Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಸ್ತೂರಿ ರಂಗನ್ ಸಮಿತಿ ವರದಿ :...

ಕಸ್ತೂರಿ ರಂಗನ್ ಸಮಿತಿ ವರದಿ : ಪಶ್ಚಿಮಘಟ್ಟದ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ

ವಾರ್ತಾಭಾರತಿವಾರ್ತಾಭಾರತಿ28 Aug 2024 9:14 PM IST
share
ಕಸ್ತೂರಿ ರಂಗನ್ ಸಮಿತಿ ವರದಿ : ಪಶ್ಚಿಮಘಟ್ಟದ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ

ಬೆಂಗಳೂರು : ಇತ್ತೀಚಿಗೆ ಕೇಂದ್ರ ಸರಕಾರ ಪಶ್ಚಿಮ ಘಟ್ಟ ಪ್ರದೇಶಕ್ಕೆ ಹೊರಡಿಸಿರುವ 6ನೆ ಅಧಿಸೂಚನೆ (ಕಸ್ತೂರಿ ರಂಗನ್ ಸಮಿತಿ ವರದಿ)ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, 10 ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಸಂಪುಟದಲ್ಲಿ ಅಭಿಪ್ರಾಯ ಮಂಡಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಪಶ್ಚಿಮ ಘಟ್ಟ ಪ್ರದೇಶಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಮಧು ಬಂಗಾರಪ್ಪ, ಮಾಂಕಾಳ್ ವೈದ್ಯ ಸೇರಿದಂತೆ ಪ್ರಮುಖರೊಂದಿಗೆ ಚರ್ಚೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಭೆಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶದ ಕುರಿತಂತೆ ಕೇಂದ್ರದ ಅಧಿಸೂಚನೆ ಒಪ್ಪಿಕೊಂಡರೆ ಪಶ್ಚಿಮಘಟ್ಟದ ಜನರ ಬದುಕಿನ ಮೇಲೆ ಆಗಬಹುದಾದ ಪರಿಣಾಮ, ಸಾಧಕ ಬಾಧಕಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದ ಪಶ್ಚಿಮ ಘಟ್ಟದಲ್ಲಿ 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವಂತೆ ಸೂಚಿಸಿದೆ.

ಆದರೆ ಈಗಾಗಲೇ ರಾಜ್ಯ ಸರ್ಕಾರ ವನ್ಯಜೀವಿಧಾಮ, ಅಭಯಾರಣ್ಯ, ಹುಲಿ ಸಂರಕ್ಷಿತ ಮೀಸಲು ಸೇರಿದಂತೆ ವಿವಿಧ ಅರಣ್ಯ ಪ್ರದೇಶದಲ್ಲಿ 16632 ಚದರ ಕಿ.ಮೀ.ಪ್ರದೇಶವು ಘೋಷಿತ ಅರಣ್ಯ, ಸಂರಕ್ಷಿತ ಪ್ರದೇಶ ಮತ್ತು ಸಂರಕ್ಷಿತ ಪ್ರದೇಶಗಳಿಗೆ ಹೊಂದುಕೊಂಡಿರುವ ಪರಿಸರ ಸೂಕ್ಷ್ಮ ವಲಯ (ಇಎಸ್‍ಝಡ್) ಎಂದು ಘೋಷಿಸಿದ್ದು, ಈ ಎಲ್ಲ ಪ್ರದೇಶಗಳು ಸಂರಕ್ಷಿತವಾಗಿರುತ್ತದೆ. ಹೀಗಾಗಿ ಇದಕ್ಕಷ್ಟೇ ಸೀಮಿತಗೊಳಿಸಿ ಕಸ್ತೂರಿ ರಂಗನ್ ಸಮಿತಿಯ ಶಿಫಾರಸಿನಂತೆ ಕೇಂದ್ರ ಹೊರಡಿಸಿರುವ 6ನೆ ಅಧಿಸೂಚನೆಗೆ ಸರಕಾರದ ನಿಲುವು ವ್ಯಕ್ತಪಡಿಸಲು ಸಚಿವ ಸಂಪುಟಕ್ಕೆ ಶಿಫಾರಸು ಮಾಡಬಹುದು ಎಂದು ಹೇಳಿದರು.

ಪಶ್ಚಿಮ ಘಟ್ಟ ಪ್ರದೇಶದಲ್ಲಿ 1533 ವಸತಿ ಪ್ರದೇಶಗಳಿದ್ದು, ಇಲ್ಲಿರುವ ಜನರ ಬದುಕಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ನಿರ್ದಿಷ್ಟ ಷರತ್ತುಗಳನ್ನು ಮುಂದಿಟ್ಟು ಕೇಂದ್ರ ಸರಕಾರಕ್ಕೆ ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ನಿಲುವು ತಿಳಿಸಬೇಕಾಗುತ್ತದೆ. ಅಂತಿಮವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಂತರ ಪಶ್ಚಿಮಘಟ್ಟದ 10 ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯಪಡೆದು ಸಚಿವ ಸಂಪುಟಕ್ಕೆ ಅಂತಿಮ ಶಿಫಾರಸು ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು.

Tags

Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X