Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Bengaluru | ಸೂರ್ಯನಗರದಲ್ಲಿ ದೇಶದ...

Bengaluru | ಸೂರ್ಯನಗರದಲ್ಲಿ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ23 May 2026 9:52 PM IST
share
Bengaluru | ಸೂರ್ಯನಗರದಲ್ಲಿ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಿಲಾನ್ಯಾಸ
ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆಗೆ ನಾಂದಿ: ಸಿದ್ದರಾಮಯ್ಯ

ಬೆಂಗಳೂರು: ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ರಾಜಧಾನಿ ಬೆಂಗಳೂರಿನ ಹೊರವಲಯದ ಸೂರ್ಯನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಶನಿವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.

ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಶಂಕುಸ್ಥಾಪನೆ ಜೊತೆಗೆ, ‘ಮುಖ್ಯಮಂತ್ರಿಗಳ ನಮ್ಮ ಮನೆ’ ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ, ವಸತಿ ಯೋಜನೆಗೆ ಭೂಮಿ ನೀಡಿದ ಭೂ ಮಾಲಕರಿಗೆ ಸಾಂಕೇತಿಕ ನಿವೇಶನ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ’ ಎಂದು ನುಡಿದರು.

ಇಲ್ಲಿಯವರೆಗೂ ಕೇವಲ ವಸತಿ ನಿರ್ಮಾಣ ಮಾಡುತ್ತಿದ್ದ ವಸತಿ ಇಲಾಖೆ ಮತ್ತು ಗೃಹ ಮಂಡಳಿ, ಇದೀಗ 943 ಕೋಟಿ ರೂ.ವೆಚ್ಚದಲ್ಲಿ 80ಸಾವಿರ ಆಸನ ಸಾಮರ್ಥ್ಯದ ಈ ಬೃಹತ್ ಕ್ರೀಡಾಂಗಣವನ್ನು ನಿರ್ಮಿಸಲು ಮುಂದಾಗಿರುವುದು ಕ್ರೀಡಾ ಪ್ರೇಮಿಗಳ ದಶಕಗಳ ಕನಸನ್ನು ನನಸು ಮಾಡಲಿದೆ. ಈ ಯೋಜನೆ ಕ್ರೀಡಾ ಲೋಕದಲ್ಲಿ ಹೊಸ ಮೈಲಿಗಲ್ಲಾಗಲಿದೆ. ಇದಕ್ಕಾಗಿ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಅವರು ಅಭಿನಂದನಾರ್ಹರು ಎಂದು ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಗುಜರಾತ್‍ನಲ್ಲಿರುವ ಕ್ರಿಕೆಟ್ ಕ್ರೀಡಾಂಗಣ 1.20ಲಕ್ಷ ಆಸನ ವ್ಯವಸ್ಥೆ ಹೊಂದಿದ್ದು, ಈಗ ನಮ್ಮ ಕರ್ನಾಟಕ ರಾಜ್ಯದ್ದು ಎರಡನೇ ಅತಿದೊಡ್ಡ ಕ್ರೀಡಾಂಗಣವಾಗಲಿದೆ. ಇದರಿಂದ ಪ್ರವಾಸೋದ್ಯಮದ ಪ್ರಗತಿಯ ಜೊತೆಗೆ ಸುತ್ತಮುತ್ತಲ ಊರುಗಳ ಆರ್ಥಿಕತೆಯೂ ಹೆಚ್ಚುತ್ತದೆ. ಉದ್ಯೋಗವೂ ಹೆಚ್ಚುತ್ತದೆ. ಸರಕಾರದ ಆರ್ಥಿಕ ನೆರವಿಲ್ಲದೆ ಗೃಹ ಮಂಡಳಿ ಹಣದಿಂದಲೇ ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.




ರಾಜ್ಯದಲ್ಲಿ ಖಾಲಿ ಇರುವ ಗೃಹ ಮಂಡಳಿ ನಿವೇಶನಗಳ ಮಾರಾಟದಿಂದ ಗೃಹ ಮಂಡಳಿಗೆ 20 ಸಾವಿರ ಕೋಟಿ ಆದಾಯ ಬರುವ ಅಂದಾಜಿದೆ. ‘ನೆತ್ತಿ ಮೇಲೆ ಸೂರು ಇರಬೇಕು’ ಎನ್ನುವುದು ಪ್ರತಿಯೊಬ್ಬರ ಆಸೆ. ಈಗ ಭೂಮಿ ಬೆಲೆ ಹೆಚ್ಚುತ್ತಿರುವುದರಿಂದ ಬಡ, ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಗೃಹ ಮಂಡಳಿ ನಿವೇಶನಗಳನ್ನು ನಿರ್ಮಿಸಿ ಒದಗಿಸುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಆನೇಕಲ್ ತಾಲೂಕು ಭಾಗದ ಅಭಿವೃದ್ಧಿಗೆ ಪೂರಕವಾಗಿ ಜಿಗಣಿ ಹೋಬಳಿಯ ಪ್ರಮುಖ ಸಂಪರ್ಕ ರಸ್ತೆ ನಿರ್ಮಾಣಕ್ಕೂ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಧಿಕಾರಿಗಳು ಈ ಕೆಲಸವನ್ನೂ ಆರಂಭಿಸುತ್ತಾರೆ. ಕ್ರೀಡಾಂಗಣ, ರಸ್ತೆ ಮಾತ್ರವಲ್ಲದೆ ವಸತಿ ಇಲಾಖೆ ಈ ಬಾರಿ ಇಲ್ಲಿಯವರೆಗೂ 3 ಲಕ್ಷಕ್ಕೂ ಹೆಚ್ಚು ಮನೆ ಮತ್ತು ನಿವೇಶನಗಳನ್ನೂ ರಾಜ್ಯದಲ್ಲಿ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.




ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ಹಾಗೂ ಕ್ರೀಡಾಸಂಕೀರ್ಣ ನಿರ್ಮಾಣದ ಮೂಲಕ ನಮ್ಮ ಸರಕಾರ ಬೆಂಗಳೂರಿಗೆ ದೊಡ್ಡ ಕೊಡುಗೆ ನೀಡುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆ ಮಾಡಿ, ಹೊಸ ರೂಪ ನೀಡಲು ತೀರ್ಮಾನಿಸಿದೆ’ ಎಂದು ವಿವರಿಸಿದರು.

ಸಚಿವ ಝಮೀರ್ ಅಹ್ಮದ್, ಶಾಸಕ ಶಿವಲಿಂಗೇಗೌಡರು ಸೇರಿ ಗೃಹ ಮಂಡಳಿ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಐತಿಹಾಸಿಕ ಯೋಜನೆ ರೂಪಿಸಿದ್ದಾರೆ. ವಸತಿ ಸಚಿವಾಲಯ ಹಾಗೂ ಗೃಹ ಮಂಡಳಿ ಕ್ರಾಂತಿಕಾರಿ ಬದಲಾವಣೆ ಮಾಡಿಕೊಂಡು ಬರುತ್ತಿದ್ದು, ಸೂರಿಲ್ಲದವರಿಗೆ ಸೂರು ಕಲ್ಪಿಸಿ, ಆಸ್ತಿ ದಾಖಲೆ ಇಲ್ಲದವರಿಗೆ ದಾಖಲೆ ನೀಡುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಸತಿ ಸಚಿವ ಝಮೀರ್ ಅಹ್ಮದ್, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಶಿವಲಿಂಗೇಗೌಡ, ಶಾಸಕರಾದ ಆನೇಕಲ್ ಶಿವಣ್ಣ, ಟಿ.ಬಿ. ಜಯಚಂದ್ರ, ಎಂ.ಕೃಷ್ಣಪ್ಪ, ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಮಾಜಿ ಸಂಸದ ಡಿ.ಕೆ.ಸುರೇಶ್, ಎಂಎಲ್‍ಸಿ ರಾಮೋಜಿಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ ಸೇರಿ ಹಲವರು ಉಪಸ್ಥಿತರಿದ್ದರು.


‘ಡಿ.ಕೆ.ಸುರೇಶ್, ಆನೇಕಲ್ ಶಿವಣ್ಣನ ಕನಸಿನಂತೆ ಕ್ರೀಡಾಂಗಣ, ಕಾವೇರಿ ನೀರು’

ಬೆಂಗಳೂರು ದಕ್ಷಿಣ ಭಾಗದ ಸ್ಥಳೀಯ ನಾಯಕರಾದ ಆನೇಕಲ್ ಶಿವಣ್ಣ ಹಾಗೂ ಡಿ.ಕೆ.ಸುರೇಶ್ ಅವರ ಕನಸಿನಂತೆ 2 ಸಾವಿರ ಕೋಟಿ ರೂ. ಮೊತ್ತದ ಅಂತಾರಾಷ್ಟ್ರೀಯ ಕ್ರೀಡಾ ಸಂಕೀರ್ಣ ನಿರ್ಮಾಣದ ಕನಸು ಈಗ ನನಸಾಗುತ್ತಿದೆ. ಇವರ ಆಕಾಂಕ್ಷೆಯಂತೆ ಈ ಭಾಗದ ಜನರಿಗೆ ಕಾವೇರಿ ನೀರು ಒದಗಿಸಲಾಗುತ್ತಿದೆ. ಶಾಸಕ ಆನೇಕಲ್ ಶಿವಣ್ಣ ನನ್ನನ್ನು, ಮುಖ್ಯಮಂತ್ರಿಗಳನ್ನು ಹಾಗೂ ಸಚಿವರನ್ನು ಭೇಟಿ ಮಾಡಿದಾಗೆಲ್ಲಾ ಆನೇಕಲ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೆ. ಕ್ಷೇತ್ರದ ಎಲ್ಲಾ ಜಾತಿ, ಧರ್ಮದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದಾರೆ. ಇಂತಹ ಶಾಸಕರನ್ನು ಆಯ್ಕೆ ಮಾಡಿರುವುದಕ್ಕೆ ಇಲ್ಲಿನ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.





ಗುಜರಾತ್ ನಂತರ ಬೆಂಗಳೂರಿನದ್ದೇ ಅತೀದೊಡ್ಡ ಕ್ರೀಡಾಂಗಣ: ಝಮೀರ್ ಅಹ್ಮದ್ ಸಂತಸ

ಗುಜರಾತ್ ನಂತರ ಈಗ ಬೆಂಗಳೂರಿನಲ್ಲಿ ನಿರ್ಮಿಸುತ್ತಿರುವುದೇ ಅತೀ ದೊಡ್ಡ ಅಂತಾರಾಷ್ಟ್ರೀಯ ಕ್ರೀಡಾಂಗಣವಾಗಲಿದೆ. ಅನೇಕ ವರ್ಷಗಳಿಂದ ಬೆಂಗಳೂರು ದಕ್ಷಿಣ ಭಾಗದ ಜನರು ಕಂಡಿದ್ದ ಕನಸು ಇಂದು ನನಸಾಗಿದೆ ಎಂದು ವಸತಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಹಿಂದಿನ ಸರಕಾರ ಇದ್ದಾಗ ಇಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಹಾಗೂ ಶಾಲೆ ನಿರ್ಮಾಣ ಮಾಡುವುದಾಗಿ ತಿಳಿಸಿದ ನಂತರ ರೈತರು ಒಪ್ಪಿದ್ದರು. ವಿ.ಸೋಮಣ್ಣ ವಸತಿ ಸಚಿವರಾಗಿದ್ದಾಗಲೂ ಪ್ರಯತ್ನಿಸಿದರು, ಆದರೆ, ಅವರಿಂದ ಆಗಲಿಲ್ಲ. ಇದೀಗ ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಒತ್ತಾಸೆ ಮೇರೆಗೆ ಈ ಯೋಜನೆ ಸಾಕಾರಗೊಂಡಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಸಹಕಾರ ಕೊಟ್ಟಿದ್ದಾರೆ ಎಂದು ಝಮೀರ್ ಹೇಳಿದರು.

ಸೂರ್ಯನಗರದ ಕ್ರೀಡಾಗ್ರಾಮದಲ್ಲಿ 100ಕ್ಕೂ ಹೆಚ್ಚು ಅಪಾರ್ಟ್‍ಮೆಂಟ್ ಲೋಕಾರ್ಪಣೆಯಾಗಿದೆ. 16 ಸಾವಿರ ನಿವೇಶನ ಅರ್ಜಿ ಬಂದಿದೆ. ಸ್ಥಳೀಯರಿಗೆ ಶೇ.50ರಷ್ಟು ಮೀಸಲು ನೀಡಿ ಎಂದು ಡಿ.ಕೆ.ಸುರೇಶ್ ಹೇಳಿದ್ದಾರೆ. ಮುಂದಿನ ಯೋಜನೆಗಳಲ್ಲಿ ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಝಮೀರ್ ತಿಳಿಸಿದರು.

ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದಲ್ಲಿ 1,028 ಎಕರೆ ಜಾಗವನ್ನು ಇಲಾಖೆಗೆ ಹಸ್ತಾಂತರ ಮಾಡಿದ್ದರು. 1 ಲಕ್ಷ ಮನೆ ಯೋಜನೆಗೆ ಚಾಲನೆ ನೀಡಿದ್ದೆವು. ನಾವು ಎರಡೂವರೆ ಲಕ್ಷ ರೂ.ಗೆ ಬಡವರಿಗೆ ಮನೆ ಕೊಡುತ್ತಿದ್ದದ್ದನ್ನು 8.5 ಲಕ್ಷ ರೂ.ಗೆ ಬಸವರಾಜ ಬೊಮ್ಮಾಯಿ ಸರಕಾರ ಹೆಚ್ಚಿಸಿತು. ಬಿಜೆಪಿ ಸರಕಾರ ಬಡವರ ವಿರುದ್ಧವಾಗಿದೆ ಎಂದು ಝಮೀರ್ ಟೀಕಿಸಿದರು.

ನಾನು ವಸತಿ ಸಚಿವ ಆದ ನಂತರ ಸಾಕಷ್ಟು ಕೆಲಸಗಳಾಗಿವೆ. ಇಲಾಖೆಯಲ್ಲಿ 7,400 ಕೋಟಿ ರೂ. ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಿ ಸ್ಲಂಬೋರ್ಡ್‍ಗೆ ನೀಡಿದ್ದೇವೆ. ನಾವು ಗ್ಯಾರಂಟಿ ಜೊತೆಗೇ ಇಷ್ಟೊಂದು ಅಭಿವೃದ್ಧಿ ಮಾಡಲು ಸಾಧ್ಯ ಆಗಿದೆ ಎಂದರೆ ಬಿಜೆಪಿಯವರಿಗೆ ಏಕೆ ಸಾಧ್ಯ ಆಗಲಿಲ್ಲ? ಇದು ಸಾಮಾಜಿಕ ಬದ್ಧತೆಯ ಕಾಂಗ್ರೆಸ್ ಸರಕಾರದಿಂದ ಮಾತ್ರ ಸಾಧ್ಯ ಎಂದು ಝಮೀರ್ ತಿಳಿಸಿದರು.

ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ, ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕಕ್ಕೆ ಈ ಕ್ರೀಡಾಂಗಣ ಹೆಮ್ಮೆಯನ್ನು ತರಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಘಡ ಸಂಭವಿಸಿದ ನಂತರ ಬೆಂಗಳೂರಿನಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಮಾಡಬೇಕೆಂದು ಸಂಪುಟದಲ್ಲಿ ತೀರ್ಮಾನ ಮಾಡಲಾಗಿತ್ತು. ಅದರಂತೆ ಈಗ ಕೆಲಸ ಪ್ರಾರಂಭವಾಗಲಿದೆ ಎಂದರು.

ಈ ಕ್ರೀಡಾಂಗಣವನ್ನು ಸರಕಾರ ಮಾಡಬೇಕಾಗಿತ್ತು, ಗೃಹಮಂಡಳಿ ಯಾಕೆ ಮಾಡಬೇಕೆಂದು ವಿರೋಧಪಕ್ಷದವರು ಟೀಕಿಸಿದ್ದಾರೆ. ಗೃಹಮಂಡಳಿ ದುಡ್ಡೂ ಸರಕಾರದ ದುಡ್ಡು ಎನ್ನುವುದು ಅವರಿಗೆ ಗೊತ್ತಿಲ್ಲ ಎನ್ನಿಸುತ್ತದೆ. ಇಂತಹ ಒಳ್ಳೆಯ ಕಾರ್ಯದಲ್ಲಿ ಅಪಶಕುನ ಆಡಬಾರದು. ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಈ ಯೋಜನೆ ಬಹಳ ಮುಖ್ಯವಾಗಿದೆ ಎಂದು ಶಿವಲಿಂಗೇಗೌಡ ತಿಳಿಸಿದರು.

‘ಸೂರ್ಯನಗರದ ಕ್ರೀಡಾಗ್ರಾಮದಲ್ಲಿ 27 ಕ್ರೀಡೆಗಳ ಕ್ರೀಡಾಂಗಣ ಬರಲಿದ್ದು, ಎರಡು ಸಾವಿರ ಕೋಟಿ ರೂ. ಮೊತ್ತದಲ್ಲಿ ಆಗಲಿದೆ. ಮೆಟ್ರೊ ಇಲ್ಲಿಗೆ ಬರಬೇಕಿದೆ. ಈ ಬಗ್ಗೆ ಸಿಎಂ ಹಾಗೂ ಡಿಸಿಎಂ ಅವರಿಗೆ ಮನವಿ ಮಾಡುತ್ತೇನೆ’

-ಬಿ.ಶಿವಣ್ಣ, ಶಾಸಕ, ಆನೇಕಲ್

‘ಗೃಹ ಮಂಡಳಿಯ ವಿಶೇಷ ಚಿಂತನೆಯ ಕಾರಣಕ್ಕಾಗಿ ಈ ಯೋಜನೆ ಆಗುತ್ತಿದೆ. ಆನೇಕಲ್ ಕೊನೆಯ ಭಾಗವಾಗಿದ್ದು, ಇಲ್ಲಿ ಏಕೆ ಕ್ರೀಡಾಂಗಣ ಬೇಕು ಎಂದು ಕೆಲವರು ಹೇಳುತ್ತಿದ್ದರು. ಆದರೆ, ಇಲ್ಲಿಂದಲೇ ಅನೇಕರು ಉದ್ಯೋಗಕ್ಕೆ ಬೆಂಗಳೂರಿಗೆ ಹೋಗಿ ಬರುತ್ತಾರೆ. ಇದು ಬೆಂಗಳೂರಿನಿಂದ ಹೊರಗಿದೆ ಎಂದು ತಿಳಿಯಬಾರದು. ಈ ಭಾಗವು ಎಲೆಕ್ಟ್ರಾನಿಕ್ ಸಿಟಿ ಸಹಿತ ಕೈಗಾರಿಕಾ ಪ್ರದೇಶ ಹೊಂದಿರುವುದರಿಂದ ಹಿಂದೆ ವಸತಿ ಸಚಿವರಾಗಿದ್ದ ವಿ.ಸೋಮಣ್ಣ ಅವರಿಗೂ ಕ್ರೀಡಾಂಗಣದ ಮನವಿ ಮಾಡಿದ್ದೆ. ಆದರೆ, ಈಗಿನ ವಸತಿ ಸಚಿವ ಝಮೀರ್ ಅಹ್ಮದ್, ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಅವರ ಒತ್ತಾಸೆ ಮೇರೆಗೆ ಈ ಯೋಜನೆ ಆಗಿದೆ. ಈ ಕ್ರೀಡಾಂಗಣದ ಕಾರಣಕ್ಕೆ ಆಸ್ತಿ ಮೌಲ್ಯ ಹೆಚ್ಚಳ ಆಗಿದೆ. ಬೆಂಗಳೂರಿನ ನಾಲ್ಕೂ ಕಡೆಗಳಲ್ಲಿ ಒಂದೊಂದು ಕ್ರೀಡಾಂಗಣ ನಿರ್ಮಾಣ ಮಾಡಬೇಕೆಂದು ಸರಕಾರವನ್ನು ಒತ್ತಾಯ ಮಾಡುತ್ತೇನೆ’

-ಡಿ.ಕೆ.ಸುರೇಶ್, ಮಾಜಿ ಸಂಸದ




Tags

SuryanagarBengaluruInternational Cricket Stadium
share
ವಾರ್ತಾಭಾರತಿ
ವಾರ್ತಾಭಾರತಿ
Next Story
X