ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ: KSRTC

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತಿಳಿಸಿದೆ.
ಶುಕ್ರವಾರ ಈ ಕುರಿತು ಪ್ರಕಟನೆ ನೀಡಿರುವ KSRTC, ಫೆ.28ರಿಂದ ಮಾ.17ರ ವರೆಗೆ, ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ‘ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರ’ವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದೆ.
ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ.
Next Story




