Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದರ್ಶನ್ ಸಂಪರ್ಕದಲ್ಲಿದ್ದವರೆಲ್ಲಾ ಕೊಲೆ...

ದರ್ಶನ್ ಸಂಪರ್ಕದಲ್ಲಿದ್ದವರೆಲ್ಲಾ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲು ಸಾಧ್ಯವಿಲ್ಲ: ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ18 Jun 2024 6:05 PM IST
share
ದರ್ಶನ್ ಸಂಪರ್ಕದಲ್ಲಿದ್ದವರೆಲ್ಲಾ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲು ಸಾಧ್ಯವಿಲ್ಲ: ಜಿ.ಪರಮೇಶ್ವರ್

ಬೆಂಗಳೂರು : ದರ್ಶನ್ ಜೊತೆ ಸಂಪರ್ಕದಲ್ಲಿದ್ದವರೆಲ್ಲಾ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಲಭ್ಯವಿರುವ ಸಾಕ್ಷಿಗಳ ಆಧಾರದ ಮೇಲೆ ತನಿಖೆ ಮುಂದುವರೆದಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ನಟರಾಗಿರುವುದರಿಂದಾಗಿ ಬಹಳಷ್ಟು ಮಂದಿ ಒಂದಲ್ಲಾ ಒಂದು ರೀತಿ ಸಂಪರ್ಕದಲ್ಲಿರುತ್ತಾರೆ. ಅಂದ ಮಾತ್ರಕ್ಕೆ ಕೊಲೆಗೆ ಸಂಪರ್ಕವಿದೆ, ಭಾಗಿಯಾಗಿದ್ದಾರೆ ಎಂದು ಹೇಳಲು ಬರುವುದಿಲ್ಲ. ತನಿಖೆಯ ಹಂತದಲ್ಲಿ ದೊರೆಯುವ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ ಎಂದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಪಟ್ಟಂತೆ ಪ್ರತಿಭಟನೆ ನಡೆಸುವುದು ಪ್ರತಿಪಕ್ಷ ಬಿಜೆಪಿಯವರ ಹಕ್ಕು. ಆಡಳಿತ ನಡೆಸುವುದು ನಮ್ಮ ಹಕ್ಕು. ನಮಗೂ ಅವರಿಗೂ ಇಷ್ಟೇ ವ್ಯತ್ಯಾಸ ಎಂದು ಅವರು ಹೇಳಿದರು.

ಪೆಟ್ರೋಲ್, ಡೀಸೆಲ್ ಮಾರಾಟ ತೆರಿಗೆ ಹೆಚ್ಚಳದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯವರು ಇತ್ತೀಚೆಗೆ ಪ್ರತಿಯೊಂದರಲ್ಲೂ ರಾಜಕಾರಣ ಮಾಡುತ್ತಾರೆ. ದೇಶದಲ್ಲಿ 14 ಬಾರಿ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಿಸಿದರೂ ಅದನ್ನು ಮರೆತು ಹೋದಂತಿದೆ. ಕಚ್ಚಾತೈಲದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆಯಿದ್ದಾಗಲೂ ಬೆಲೆ ಹೆಚ್ಚಿಸಿ ಸಂಗ್ರಹಿಸಿದ ಹಣ ಎಲ್ಲಿ ಹೋಯಿತು ಎಂದು ಹೇಳುತ್ತಿಲ್ಲ ಎಂದು ಡಾ.ಜಿ.ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು.

ಪಿಎಸ್‍ಐ ನೇಮಕಾತಿ ವಿಷಯವಾಗಿ ಇನ್ನೆರೆಡು ವಾರಗಳಲ್ಲಿ ಅಂತಿಮ ಘಟ್ಟ ತಲುಪಲಾಗುವುದು, ಈಗಾಗಲೇ ಎರಡು-ಮೂರು ಸಭೆಗಳನ್ನು ನಡೆಸಲಾಗಿದೆ. ಕೆಲವು ತಾಂತ್ರಿಕ ಸಮಸ್ಯೆಗಳನ್ನು ಪ್ರಸ್ತಾಪಿಸಲಾಗಿದ್ದು, ಅದನ್ನು ಬಗೆಹರಿಸಲಾಗುವುದು ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.

ರಾಹುಲ್‍ಗಾಂಧಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟು ರಾಯ್‍ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ಆ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಭಾರತ್ ಜೋಡೊದಂತಹ ಪಾದಯಾತ್ರೆ ನಡೆಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಪಕ್ಷವನ್ನು ಕಟ್ಟಿ ಹೊಸತನವನ್ನು ತಂದುಕೊಟ್ಟಿದ್ದಾರೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X