Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಧಾರ ರಹಿತ ಸುದ್ದಿಗಳಿಂದ ಗೊಂದಲ;...

ಆಧಾರ ರಹಿತ ಸುದ್ದಿಗಳಿಂದ ಗೊಂದಲ; "ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲು ಯಾವುದೇ ಶುಲ್ಕವಿಲ್ಲ"

ವಾರ್ತಾಭಾರತಿವಾರ್ತಾಭಾರತಿ27 Aug 2026 8:25 PM IST
share
ಆಧಾರ ರಹಿತ ಸುದ್ದಿಗಳಿಂದ ಗೊಂದಲ; ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲು ಯಾವುದೇ ಶುಲ್ಕವಿಲ್ಲ

ಬೆಂಗಳೂರು : ಸ್ವಾತಂತ್ರ್ಯ ಉದ್ಯಾನವನದ ಆವರಣದಲ್ಲಿ ನಡೆಸುವ ಯಾವುದೆ ಪ್ರತಿಭಟನೆಗಳಿಗೆ ರಾಜ್ಯ ಸರಕಾರ ಅಥವಾ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವತಿಯಿಂದ ಯಾವುದೆ ಶುಲ್ಕ ನಿಗದಿಪಡಿಸಲಾಗಿಲ್ಲ. ಆದರೆ, ಈ ಸಂಬಂಧ ಕೆಲವು ಮಾಧ್ಯಮಗಳು ಮಾಡಿದ ಆಧಾರ ರಹಿತ ಸುದ್ದಿಗಳು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಲು ಕಾರಣವಾದವು. ಅಲ್ಲದೇ, ಪ್ರಮುಖ ಪ್ರತಿಪಕ್ಷ ಬಿಜೆಪಿ ಆಧಾರ ರಹಿತ ಸುದ್ದಿಯನ್ನು ನಂಬಿಕೊಂಡು ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧ ಪೋಸ್ಟ್‌ಗಳನ್ನು ಹಂಚಿಕೊಂಡು ಟೀಕೆಗೆ ಗುರಿಯಾಗಿದೆ.

ಸ್ವಾತಂತ್ರ್ಯ ಉದ್ಯಾನವನದ ಒಂದು ಭಾಗವನ್ನು ಪ್ರತಿಭಟನೆ ಹಾಗೂ ಸಾರ್ವಜನಿಕ ಸಭೆಗಳನ್ನು ನಡೆಸಲು ಸರಕಾರ ಮೀಸಲಿಟ್ಟಿದೆ. ಆದರೆ, ವಾಹನಗಳ ನಿಲುಗಡೆಗಾಗಿ ನಿರ್ಮಿಸಿರುವ ಕಟ್ಟಡದ ಮೇಲ್ಭಾಗದಲ್ಲಿ ನಿರ್ಮಾಣ ಮಾಡಿರುವ ಕಟ್ಟಡದಲ್ಲಿ ಸಭೆಗಳನ್ನು ಆಯೋಜಿಸಲು ಒಂದು ಲಕ್ಷ ರೂ.ಬಾಡಿಗೆ ನಿಗದಿ ಮಾಡಲಾಗಿದೆ.

ಖಾಸಗಿ ಕಾರ್ಯಕ್ರಮಗಳಿಗೆ ಕಟ್ಟಡ ಬಳಕೆಗೆ ವಿಧಿಸಬಹುದಾದ ಬಾಡಿಗೆಯನ್ನು ಪ್ರತಿಭಟನೆಯ ಶುಲ್ಕವೆಂದು ಕೆಲವು ಮಾಧ್ಯಮಗಳು ಭಾವಿಸಿಕೊಂಡು ಮಾಡಿದ ವರದಿಗಳೆ ಈ ಗೊಂದಲಕ್ಕೆ ಪ್ರಮುಖ ಕಾರಣವಾಗಿದೆ. ಬಿಜೆಪಿಯು ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸದೆ, ಅಪಪ್ರಚಾರಕ್ಕೆ ಮುಂದಾಗಿದ್ದು, ಸಾರ್ವಜನಿಕರಲ್ಲಿ ಹಾಗೂ ಹೋರಾಟಗಾರರಲ್ಲಿ ಗೊಂದಲಗಳು ಮೂಡಲು ಕಾರಣವಾಯಿತು.

ಈ ಮೊದಲು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಬಿಜೆಪಿ ಕರ್ನಾಟಕ, "ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲೂ ₹1 ಲಕ್ಷ ಬಾಡಿಗೆ! ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಲ್ಲಿ ಜನರ ಪ್ರಜಾಸತ್ತಾತ್ಮಕ ಹೋರಾಟದ ಹಕ್ಕಿಗೂ ಬೆಲೆ ಕಟ್ಟುವಂತಾಗಿದೆ. ಜನರ ಧ್ವನಿಯನ್ನು ಹತ್ತಿಕ್ಕುವ ಈ ರಿಯಲ್ ಎಸ್ಟೇಟ್ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ" ಎಂದು ಬರೆದುಕೊಂಡಿತ್ತು.

ʼಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿಗಳನ್ನು ನಡೆಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA ) ದಿನಕ್ಕೆ 1 ಲಕ್ಷ ಬಾಡಿಗೆ ನಿಗದಿಪಡಿಸಿದ್ದು, ಆದೇಶ ಹೊರಡಿಸಿದೆʼ ಎಂದು ನ್ಯೂಸ್18 ಕನ್ನಡ, ಕನ್ನಡಪ್ರಭ, ನ್ಯೂಸ್‌ಫಸ್ಟ್ ಕನ್ನಡ ಸಹಿತ ಹಲವು ಪ್ರಮುಖ ಮಾಧ್ಯಮಗಳು ಸುದ್ದಿ ಪ್ರಕಟಿಸಿತ್ತು.












Tags

Freedom Park
share
ವಾರ್ತಾಭಾರತಿ
ವಾರ್ತಾಭಾರತಿ
Next Story
X