ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ : ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ಬೆಂಗಳೂರು : ರಾಜ್ಯದ ಎಲ್ಲ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‍ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ತಮ್ಮ ನೇತೃತ್ವದಲ್ಲಿ ನಡೆದ ಮೊಟ್ಟ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಈ ಸಂಬಂಧ ನಾವು ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.
ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ 56 ಸಾವಿರ ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳುವ ಸಂಬಂಧ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ, ಕೆಲವು ಕಾರಣಾಂತರಗಳಿಂದ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿತ್ತು. ಇದೀಗ, ನಾವು ಎಲ್ಲ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚೆ ಮಾಡಿ, ಆದಷ್ಟು ಬೇಗ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದರು.
Next Story




