Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಿಓಪಿ ಬಳಸುವುದಿಲ್ಲವೆಂದು ಗಣೇಶೋತ್ಸವ...

ಪಿಓಪಿ ಬಳಸುವುದಿಲ್ಲವೆಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಗೆ ಬರೆಸಿಕೊಳ್ಳಿ: ಸ್ಥಳೀಯ ಸಂಸ್ಥೆಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 Aug 2025 7:26 PM IST
share
ಪಿಓಪಿ ಬಳಸುವುದಿಲ್ಲವೆಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಗೆ ಬರೆಸಿಕೊಳ್ಳಿ: ಸ್ಥಳೀಯ ಸಂಸ್ಥೆಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‍ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಗುರುವಾರ ಇಲ್ಲಿನ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಶ್ರದ್ಧಾಭಕ್ತಿಯಿಂದ ಆಚರಿಸುವ ಗಣೇಶೋತ್ಸವದಿಂದ ಜಲಚರಗಳಿಗೆ ಮಾರಕವಾಗಬಾರದು. ಈ ನಿಟ್ಟಿನಲ್ಲಿ ಗಣೇಶೋತ್ಸವ ಸಮಿತಿಗಳು ಮತ್ತು ಸಾರ್ವಜನಿಕರು ಪಿಓಪಿ ಗಣಪತಿಮೂರ್ತಿಗಳನ್ನು ಖರೀದಿಸದೆ, ಪರಿಸರ ಸ್ನೇಹಿಯಾದ ಮಣ್ಣಿನ ಗಣಪತಿನ ಮೂರ್ತಿಗಳನ್ನೇ ಪೂಜಿಸಿ, ವಿಸರ್ಜಿಸಬೇಕು ಎಂದು ಮನವಿ ಮಾಡಿದರು.

3 ಜಿಲ್ಲೆಯಲ್ಲಿ ಪರಿಸರ ಗಣಪ: ರಾಜ್ಯದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90ರಷ್ಟು ಮಣ್ಣಿನ ಗಣಪತಿಯನ್ನೇ ಪೂಜಿಸುತ್ತಾರೆ. ಆ ಮೂರು ಜಿಲ್ಲೆಗಳಲ್ಲಿ ಸಾಧ್ಯವಾಗುವುದಾದರೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಏಕೆ ಆಗುವುದಿಲ್ಲ. ಈ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.

ಪಿಓಪಿ ಗೌರಿ-ಗಣೇಶ ಮೂರ್ತಿಗಳು ನೀರಲ್ಲಿ ಕರಗುವುದಿಲ್ಲ. ಜೊತೆಗೆ ವಿಷಕಾರಕ ಅಂಶಗಳನ್ನು ನೀರಿನಲ್ಲಿ ಸೇರಿಸುತ್ತವೆ. ಜೊತೆಗೆ ಅದಕ್ಕೆ ಲೇಪಿಸುವ ಭಾರಲೋಹ ಮಿಶ್ರಿತ ರಾಸಾಯನಿಕ ಬಣ್ಣಗಳು ನೀರಲ್ಲಿ ಕರಗಿ ಜಲಚರಗಳ ಸಾವಿಗೆ ಕಾರಣವಾಗುತ್ತವೆ. ಹೀಗಾಗಿ ಎಲ್ಲರೂ ಮಣ್ಣಿನ ಗಣಪ ಪೂಜಿಸುವಂತೆ ಸಂದೇಶ ಕಳಿಸಬೇಕು. ಶಾಲೆ-ಕಾಲೇಜು ಮಕ್ಕಳಲ್ಲಿ ಪರಿಸರ ಸ್ನೇಹಿ ಗಣಪನ ಮೂರ್ತಿ ಪೂಜಿಸುವ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಹಸಿರು ಪಟಾಕಿಗೆ ಮಾತ್ರ ಅವಕಾಶ: ಗಣೇಶೋತ್ಸವದ ಮೆರವಣಿಗೆಯಲ್ಲಿ ಪಟಾಕಿಯನ್ನೂ ಹಚ್ಚಲಾಗುತ್ತದೆ. ಸುಪ್ರೀಂ ಕೋರ್ಟ್ 125 ಡೆಸಿಬಲ್‍ಗಿಂತ ಹೆಚ್ಚು ಶಬ್ದ ಮಾಡುವ ಪಟಾಕಿ ಸಿಡಿಸದಂತೆ ಮತ್ತು ರಾತ್ರಿ 8ರಿಂದ 10ಗಂಟೆಯೊಳಗೆ ಮಾತ್ರ ಪಟಾಕಿ ಸಿಡಿಸುವಂತೆ ಆದೇಶ ನೀಡಿದ್ದು, ಎಲ್ಲರೂ ಈ ನಿಯಮ ಪಾಲಿಸಬೇಕು. ಪರಿಸರಕ್ಕೆ ಮಾರಕವಾದ ಪಟಾಕಿ ಬಳಸದೆ ಹಸಿರು ಪಟಾಕಿ ಸಿಡಿಸಬೇಕು ಎಂದು ಅವರು ಮನವಿ ಮಾಡಿದರು.

ಏಕಬಳಕೆ ಪ್ಲಾಸ್ಟಿಕ್ ನಿಷೇಧ: ‘ಮಣ್ಣಲ್ಲಿ ಮಣ್ಣಾಗದ, ನೀರಲ್ಲಿ ಕರಗದ ಮತ್ತು ಸುಟ್ಟರೆ ಗಾಳಿಗೆ ವಿಷಕಾರಕ ಅಂಶ ಸೇರಿಸುವ ಏಕಬಳಕೆ ಪ್ಲಾಸ್ಟಿಕ್ ಉತ್ಪನ್ನ ನಿಷೇಧಿಸಲಾಗಿದೆ. ಆದರೂ ಹಾದಿ-ಬೀದಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನೋಡುತ್ತೇವೆ. ಈ ಬಗ್ಗೆ ಜಾಗೃತಿ ಅಗತ್ಯ. ಸ್ಥಳೀಯ-ಸಂಸ್ಥೆಗಳು ಪರಿಣಾಮಕಾರಿಯಾಗಿ ಈ ಸಮಸ್ಯೆ ಪರಿಹರಿಸಬೇಕು ಎಂದರು.

ಇಡೀ ವಿಶ್ವ ಎದುರಿಸುತ್ತಿರುವ ದೊಡ್ಡ ಸವಾಲು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆ ಆಗಿದೆ. ತಾಪಮಾನ ಏರಿಕೆಯಿಂದ ತಿಂಗಳಲ್ಲಿ ಬೀಳುವ ಮಳೆ ಒಂದು ವಾರದಲ್ಲಿ, ಒಂದು ವಾರದ ಮಳೆ ಒಂದೇ ದಿನ ಬೀಳುತ್ತಿದ್ದು, ಅತಿವೃಷ್ಟಿಯಿಂದ ಅನಾಹುತ ಸಂಭವಿಸುತ್ತಿದೆ. ಹೀಗಾಗಿ ಇರುವ ಒಂದು ಭೂಮಿಯನ್ನು ರಕ್ಷಿಸುವ ಹೊಣೆ ನಮ್ಮ ನಿಮ್ಮಲ್ಲರ ಮೇಲಿದೆ ಎಂದು ಅವರು ಹೇಳಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಮತ್ತು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X