Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 'ಕರಾವಳಿ ಬೀಚ್ ಪ್ರವಾಸೋದ್ಯಮ' ಕಾರ್ಯಪಡೆ...

'ಕರಾವಳಿ ಬೀಚ್ ಪ್ರವಾಸೋದ್ಯಮ' ಕಾರ್ಯಪಡೆ ರಚನೆ: ಸಿಎಂ ಸಿದ್ದರಾಮಯ್ಯ

► ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಪಡಿಸಲು ಯೋಜನೆ ► ಪ್ರವಾಸೋದ್ಯಮಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ7 July 2023 10:44 PM IST
share
ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜು.7: ‘ಶಕ್ತಿ ಯೋಜನೆ’ಯಡಿ ಎಲ್ಲ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿದ ಪರಿಣಾಮವಾಗಿ, ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪಾರಂಪರಿಕ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಅತಿ ಹೆಚ್ಚಾಗಿರುವುದರಿಂದ ಅಂತಹ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಕಲ್ಪನೆಗಳನ್ನು ಅನುಷ್ಠಾನಗೊಳಿಸಲು ಮಾಸ್ಟರ್ ಪ್ಲಾನ್ ಅನ್ನು ತಯಾರಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ತಾಣಗಳಾದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮತ್ತು ಮಳಖೇಡ, ಬೀದರ್, ರಾಯಚೂರು ಹಾಗೂ ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗಾಗಿ 75 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಬಜೆಟ್‍ನಲ್ಲಿ ಘೋಷಿಸಲಾಗಿದೆ.

ಕಿತ್ತೂರು ಕರ್ನಾಟಕ ಭಾಗದಲ್ಲಿನ ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ ಪ್ರವಾಸಿ ತಾಣಗಳನ್ನು ಮತ್ತು ಗದಗ ಜಿಲ್ಲೆಯ ಮಾಗಡಿ ಪಕ್ಷಿಧಾಮವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕಾರ್ಯಪಡೆಯನ್ನು ರಚಿಸಲಾಗುವುದು ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತøತ ಯೋಜನೆಯನ್ನು ತಯಾರಿಸಲಾಗುವುದು ಎಂದು ಪ್ರಸ್ತುತ ಸಾಲಿನ ಬಜೆಟ್‍ನಲ್ಲಿ ಘೋಷಣೆ ಮಾಡಲಾಗಿದೆ.

ಸಸಿಹಿತ್ಲು ಕಡಲ ತೀರವನ್ನು ಅಂತರ್‍ರಾಷ್ಟ್ರೀಯ ಸರ್ಫಿಂಗ್ ತಾಣವಾಗಿ ಅಭಿವೃದ್ಧಿಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ರೂಪಿಸಲಾಗುವುದು.

ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಯಾತ್ರಿನಿವಾಸ/ಡಾರ್ಮಿಟರಿಗಳನ್ನು ನಿರ್ಮಾಣ ಮಾಡಲಾಗುವುದು. ಮೈಸೂರಿನ ಹೃದಯ ಭಾಗದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣವನ್ನು ದೆಹಲಿಯ ಪ್ರಗತಿ ಮೈದಾನದ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ಬಜೆಟ್‍ನಲ್ಲಿ ಘೋಷಿಸಲಾಗಿದೆ.

ರಾಜ್ಯದಲ್ಲಿರುವ 16 ವಸ್ತುಸಂಗ್ರಹಾಲಯಗಳನ್ನು ಆಕರ್ಷಕ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲಾಗುವುದು. ಈ ಆರ್ಥಿಕ ಸಾಲಿನಲ್ಲಿ ಕಲಬುರಗಿ, ಗದಗ ಮತ್ತು ಬೆಂಗಳೂರಿನ ಸರಕಾರಿ ವಸ್ತುಸಂಗ್ರಹಾಲಯಗಳ ಅಭಿವೃದ್ಧಿಪಡಿಸಲು ಮತ್ತು ವಿಜಯಪುರದಲ್ಲಿರುವ ಆನಂದಮಹಲ್ ಕಟ್ಟಡವನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ.

ಮೈಸೂರಿನಲ್ಲಿ ಹೆಚ್ಚು ರಾಷ್ಟ್ರೀಯ ಮತ್ತು ಅಂತರ್‍ರಾಷ್ಟ್ರೀಯ ಪ್ರವಾಸಿಗರು ಭೇಟಿ ನೀಡುವ ಕಾರಣದಿಂದ ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದ ಬಳಿ ಪುರಾತತ್ವ ಇಲಾಖೆಯ ಸುಪರ್ದಿಯಲ್ಲಿನ ಎರಡೂವರೆ ಎಕರೆ ಜಮೀನಿನಲ್ಲಿ ಕರ್ನಾಟಕದ ಶ್ರೀಮಂತ ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು Augmented Reality(AR) ಮತ್ತು Virtual Reality(VR ) ತಂತ್ರಜ್ಞಾನದೊಂದಿಗೆ ಅಂತರ್‍ರಾಷ್ಟ್ರೀಯ ಗುಣಮಟ್ಟದ ‘ಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿ’ ನಿರ್ಮಾಣ ಮಾಡಲಾಗುವುದು ಎಂದು ಬಜೆಟ್‍ನಲ್ಲಿ ಘೋಷಿಸಲಾಗಿದೆ.

ರಾಜ್ಯದಲ್ಲಿರುವ ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾದ ಹಂಪಿಯ ವಿಜಯವಿಠಲ ದೇವಸ್ಥಾನ, ಬೀದರ್ ಕೋಟೆ, ನಂದಿಬೆಟ್ಟದ ಶ್ರೀ ಭೋಗನಂದೀಶ್ವರ ದೇವಸ್ಥಾನ, ವಿಜಯಪುರದ ಗೋಲಗುಂಬಜ್, ಕಿತ್ತೂರು ಕೋಟೆ ಮತ್ತು ಬಾದಾಮಿ ಗುಹೆಗಳ ಬಳಿ ರಾತ್ರಿ ವೇಳೆ ಪ್ರವಾಸಿಗರ ಭೇಟಿಯನ್ನು ಉತ್ತೇಜಿಸಲು ಹಾಗೂ ಕರ್ನಾಟಕ ರಾಜ್ಯದ ಕಲೆ, ವಾಸ್ತುಶಿಲ್ಪ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಲು 3ಡಿ ಪ್ರೊಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಷೋ ಯೋಜನೆಯನ್ನು ಕೈಗೊಳ್ಳಲಾಗುವುದು ಎಂದು ಪ್ರಸ್ತುತ ಬಜೆಟ್‍ನಲ್ಲಿ ಘೋಷಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X