Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಂಚನೆ ಪ್ರಕರಣ: ಚೈತ್ರಾ ಸುದ್ದಿ...

ವಂಚನೆ ಪ್ರಕರಣ: ಚೈತ್ರಾ ಸುದ್ದಿ ಪ್ರಕಟಿಸುವಾಗ ‘ಕುಂದಾಪುರ ಹೆಸರು ಬಳಕೆ’ಗೆ ನ್ಯಾಯಾಲಯ ಮಧ್ಯಂತರ ನಿರ್ಬಂಧ

ವಾರ್ತಾಭಾರತಿವಾರ್ತಾಭಾರತಿ24 Sept 2023 5:55 PM IST
share
ವಂಚನೆ ಪ್ರಕರಣ: ಚೈತ್ರಾ ಸುದ್ದಿ ಪ್ರಕಟಿಸುವಾಗ ‘ಕುಂದಾಪುರ ಹೆಸರು ಬಳಕೆ’ಗೆ ನ್ಯಾಯಾಲಯ ಮಧ್ಯಂತರ ನಿರ್ಬಂಧ

ಬೆಂಗಳೂರು, ಸೆ.24: ಉದ್ಯಮಿಗೆ ಚುನಾವಣಾ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ.ಪಡೆದು ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ‘ಕುಂದಾಪುರ’ ಹೆಸರು ಉಲ್ಲೇಖಿಸದಂತೆ ಮಾಧ್ಯಮಗಳಿಗೆ ನಿಬರ್ಂಧ ಹೇರಿ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ಮಧ್ಯಂತರ ಆದೇಶ ಮಾಡಿದೆ.

ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರು ಉಲ್ಲೇಖಿಸುವುದಕ್ಕೆ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಿಗೆ ನಿಬರ್ಂಧ ಹೇರುವಂತೆ ಕೋರಿ ಬೆಂಗಳೂರಿನ ಬಸವನಗುಡಿಯಲ್ಲಿ ‘ಕಾಫಿ ಶಾಪ್’ ಹೋಟೆಲ್ ಮಾಲಕ ಕುಂದಾಪುರ ಮೂಲದ ಗಣೇಶ್ ಶೆಟ್ಟಿ ಸಲ್ಲಿಸಿದ್ದ ಮೂಲ ದಾವೆಯ ವಿಚಾರಣೆಯನ್ನು ಬೆಂಗಳೂರಿನ 7ನೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಬಾಲಗೋಪಾಲ ಕೃಷ್ಣ ಅವರು ಆದೇಶಿಸಿದ್ದಾರೆ.

ಸುದ್ದಿ ವಾಹಿನಿ, ಮಾಧ್ಯಮದಲ್ಲಿ ಕುಂದಾಪುರ ಹೆಸರು ಉಲ್ಲೇಖ ಮತ್ತು ಪ್ಯಾನಲ್ ಚರ್ಚೆ ನಡೆಸುವುದಕ್ಕೆ ಮುಂದಿನ ಆದೇಶದವರೆಗೆ ತಾತ್ಕಾಲಿಕ ನಿಬರ್ಂಧ ಆದೇಶ ಮಾಡಲಾಗಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ಉಲ್ಲೇಖಿಸಿದೆ.

ವಂಚನೆ ಆರೋಪದಲ್ಲಿ ಚೈತ್ರಾ ಹಾಗೂ ಇತರೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೈತ್ರ ಸಹ ಕುಂದಾಪುರದ ಮೂಲದವರಾಗಿದ್ದಾರೆ. ಆದರೆ, ಈ ವಂಚನೆ ಪ್ರಕರಣಕ್ಕೆ ಮಾಧ್ಯಮಗಳು ಚೈತ್ರಾ ಹೆಸರು ಬಳುಸುವಾಗ ಕುಂದಾಪುರ ಎಂಬುದಾಗಿ ಉಲ್ಲೇಖಿಸುತ್ತಿವೆ. ಇದರಿಂದ ಕುಂದಾಪುರ ಪಟ್ಟಣದ ಹೆಸರು ಮತ್ತು ಘನತೆಗೆ ಧಕ್ಕೆಯಾಗುತ್ತಿದೆ. ಕುಂದಾಪುರ ಎಂದು ಉಲ್ಲೇಖಿಸಿ ಮಾಧ್ಯಮಗಳು ಸುದ್ದಿ ಪ್ರಕಟಿಸುವುದು ಅವಹೇಳನಕಾರಿಯಾಗಿದೆ ಎಂದು ದಾವೆಯಲ್ಲಿ ಆಕ್ಷೇಪಿಸಲಾಗಿದೆ.

ಮಾಧ್ಯಮಗಳು ತಮ್ಮ ಟಿಆರ್‍ಪಿ, ಲೈಕ್ಸ್ ಮತ್ತು ವ್ಯೂಸ್ ಹೆಚ್ಚಿಸುವ ಉದ್ದೇಶದಿಂದ ಕುಂದಾಪುರ ಹೆಸರು ಬಳಸುತ್ತಿವೆ. ಕುಂದಾಪುರ ಪಟ್ಟಣದಲ್ಲಿ ಜನಿಸಿರುವ ದಾವೆದಾರರು ಕಳೆದ 23 ವರ್ಷಗಳಿಂದ ಬೆಂಗಳೂರಿನ ಬಸನಗುಡಿಯಲ್ಲಿ ಕಾಫಿ ಶಾಪ್ ನಡೆಸುತ್ತಿದ್ದಾರೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಗ್ರಾಹಕರು ಶಾಪ್‍ಗೆ ಭೇಟಿ ನೀಡುತ್ತಾರೆ. ಚೈತ್ರಾ ಪ್ರಕರಣ ಬೆಳಕಿಗೆ ಬಂದ ನಂತರ ಗ್ರಾಹಕರು ಕುಂದಾಪುರ ಬಗ್ಗೆ ವಿಚಾರಿಸತೊಡಗಿದ್ದಾರೆ. ಇದರಿಂದ ಕುಂದಾಪುರ ದೂಷಣೆಗೆ ಒಳಗಾಗುತ್ತಿದೆ. ಈ ಒಂದು ಘಟನೆಯಿಂದ ಅಲ್ಲಿನ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು ಎಂದು ದಾವೆಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

Tags

Chaitra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X