೆಚ್ಚಿನ ಹಣ ಕೋರಲಾಗಿದೆ, 3 ವರ್ಷಗಳಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿ ಹಾಕಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕಾಂಪಾ ನಿಧಿ ಬಳಸಿಕೊಂಡು ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ವಿಚಾರದಲ್ಲಿ ಕೇಂದ್ರ ಅರಣ್ಯ ಸಚಿವರಿಗೆ ಕೆಲವು ತಪ್ಪು ಕಲ್ಪನೆ ಇದೆ. ಇದನ್ನು ಇತ್ತೀಚೆಗೆ ನಾನು ದಿಲ್ಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಿಹರಿಸಲು ಪ್ರಯತ್ನಿಸಿದ್ದೇವೆ. ಬ್ಯಾರಿಕೇಡ್ ನಿರ್ಮಾಣಕ್ಕೆ ಏಕೆ ಇಷ್ಟು ವೆಚ್ಚ ಮಾಡುತ್ತೀರಿ ಎಂಬುದು ಅವರ ಪ್ರಶ್ನೆಯಾಗಿದೆ. ಆದರೆ ಮಾನವನ ಜೀವ ಅಮೂಲ್ಯವಾದ್ದು, ಎμÉ್ಟೀ ಹಣ ಕೊಟ್ಟರೂ ಅದು ಮರಳಿ ಬರುವುದಿಲ್ಲ. ನಾವು ಆನೆಗಳು ಕಾಡಿನಿಂದ ನಾಡಿಗೆ ಬಾರದಂತೆ ತಡೆದರೆ ಈ ಅಮೂಲ್ಯ ಜೀವ ಉಳಿಸಬಹುದು ಎಂದು ಅವರಿಗೆ ಮನವರಿಕೆ ಮಾಡಿಸಿದ್ದೇನೆ ಎಂದು ಅವರು ವಿವರಿಸಿದರು.

ಖಾಲಿ ಹುದ್ದೆ ಭರ್ತಿ: ಇಲಾಖೆಯಲ್ಲಿ ಖಾಲಿ ಇರುವ 335 ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಅನುಮೋದನೆ ಪಡೆದು ಶೀಘ್ರವೆ ಅಧಿಸೂಚನೆ ಹೊರಡಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆಯ ಅನುಮತಿಯ ಅಗತ್ಯವಿಲ್ಲ. ಹೀಗಾಗಿ ಈ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಭೂ ಮಾಪಕರ ಕೊರತೆ: ಅರಣ್ಯ ಮತ್ತು ಕಂದಾಯ ಭೂಮಿಯ ಸಮಸ್ಯೆಗೆ ಜಂಟಿ ಸರ್ವೆ ಪರಿಹಾರವಾಗಿದೆ. ಭೂಮಾಪಕರ ಕೊರತೆಯಿಂದ ಇದು ತಡವಾಗಿದೆ. ಅಧಿವೇಶನದ ವೇಳೆ ಕಂದಾಯ ಸಚಿವರೊಂದಿಗೆ ಸಭೆ ನಡೆಸಿ, ಖಾಸಗಿ ಭೂಮಾಪಕರ ನೆರವು ಪಡೆದು 6 ತಿಂಗಳೊಳಗೆ ಜಂಟಿ ಸರ್ವೆ ಮಾಡಿಸಲು ಪ್ರಯತ್ನಿಸಲಾಗುವುದು ಎಂದು ಈಶ್ವರ್ ಖಂಡ್ರೆ ಹೇಳಿದರು.

ಅರಣ್ಯ ವ್ಯಾಪ್ತಿ ಹೆಚ್ಚಳ: ರಾಜ್ಯದಲ್ಲಿ 1.02 ಲಕ್ಷ ಹೆಕ್ಟೇರ್ ಹಸಿರು ವ್ಯಾಪ್ತಿ(ಗ್ರೀನ್ ಕವರ್) ಹೆಚ್ಚಳವಾಗಿದೆ ಎಂದು ಭಾರತೀಯ ಅರಣ್ಯ ಸಮೀಕ್ಷಾ ವರದಿ ಹೇಳಿದೆ. ಪ್ರಸಕ್ತ ರಾಜ್ಯದಲ್ಲಿ ಶೇ.21ರಷ್ಟು ಹಸಿರು ವ್ಯಾಪ್ತಿ ಇದ್ದು, ಇದನ್ನು ಶೇ.33ಕ್ಕೆ ಹೆಚ್ಚಿಸುವುದು ತಮ್ಮ ಗುರಿ. ಜು.1ರಿಂದ 7ರವರೆಗೆ ರಾಜ್ಯದಾದ್ಯಂತ ವನಮಹೋತ್ಸವ ಆಚರಿಸಲಾಗುತ್ತಿದ್ದು, ಈ ಅವಧಿಯಲ್ಲಿ 1 ಕೋಟಿ ಸಸಿ ನೆಡಲು ತೀರ್ಮಾನಿಸಲಾಗಿದೆ. ಈ ವರ್ಷ 5 ಕೋಟಿ ಸಸಿ ನೆಟ್ಟು ಪೆÇೀಷಿಸಲಾಗುವುದು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X