Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಗ್ಯಾರಂಟಿ ಅನುಷ್ಠಾನ ಸಮಿತಿʼ ಗಳ ರಚನೆ: ...

ʼಗ್ಯಾರಂಟಿ ಅನುಷ್ಠಾನ ಸಮಿತಿʼ ಗಳ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ10 Jan 2024 4:53 PM IST
share
ʼಗ್ಯಾರಂಟಿ ಅನುಷ್ಠಾನ ಸಮಿತಿʼ ಗಳ ರಚನೆ:  ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿದರು.

"ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ವಿಧಾನಸಭೆಯಲ್ಲಿ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು" ಎಂದರು.

ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿ ಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದರು.

ಕಾರ್ಯಕರ್ತರಿಗೆ, ಶಾಸಕರಲ್ಲದವರಿಗೆ, ಸಂಸದರಲ್ಲದವರಿಗೆ, ಸಮಿತಿ ಸದಸ್ಯತ್ವ ದೊರೆಯಲಿದೆ. ವಿವಿಧ ಇಲಾಖೆಗಳ ಸಮಿತಿಗಳನ್ನು ಕೂಡಲೇ ರಚಿಸಲು ಆಯಾ ಇಲಾಖೆಗಳ ಸಚಿವರ ವಿವೇಚನೆಗೆ ಬಿಡಲಾಗಿದೆ. ಹೆಸರುಗಳನ್ನು ಪಡೆಯುವಾಗ, ನಮ್ಮ ಶಾಸಕರು, ಸಂಸದರ ಸಲಹೆ ಪಡೆಯುವಂತೆ ಸೂಚಿಸಿದರು. ಕೆಲವು ಶಾಸಕರಿಗೆ , ವಿಧಾನಸಭೆ ಟಿಕೆಟ್ ದೊರೆಯದವರಿಗೆ ಅವಕಾಶ ಕಲ್ಪಿಸಲಾಗುವುದು. ಎರಡು ವರ್ಷಗಳ ಅವಧಿ ಇರಲಿದೆ . ಕಾರ್ಯಕರ್ತರ ಶ್ರಮದಿಂದ ಪಕ್ಷ ಗಟ್ಟಿಯಾಗಿದೆ ಎಂದರು.

ಭಾರತ್ ಜೋಡೋ ನ್ಯಾಯ ಯಾತ್ರಾ

ಲೋಕಸಭಾ ಚುನಾವಣೆ ಗೆಲ್ಲಲು ನಾವೆಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ರಾಹುಲ್ ಗಾಂಧಿ ಅವರು 14 ನೇ ತಾರೀಖಿನಿಂದ 14 ರಾಜ್ಯಗಳಲ್ಲಿ 85 ಜಿಲ್ಲೆಗಳಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರಾ ಕೈಗೊಳ್ಳಲಿದ್ದಾರೆ ಎಂದರು.

ಚುನಾವಣೆಯನ್ನು ನಾವು ಗೆಲ್ಲಲೇ ಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಗೆಲ್ಲದೆ ಹೋದರೆ ಅದು ನಮಗೆ ಹಿನ್ನಡೆಯಾಗಲಿದೆ. ನಾವು ಗೆಲ್ಲಲೇಬೇಕು. 28 ಕ್ಕೆ 28 ಸೀಟನ್ನು ಗೆಲ್ಲಬೇಕು. ಕನಿಷ್ಠ 26 ಸೀಟು ಗೆಲ್ಲಬೇಕು. ಜನರ ನಾಡಿ ಮಿಡಿತ ನಮ್ಮ ಪರವಾಗಿರುವುದರಿಂದ ಅಪಪ್ರಚಾರದಿಂದ ನಾವು ಯಾರೂ ಹತಾಶರಾಗಬಾರದು. ಸಕಾರಾತ್ಮಕವಾಗಿರಬೇಕು ಎಂದು ಸಿಎಂ ಕಿವಿಮಾತು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X