Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ...

ಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಎಚ್.ಡಿ. ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ3 Sept 2023 11:35 AM IST
share
ಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ‘ದೇವರು, ರಾಜ್ಯದ ಜನರು ಹಾಗೂ ತಂದೆ ತಾಯಿಯ ಆಶೀರ್ವಾದ, ವೈದ್ಯರ ಆರೈಕೆಯಿಂದ ನನಗೆ ಮೂರನೆ ಜನ್ಮ ಸಿಕ್ಕಿದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಅನಾರೋಗ್ಯದಿಂದ ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಪೂರ್ಣ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ರವಿವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆರೋಗ್ಯದ ಬಗ್ಗೆ ಯಾರೂ ನಿರ್ಲಕ್ಷ್ಯ ಮಾಡಬಾರದು. ಏನೇ ಸಮಸ್ಯೆ ಕಾಣಿಸಿಕೊಂಡರೂ ತಕ್ಷಣ ಎಚ್ಚೆತ್ತು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಿರಿ. ಕಳೆದ ಐದು ದಿನಗಳಿಂದ ನಾಡಿನ ಜನರು, ಅಭಿಮಾನಿಗಳು, ಹಿತೈಷಿಗಳು, ಮಾಧ್ಯಮ ಸ್ನೇಹಿತರು, ಆತಂಕದಿಂದ ಕಾಯುತ್ತಿದ್ದರು. ಪ್ರಥಮವಾಗಿ ಭಗವಂತನಿಗೆ, ತಂದೆತಾಯಿಗಳ ಅವರಿಗೆ ಹಾಗೂ ಆಸ್ಪತ್ರೆಯ ಎಲ್ಲ ವೈದ್ಯವೃಂದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಆ ದಿನ ನಾನು ಬಿಡದಿಯ ನನ್ನ ತೋಟದ ಮನೆಯಲ್ಲಿದ್ದೆ. ನನ್ನ ಆಪ್ತ ಸಹಾಯಕ ಸತೀಶ್ ಜತೆಯಲ್ಲಿ ಇದ್ದರು. ತಡರಾತ್ರಿ ನನ್ನ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿತು. ತಕ್ಷಣವೇ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಕರೆ ಮಾಡಿ, ಅವರ ಸಲಹೆ ಮೇರೆಗೆ ಅಪೋಲೋ ಆಸ್ಪತ್ರೆಯ ತಜ್ಞ ವೈದ್ಯ ಡಾ.ಸತೀಶ್ ಚಂದ್ರ ಅವರನ್ನು ಸಂಪರ್ಕ ಮಾಡಲಾಯಿತು ಎಂದು ಕುಮಾರಸ್ವಾಮಿ ಹೇಳಿದರು.

ಬಿಡದಿ ತೋಟದ ಮನೆಯಿಂದ ಕೇವಲ ಇಪ್ಪತ್ತು ನಿಮಿಷಗಳಲ್ಲಿ ಇಲ್ಲಿಗೆ ತಲುಪಿದೆ. ನಾನು ಆ ಸಂದರ್ಭದಲ್ಲಿ ಸ್ವಲ್ಪ ನಿರ್ಲಕ್ಷ್ಯ ಮಾಡಿದ್ದರೂ ಇವತ್ತು ಇಷ್ಟು ಸರಾಗವಾಗಿ ಮಾತನಾಡಲು ಆಗುತ್ತಿರಲಿಲ್ಲ. ವೈದ್ಯರು ಬಹಳ ಕಾಳಜಿ ವಹಿಸಿದರು. ಆಸ್ಪತ್ರೆಗೆ ಬಂದ ಮರು ಕ್ಷಣವೇ ವೈದ್ಯರು ಚಿಕಿತ್ಸೆ ಆರಂಭ ಮಾಡಿದರು. ಅವರ ಆರೈಕೆ, ದೇವರ ದಯೆಯ ಫಲವಾಗಿ ನಾನೀಗ ನಿಮ್ಮೆಲ್ಲರ ಜತೆ ನಿರಾಯಾಸವಾಗಿ ಮಾತನಾಡುತ್ತಿದ್ದೇನೆ ಎಂದು ಅವರು ಭಾವುಕರಾದರು.

ಪ್ರತಿ ಕುಟುಂಬಗಳಲ್ಲೂ ಆರೋಗ್ಯದ ಸಮಸ್ಯೆಗಳು ಇದ್ದೆ ಇರುತ್ತವೆ. ಬಡವ ಬಲ್ಲಿದ ಯಾರೇ ಆಗಿರಲಿ, ಅನಾರೋಗ್ಯ ಕಾಣಿಸಿಕೊಂಡಾಗ ಅಸಡ್ಡೆ ಬೇಡ. ಬಹಳ ಕಾಳಜಿ ಇರಲಿ, ಗೋಲ್ಡನ್ ಪಿರಿಯಡ್ ಬಗ್ಗೆ ಗಮನ ಇರಲಿ. ಸ್ವಲ್ಪ ತಡ ಮಾಡಿದ್ದರೂ ನಾನು ಮೂರ್ನಾಲ್ಕು ತಿಂಗಳು ಹಾಸಿಗೆ ಹಿಡಿಯಬೇಕಿತ್ತು. ಆದರೆ ವೈದ್ಯರ ಪರಿಶ್ರಮದಿಂದ ಮತ್ತೆ ಮೊದಲಿನ ಸ್ಥಿತಿಗೆ ಬಂದಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

ಇವತ್ತು ಚಂದ್ರಯಾನ, ಸೂರ್ಯಯಾನ ಮಾಡಿದ್ದೇವೆ. ವಿಜ್ಞಾನ, ತಂತ್ರಜ್ಞಾನ, ಆರೋಗ್ಯ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧಿಸಿದ್ದೇವೆ. ಕರ್ನಾಟಕದಲ್ಲಿ ಅತ್ಯಂತ ನುರಿತ, ಪ್ರತಿಭಾವಂತ, ಶ್ರೇಷ್ಠ ವೈದ್ಯರು ಇದ್ದಾರೆ. ಎಲ್ಲರೂ ಜಾಗೃತರಾಗಿ ಇರಬೇಕು ಎಂಬುದು ನನ್ನ ಮನವಿ ಎಂದು ಕುಮಾರಸ್ವಾಮಿ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ವೈದ್ಯರಿಗೆ ಧನ್ಯವಾದ ತಿಳಿಸಿದರು. ತಂದೆ ತಾಯಿ ಅವರು ಮಾಡಿದ ಜನಪರ ಕೆಲಸಗಳು ಅವರನ್ನು ಕಾಪಾಡಿವೆ. ನಾವು ಸಹಜವಾಗಿ ಒತ್ತಡದಲ್ಲಿದ್ದೆವು. ಹಾಗಾಗಿ ಮಾಧ್ಯಮಗಳ ಜತೆಗೆ ಈವರೆಗೂ ಮಾತಾಡಲು ಆಗಲಿಲ್ಲ. ಮಗನಾಗಿ ನಮ್ಮ ತಂದೆ ಬಳಿ ಕೇಳುವುದಿಷ್ಟೇ, ನೀವು ಜನಗಳ ಆಸ್ತಿ, ನೀವು ಹಲವಾರು ವರ್ಷಗಳ ಕಾಲ ನಮ್ಮ ಜತೆ ಇರಬೇಕು. ಮುಂದಿನ ದಿನಗಳಲ್ಲಿ ಜೀವನ ಶೈಲಿ ಬದಲಿಸಿಕೊಳ್ಳಿ. ಸರಿಯಾಗಿ ಊಟ ಮಾಡಿ, ನಿದ್ದೆ ಮಾಡಿ ಎಂದು ಮನವಿ ಮಾಡಿಕೊಂಡರು.

ಅಪೋಲೋ ಆಸ್ಪತ್ರೆಯ ನರರೋಗ ತಜ್ಞ ಡಾ.ಸತೀಶ್ ಚಂದ್ರ ಮಾತನಾಡಿ, ಪಾಶ್ರ್ವವಾಯು ಎನ್ನುವುದು ಬಹಳ ಸಾಮಾನ್ಯ ಕಾಯಿಲೆಯಾದರೂ ಅದರ ಬಗ್ಗೆ ತಿಳುವಳಿಕೆ ಅವಶ್ಯಕತೆ ಇದೆ. ಅದರ ಚಿಹ್ನೆಗಳನ್ನು ತಿಳಿದುಕೊಂಡ ತಕ್ಷಣ ಆಸ್ಪತ್ರೆಗೆ ಬರಬೇಕು. ಕಣ್ಣು, ಕೈ, ಮಾತುಗಳಲ್ಲಿ ಏನಾದರೂ ವ್ಯತ್ಯಾಸ ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಬರಬೇಕು. ಗೋಲ್ಡನ್ ಅವರ್ ನಲ್ಲಿ ಆಸ್ಪತ್ರೆಗೆ ತಲುಪಬೇಕು. ಆಗ ಚಿಕಿತ್ಸೆ ಕೊಡಲು ಅನುಕೂಲ ಆಗುತ್ತದೆ. ರಕ್ತದ ಒತ್ತಡ, ಹೃದಯದ ಕಾಯಿಲೆ, ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಂಡರೆ ಸ್ಟ್ರೋಕ್ ಅನ್ನು ತಡೆಯಬಹುದು ಎಂದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಉಪಾಧ್ಯಕ್ಷ ಡಾ.ಗೋವಿಂದಯ್ಯ ಯತೀಶ್, ಡಾ.ಚಿನ್ಮಯ ನಾಗೇಶ್, ಡಾ.ಅನಿರುಧ್ ವಿಲಾಸ್ ಕುಲಕರ್ಣಿ, ಡಾ.ರೇಶ್ಮಿ ದೇವರಾಜ್, ಡಾ.ಅಭಿಜಿತ್ ವಿಲಾಸ್ ಕುಲಕರ್ಣಿ ಹಾಗೂ ಶಾಸಕ ಬಿ.ಎನ್.ರವಿಕುಮಾರ್, ಮಾಜಿ ಕೆ.ಟಿ.ಶ್ರೀಕಂಠೇಗೌಡ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X