Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಮಲೆ ಮಹದೇಶ್ವರ ಬೆಟ್ಟ ಹುಲಿ ಸಂರಕ್ಷಿತ...

‘ಮಲೆ ಮಹದೇಶ್ವರ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶ’: ಸ್ಥಳೀಯರ ಅಭಿಪ್ರಾಯ ಸಂಗ್ರಹಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ8 July 2025 11:57 PM IST
share
‘ಮಲೆ ಮಹದೇಶ್ವರ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶ’: ಸ್ಥಳೀಯರ ಅಭಿಪ್ರಾಯ ಸಂಗ್ರಹಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟ(ಎಂ.ಎಂ.ಹಿಲ್ಸ್)ದ ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗುತ್ತಿದ್ದು, ಈ ಕಾನನ ಪ್ರದೇಶವನ್ನು ‘ಹುಲಿ ಸಂರಕ್ಷಿತ ಪ್ರದೇಶ’ವಾಗಿ ಘೋಷಿಸಲು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಅರಣ್ಯ ಪಡೆ ಮುಖ್ಯಸ್ಥರು, ಮುಖ್ಯ ವನ್ಯಜೀವಿ ಪರಿಪಾಲಕರು ಸೇರಿದಂತೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಲೆ ಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲು ಕ್ರಮ ವಹಿಸುವಂತೆ ಹಾಗೂ ಎಲ್ಲ ಬಾಧ್ಯಸ್ಥರ ಸಭೆ ಕರೆದು ಚರ್ಚಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ರಾಜ್ಯದಲ್ಲಿ ವನ್ಯಜೀವಿಗಳ ಅಸಹಜ ಸಾವನ್ನು ನಿಯಂತ್ರಿಸಲು ಮತ್ತು ವನ್ಯಮೃಗಗಳ ದಾಳಿಯಿಂದ ಅಮೂಲ್ಯ ಜೀವಹಾನಿ ಆಗುವುದನ್ನು ತಡೆಯಲು ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ, ಆಯಾ ವಲಯದಲ್ಲಿ ಅಧಿಕಾರಿ, ಸಿಬ್ಬಂದಿಗೆ ಹೊಣೆಗಾರಿಕೆ ನಿಗದಿಪಡಿಸುವಂತೆ ಅವರು ನಿರ್ದೇಶನ ನೀಡಿದರು.

ಕೇಂದ್ರೀಕೃತ ಕಮಾಂಡ್ ಸೆಂಟರ್: ರಾಜ್ಯದಲ್ಲಿ ಸುಮಾರು 40 ಸಾವಿರ ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದ್ದು, ಇದನ್ನು ಭೌತಿಕವಾಗಿ ಕಾವಲು ಕಾಯುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ವನ್ಯಜೀವಿಗಳ ಕಳ್ಳಬೇಟೆ ಮತ್ತು ಅರಣ್ಯ ಒತ್ತುವರಿ, ಮರಗಳ ಅಕ್ರಮ ಕಡಿತಲೆ ಆಗದಂತೆ ನಿಗ್ರಹಿಸಲು ಕೃತಕ ಬುದ್ಧಿಮತ್ತೆ, ಡ್ರೋನ್ ಕ್ಯಾಮರಾ, ಕಾಡಿನಂಚಿನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿ ಆ ಎಲ್ಲ ಕ್ಯಾಮರಾಗಳ ದೃಶ್ಯಗಳ ಆಧಾರದಲ್ಲಿ ವನ್ಯಮೃಗ ಮತ್ತು ಕಳ್ಳಬೇಟೆಗಾರರ ಚಲನವಲನದ ಬಗ್ಗೆ ನಿಗಾ ಇಡಲು ಕೇಂದ್ರೀಕೃತ ಕಮಾಂಡ್ ಸೆಂಟರ್ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಖಾಲಿ ಹುದ್ದೆಗಳ ಭರ್ತಿಗೆ ಸೂಚನೆ: ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪಟ್ಟಿ ಮಾಡಿ, ನೇಮಕಾತಿಗೆ ಪ್ರಕ್ರಿಯೆ ಆರಂಭಿಸಲು ಮತ್ತು ತತ್ ಕ್ಷಣ ಅಗತ್ಯವಿರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಕೂಡಲೇ ನೇಮಕಾತಿ ಮಾಡಿಕೊಳ್ಳಲು ಮತ್ತು ವನ, ವನ್ಯಜೀವಿ ಸಂರಕ್ಷಣೆಗೆ ಅಗತ್ಯವಾದ ವಾಹನ, ಉಪಕರಣಗಳ ಖರೀದಿಗೆ ಪ್ರಸ್ತಾವನೆ ಸಲ್ಲಿಸಲು ಈಶ್ವರ್ ಖಂಡ್ರೆ ಸೂಚನೆ ನೀಡಿದರು.

ಸೌಹಾರ್ದ ಸಂಬಂಧ: ಕಾಡಿನಂಚಿನ ಗ್ರಾಮಗಳ ಜನರೊಂದಿಗೆ ಅರಣ್ಯಾಧಿಕಾರಿಗಳು ಸೌಹಾರ್ದಯುತ ಸಂಬಂಧ ಹೊಂದಬೇಕು. ಜನರಿಗೆ ಅರಣ್ಯ ಮತ್ತು ವನ್ಯಜೀವಿಗಳ ಮಹತ್ವ ತಿಳಿಸಿಕೊಡಬೇಕು. ಕಾಡಿನಂಚಿನ ಜನರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಬೇಕು, ಕೌಶಲ್ಯ ತರಬೇತಿ ಕೊಡಿಸಬೇಕು. ಆಗ ಅರಣ್ಯ ಮತ್ತು ವನ್ಯಜೀವಿ ರಕ್ಷಣೆಗೆ ಜನರೇ ಮುಂದಾಗುತ್ತಾರೆ. ಈ ರೀತಿಯ ವಾತಾವರಣ ಸೃಷ್ಟಿಸಲು ಕ್ರಮ ವಹಿಸುವಂತೆ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X