ಮಾಜಿ ಸಚಿವ ಸಿ. ವೀರಣ್ಣ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು: ಮಾಜಿ ಸಚಿವ ಸಿ. ವೀರಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, "ಮಾಜಿ ಸಚಿವರು, ಮಾಜಿ ಉಪಸಭಾಪತಿಗಳೂ ಆಗಿದ್ದ ಸಿ. ವೀರಣ್ಣ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ಸಚಿವರಾಗಿ ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾಗಿ ನಾಡಿಗೆ ಅವರು ನೀಡಿದ ಸೇವೆ ಅಪಾರ" ಎಂದು ಹೇಳಿದ್ದಾರೆ.
"ರಾಜ್ಯದ ಹಿತ ಮತ್ತು ಶೋಷಿತ ಸಮುದಾಯಗಳ ಏಳಿಗೆಗಾಗಿ ಸದಾ ಶ್ರಮಿಸುತ್ತಿದ್ದ ಅವರು, ತಮ್ಮ ಹೋರಾಟದ ಬದುಕು ಹಾಗೂ ತಳಸಮುದಾಯಗಳ ಬಗೆಗಿನ ಕಾಳಜಿಯ ಮೂಲಕ ಸದಾ ನಮ್ಮ ನೆನಪಿನಲ್ಲಿ ಉಳಿಯಲಿದ್ದಾರೆ" ಎಂದು ತಿಳಿಸಿದ್ದಾರೆ.
"ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ." ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
Next Story




