Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಿಲ್ಲಿಯಲ್ಲಿ ಉಚಿತ ಯೋಜನೆಗಳು...

ದಿಲ್ಲಿಯಲ್ಲಿ ಉಚಿತ ಯೋಜನೆಗಳು ಸ್ಥಗಿತಗೊಂಡಿಲ್ಲ, ಸೋಲಿನ ಹತಾಶೆಯಲ್ಲಿ ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ: ಎಎಪಿ

ವಾರ್ತಾಭಾರತಿವಾರ್ತಾಭಾರತಿ9 Jun 2024 12:03 PM IST
share
ದಿಲ್ಲಿಯಲ್ಲಿ ಉಚಿತ ಯೋಜನೆಗಳು ಸ್ಥಗಿತಗೊಂಡಿಲ್ಲ, ಸೋಲಿನ ಹತಾಶೆಯಲ್ಲಿ ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ: ಎಎಪಿ

ಬೆಂಗಳೂರು: ಲೋಕಸಭೆ ಫಲಿತಾಂಶದ ಬಳಿಕ ಆಮ್‌ ಆದ್ಮಿ ಪಾರ್ಟಿ ದೆಹಲಿಯಲ್ಲಿ ಉಚಿತ ವಿದ್ಯುತ್‌ ಯೋಜನೆಯನ್ನು ಸ್ಥಗಿತಗೊಳಿಸಿರುವುದಾಗಿ ಮೈಸೂರು-ಕೊಡಗು ಕ್ಷೇತ್ರದ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿಯೊಬ್ಬರು ಸುಳ್ಳು ಹೇಳಿಕೆ ನೀಡಿದ್ದಾರೆ. ಸೋಲಿನ ಹತಾಶೆಯಿಂದ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ದೆಹಲಿಯಲ್ಲಿ ಉಚಿತ ವಿದ್ಯುತ್‌, ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಎಲ್ಲ ಜನಪರ ಯೋಜನೆಗಳು ಅಸ್ತಿತ್ವದಲ್ಲಿವೆ ಎಂದು ಎಎಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್‌ ದಾಸರಿ ಸ್ಪಷ್ಟಪಡಿಸಿದ್ದಾರೆ.

ಈ ವಿಚಾರವಾಗಿ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ಮಾದರಿಯ ಉಚಿತ ಯೋಜನೆಗಳನ್ನು ನಕಲು ಮಾಡಿ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಮುಖಂಡರಿಗೆ ಕೃತಜ್ಞತೆ ಎಂಬುವುದಿಲ್ಲ. ವಿಧಾನಸಭೆಯಲ್ಲಿ ಗೆದ್ದ ಬಳಿಕ ಗ್ಯಾರಂಟಿ ಯೋಜನೆಗಳು ನಮ್ಮದೇ ಯೋಜನೆಗಳು ಎಂಬಂತೆ ಹೇಳಿಕೊಂಡರು. ಇದೀಗ ಲೋಕಸಭೆಯಲ್ಲಿ ಸೋತ ಬಳಿಕ ಎಎಪಿಯ ಉಚಿತ ಯೋಜನೆಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೆಹಲಿ ಸರ್ಕಾರವು ಸರ್‌ಪ್ಲಸ್‌ ಬಜೆಟ್‌ನಲ್ಲಿ ಉಚಿತ ಕೊಡುಗೆಗಳನ್ನು ನೀಡುತ್ತಿದೆ. ಸಂಪನ್ಮೂಲಗಳ ಕ್ರೋಢೀಕರಣ, ಭ್ರಷ್ಟಾಚಾರ ರಹಿತ ಆಡಳಿತದಿಂದ ದೆಹಲಿಯಲ್ಲಿ ಉಚಿತ ಯೋಜನೆಗಳು ಯಶಸ್ವಿಯಾಗಿವೆ. ಆದರೆ ಕರ್ನಾಟಕದಲ್ಲಿ ಸಾಲ ಮಾಡಿ ಉಚಿತ ಯೋಜನೆಗಳನ್ನು ಕೊಡಲಾಗುತ್ತಿದೆ. ಎಲ್ಲೆಡೆ ಭ್ರಷ್ಟಾಚಾರ ಮುಂದುವರಿದಿದೆ. ಈಗಾಗಲೇ ಹಲವು ಗುತ್ತಿಗೆದಾರರು, ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ದುರಾಡಳಿತ ತಾಂಡವವಾಡುತ್ತಿದೆ. ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗದಂತೆ ಜನಪರ ಉಚಿತ ಯೋಜನೆಗಳನ್ನು ಹೇಗೆ ಮುಂದುವರಿಸಿಕೊಂಡು ಹೋಗಬಹುದು ಎಂಬುದನ್ನು ದೆಹಲಿ ಆಡಳಿತ ಮಾದರಿಯಿಂದ ಕಲಿಯಿರಿ. ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳು ಐಐಟಿ, ಜೆಇಇ, ನೀಟ್‌ ಮುಂತಾದ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ಕೃಷ್ಟ ಮಟ್ಟದ ಚಿಕಿತ್ಸೆ ಉಚಿತವಾಗಿ ಸಿಗುತ್ತಿದೆ. ಕುಡಿಯುವ ನೀರು, ವಿದ್ಯುತ್‌, ಚರಂಡಿ ವ್ಯವಸ್ಥೆ ಹೀಗೆ ಮೂಲಭೂತ ವಿಚಾರಗಳಿಗೆ ಒತ್ತು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಕಿರುಕುಳದ ನಡುವೆಯೂ ಜನಮೆಚ್ಚುಗೆಯ ಕೆಲಸವನ್ನು ಎಎಪಿ ಸರ್ಕಾರ ಮಾಡುತ್ತಿದೆ. ಉಚಿತ ಯೋಜನೆಗಳ ಬಗ್ಗೆ ದೂರುವ ಬದಲು ಉಚಿತ ಕೊಡುಗೆಗಳ ನಡುವೆಯೂ ಹೇಗೆ ಆಡಳಿತ ನಡೆಸಲಾಗುತ್ತಿದೆ ಎಂಬ ಬಗ್ಗೆ ಕೂಲಂಕಷವಾಗಿ ಅಧ್ಯಯನ ಮಾಡಿಕೊಂಡು ಬನ್ನಿ ಎಂದರು.

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ ಮುಖಂಡರೂ ಬಿಜೆಪಿಯ ವಾಟ್ಸಾಪ್‌ ಯೂನಿವರ್ಸಿಟಿಗೆ ಬಲಿಯಾಗಿದ್ದಾರೆ. ಇತ್ತೀಚೆಗೆ ದೆಹಲಿ ಶಿಕ್ಷಣ ಸಚಿವೆ ಅತಿಷಿ ಅವರ ಫೇಕ್‌ ವಿಡಿಯೊ ಒಂದನ್ನು ಬಿಜೆಪಿ ಐಟಿ ಸೆಲ್‌ ಹರಿಬಿಟ್ಟಿದೆ. ಅದನ್ನೇ ನಂಬಿರುವ ಕಾಂಗ್ರೆಸ್‌ ಮುಖಂಡರು ಏನೇನೋ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮೊದಲು ಸೋಲಿನ ಪರಾಮರ್ಶೆ ಮಾಡಿಕೊಳ್ಳಿ. ನಿಮ್ಮ ಅಸಮರ್ಥತೆಗೆ ಜನಪರ ಉಚಿತ ಯೋಜನೆಗಳನ್ನು ದೂರದಿರಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X