Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಯುಷ್ ಚಿಕಿತ್ಸಾಲಯಗಳಲ್ಲಿ ಉಚಿತ ಯೋಗ...

ಆಯುಷ್ ಚಿಕಿತ್ಸಾಲಯಗಳಲ್ಲಿ ಉಚಿತ ಯೋಗ ತರಬೇತಿ : ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ18 Feb 2024 6:18 PM IST
share
ಆಯುಷ್ ಚಿಕಿತ್ಸಾಲಯಗಳಲ್ಲಿ ಉಚಿತ ಯೋಗ ತರಬೇತಿ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯ ಸರಕಾರವು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆಯುಷ್ ಚಿಕಿತ್ಸಾಲಯಗಳಲ್ಲಿ ಆಯುಷ್ಮಾನ್ ಮಂದಿರಗಳ ಮೂಲಕ ನುರಿತ ಯೋಗ ತರಬೇತುದಾರರಿಂದ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ರವಿವಾರ ವಿಧಾನಸೌಧದ ಮುಂಭಾಗದಲ್ಲಿ ಆಯುಷ್ ಇಲಾಖೆ ಮತ್ತು ಯೋಗ ಗಂಗೋತ್ರಿ ಟ್ರಸ್ಟ್ ಸಹಯೋಗದೊಂದಿಗೆ ರಥಸಪ್ತಮಿ ಅಂಗವಾಗಿ ಆಯೋಜಿಸಲಾಗಿದ್ದ ‘ಯೋಗ ಮತ್ತು 108 ಸೂರ್ಯ ನಮಸ್ಕಾರ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೂರ್ಯನಮಸ್ಕಾರ ಮಾಡುವುದರಿಂದ ಉತ್ತಮ ಶಾರೀರಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯವನ್ನು ಸಮೃದ್ಧಿಸಿಕೊಳ್ಳಬಹುದು ಎಂದರು.

ಸೂರ್ಯ ನಮಸ್ಕಾರದ ಅಭ್ಯಾಸದಿಂದ ಶರೀರ ಮತ್ತು ಮನಸ್ಸಿಗೆ ನವ ಚೈತನ್ಯ ಸಿಗುತ್ತದೆ. ಸೂರ್ಯ ನಮಸ್ಕಾರ, ಇನ್ನಿತರೆ ಆಸನಗಳು ಪ್ರಾಣಾಯಾಮ ಹಾಗೂ ಧ್ಯಾನ ಇನ್ನಿತರೆ ಅಭ್ಯಾಸಗಳಿಂದ ದೇಹ, ಮನಸ್ಸು ಚುರುಕುಗೊಳ್ಳುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಅವರು ಹೇಳಿದರು.

ಆಧುನಿಕ ಜಗತ್ತಿನ ಬದಲಾದ ಜೀವನ ಶೈಲಿಯಿಂದ ಉಂಟಾಗುವ ಮನುಷ್ಯನ ಶಾರೀರಿಕ ಮತ್ತು ಮಾನಸಿಕ ಸಮಸ್ಯೆಗಳಿಗೆ ಸೂರ್ಯ ನಮಸ್ಕಾರದಂತಹ ಯೋಗಾಭ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ದಿನದ ಪ್ರಮುಖ ಅಗತ್ಯಗಳಲ್ಲೊಂದಾಗಿದೆ ಎಂದು ದಿನೇಶ್ ಗುಂಡೂರಾವ್ ಸಲಹೆ ನೀಡಿದರು.

ಭಾರತೀಯ ಸಂಸ್ಕೃತಿಯಲ್ಲಿ ಉತ್ತಮ ಆರೋಗ್ಯ, ಸುಖ-ಸಮೃದ್ಧಿಗಾಗಿ ನಿತ್ಯವು ಸೂರ್ಯನಿಗೆ ಪೂಜೆ ಸಲ್ಲಿಸಲಾಗುತ್ತದೆ. ಸೂರ್ಯನಿಲ್ಲದೆ ದಿನಗಳನ್ನು ಊಹಿಸಲು ಕೂಡ ಅಸಾಧ್ಯ. ಸೂರ್ಯನ ಕಿರಣಗಳು ಮನುಷ್ಯನ ಆರೋಗ್ಯಕ್ಕೆ ಎಷ್ಟು ಪ್ರಮುಖವಾದದು ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ ಎಂದು ಅವರು ಹೇಳಿದರು.

ಜನರ ಉತ್ತಮ ಆರೋಗ್ಯಕ್ಕಾಗಿ ಸರಕಾರವು ಜಾರಿಗೊಳಿಸಿರುವ ಉಚಿತ ಯೋಗ ತರಬೇತಿಯ ಪ್ರಯೋಜನವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಂಡು ಆರೋಗ್ಯವಂತ ಜೀವನ ನಡೆಸಬೇಕು ದಿನೇಶ್ ಗುಂಡೂರಾವ್ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಆಯುಷಷ್ ಇಲಾಖೆಯ ಆಯುಕ್ತ ಶ್ರೀನಿವಾಸಲು, ಯೋಗ ಗಂಗೋತ್ರಿ ಸಂಸ್ಥೆಯ ಡಾ. ಆರಾಧ್ಯ ಗುರುರಾಜ, ಆಯುಷ್ ಇಲಾಖೆಯ ತರಬೇತುದಾರರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X