Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಗಸ್ಟ್‌ 4 ರಿಂದ 15ರವರೆಗೆ ಲಾಲ್...

ಆಗಸ್ಟ್‌ 4 ರಿಂದ 15ರವರೆಗೆ ಲಾಲ್ ಭಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ವಾರ್ತಾಭಾರತಿವಾರ್ತಾಭಾರತಿ1 Aug 2023 9:21 PM IST
share
ಆಗಸ್ಟ್‌ 4 ರಿಂದ 15ರವರೆಗೆ ಲಾಲ್ ಭಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ಬೆಂಗಳೂರು, ಆ.1: ಈ ಬಾರಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥ ಸಸ್ಯಕಾಶಿ ಲಾಲ್ ಭಾಗ್‍ನಲ್ಲಿ ಫಲಪುಷ್ಪ ಪ್ರದರ್ಶನ ಆ.4 ರಿಂದ 15 ರವರೆಗೆ ನಡೆಯಲಿದೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಮಂಗಳವಾರ ನಗರದ ಲಾಲ್‍ಬಾಗ್‍ನ ತೋಟಗಾರಿಕಾ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.4ರಂದು ಸಂಜೆ 6ಕ್ಕೆ ಗಾಜಿನ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಪುಷ್ಪ ಪ್ರದರ್ಶನ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ, ಶಾಸಕ ಉದಯ್ ಬಿ.ಗರುಡಾಚಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಜತೆಗೆ ವಿವಿಧ ಕ್ಷೇತ್ರದ ಗಣ್ಯರು ಭಾಗಿಯಾಗಲಿದ್ದಾರೆ ಎಂದರು.

ಈ ಬಾರಿ ಫಲಪುಷ್ಪ ಪ್ರದರ್ಶನದಲ್ಲಿ ಸರಿ ಸುಮಾರು 10 ಲಕ್ಷಕ್ಕೂ ಅಧಿಕ ವೀಕ್ಷಕರು ಆಗಮಿಸುವ ನಿರೀಕ್ಷೆ ಇದೆ. ಲಾಲ್‍ಬಾಗ್‍ನಲ್ಲಿ ಫಲಪುಷ್ಪ ಮಾತ್ರವಲ್ಲದೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಆ.5ರಂದು ಹೈಕೋರ್ಟಿನ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಇಕೆಬಾನ, ತರಕಾರಿ ಕೆತ್ತನೆ, ಪುಷ್ಪಭಾರತಿ, ಬೋನ್ಸಾಯ್, ಡಚ್ ಹೂವಿನ ಜೋಡಣೆ, ಥಾಯ್‍ಆರ್ಟ್, ಜಾನೂರು ಒಣಹೂವಿನ ಜೋಡಣೆಯ ಕಲೆಗಳ ಸ್ಪರ್ಧೆಗಳ ಪ್ರದರ್ಶನವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಮಾಜಿ ಸಚಿವೆ ಉಮಾಶ್ರೀ ಪಾಲ್ಗೊಳ್ಳಲಿದ್ದಾರೆ ಎಂದು ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಆ.14ರಂದು ಲಾಲ್‍ಬಾಗ್‍ನಲ್ಲಿಯೇ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾಹಿತಿ ಶೂದ್ರ ಶ್ರೀನಿವಾಸ್, ಜಾನಪದ ತಜ್ಞ ಡಾ. ಕೆ.ಆರ್. ಸಂಧ್ಯಾ ರೆಡ್ಡಿ, ನಟಿ ರಚಿತಾ ರಾಮ್ ಬಹುಮಾನಗಳನ್ನು ವಿತರಿಸಲಿದ್ದಾರೆ ಎಂದು ಎಸ್.ಎಸ್.ಮಲ್ಲಿಕಾರ್ಜುನ್ ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ತೋಟಗಾರಿಕೆ ಉಪ ನಿರ್ದೇಶಕಿ ಕುಸುಮಾ, ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್, ನಿರ್ದೇಶಕ ಡಿ.ಎಸ್.ರಮೇಶ್ ಸೇರಿದಂತೆ ಹಲವರು ಇದ್ದರು.

Tags

flower show
share
ವಾರ್ತಾಭಾರತಿ
ವಾರ್ತಾಭಾರತಿ
Next Story
X