Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜಕೀಯ ಸಭೆಗಳನ್ನು ನಾವು ಈವರೆಗೂ...

ರಾಜಕೀಯ ಸಭೆಗಳನ್ನು ನಾವು ಈವರೆಗೂ ಮಾಡಿಲ್ಲ, ಹಿರಿಯರಾಗಿ ನಮಗೂ ಜವಾಬ್ದಾರಿ ಇದೆ : ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ10 Oct 2024 3:57 PM IST
share
ರಾಜಕೀಯ ಸಭೆಗಳನ್ನು ನಾವು ಈವರೆಗೂ ಮಾಡಿಲ್ಲ, ಹಿರಿಯರಾಗಿ ನಮಗೂ ಜವಾಬ್ದಾರಿ ಇದೆ : ಜಿ.ಪರಮೇಶ್ವರ್

ಬೆಂಗಳೂರು : "ನಾನಾಗಲಿ, ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ಅವರಾಗಲಿ ಮುಖ್ಯಮಂತ್ರಿ ಪದವಿ ಬಗ್ಗೆ ಯಾವತ್ತೂ ಚರ್ಚೆ ಮಾಡಿಲ್ಲ" ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸ್ಪಷ್ಟಪಡಿಸಿದರು.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಮಾಧ್ಯಮ ಸ್ನೇಹಿತರು ಕೇಳಿದಾಗ ಐದು ವರ್ಷ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರೆಯುತ್ತಾರೆ ಎಂದು ಅನೇಕ ಸಲ ಹೇಳಿದ್ದೇನೆ. ನಿನ್ನೆ ಮೈಸೂರಿನಲ್ಲಿಯೂ ಸಹ ಇದೇ ಮಾತನ್ನು ಹೇಳಿದ್ದೇನೆ. ನಾವು ಯಾರು ಸಹ ಮುಖ್ಯಮಂತ್ರಿಯನ್ನು ಬದಲಾಯಿಸಿ, ಬೇರೆಯವರನ್ನು ಮಾಡಿ ಎಂದು ಮಾತನಾಡಿಲ್ಲʼ ಎಂದರು.

ʼಇನ್ನು ಮುಂದೆ ನಾನು ವೈಯಕ್ತಿಕವಾಗಿ ಮುಖ್ಯಮಂತ್ರಿ ವಿಚಾರದಲ್ಲಿ ನೀವು ಕೇಳಿದರೂ ಪ್ರತಿಕ್ರಿಯಿಸುವುದಿಲ್ಲ. ಕೆಲವು ವಿಚಾರಗಳಲ್ಲಿ ಅಗತ್ಯ ಇದ್ದರೆ ಭೇಟಿ ಮಾಡುತ್ತೇವೆ. ಅನವಶ್ಯಕವಾಗಿ ಡಿನ್ನರ್ ಮೀಟಿಂಗ್, ರಾಜಕೀಯ ಸಭೆಗಳನ್ನು ನಾವು ಈವರೆಗೂ ಮಾಡಿಲ್ಲ, ಮುಂದೆಯೋ ಮಾಡೋದಿಲ್ಲ. ಇದು ನನ್ನ ಸ್ಪಷ್ಟೀಕರಣʼ ಎಂದು ಹೇಳಿದರು.

ಏನೂ ಇಲ್ಲದೇ ಅಪಾದಿತರ ಸ್ಥಾನದಲ್ಲಿ ನಿಲ್ಲಿಸಿದರೆ ನಮಗೆ ಬೇಜಾರಾಗುವುದಿಲ್ಲವೇ? ನಾವು ಜವಾಬ್ದಾರಿ ಇರುವವರು. ಸುಮ್ಮನೇ ಹುಡುಗಾಟಿಕೆ ಮಾಡುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ, ನನಗು ಜವಾಬ್ದಾರಿ ಇದೆ ಎಂದರು.

ವಿಪಕ್ಷ ನಾಯಕ ಆರ್.ಅಶೋಕ್ ಆರೋಪದ ಕುರಿತು ಪ್ರತಿಕ್ರಿಯಿಸಿ, ಸಿದ್ಧಗಂಗಾ ಮಠಕ್ಕೂ ನಮಗೂ ಇರುವ ಸಂಬಂಧವೇ ಬೇರೆ. ಇತ್ತೀಚೆಗೆ ನಾನು ಮಠಕ್ಕೆ ಹೋಗೇ ಇಲ್ಲ. ಸಿದ್ಧಗಂಗಾ ಮಠಕ್ಕೆ ಹೋದರೆ ಸ್ವಾಮೀಜಿಯವರ ಗದ್ದುಗೆಗೆ ಮತ್ತು ಸಿದ್ಧಲಿಂಗ ಸ್ವಾಮೀಜಿಯವರಿಗೆ ನಮಸ್ಕರಿಸಿ ಬರುತ್ತೇನೆ. ನನ್ನ ತಂದೆಯವರ ಕಾಲದಿಂದ ದೊಡ್ಡ ಸ್ವಾಮಿಜಿಯವರು ನಮಗೆಲ್ಲ ಆದರ್ಶ. ಮಠಕ್ಕೆ ಹೋಗಿ ರಾಜಕೀಯ ಮಾತಾಡುವುದಿಲ್ಲ. ಸಿದ್ದಗಂಗಾ ಮಠಕ್ಕೂ ನಮ್ಮ ಕುಟುಂಬಕ್ಕೂ ಅಪಾರವಾದ ಸಂಬಂಧ. ಮಠಕ್ಕೆ ಹೋದಾಗಲೆಲ್ಲ ಮುಖ್ಯಮಂತ್ರಿ ಆಗಬೇಕೆಂದು ಪೂಜೆ ಮಾಡುವುದಿಲ್ಲ ಎಂದು ಹೇಳಿದರು.

ಕೋವಿಡ್ ಸಂದರ್ಭದಲ್ಲಿನ ಹಗರಣದ ತನಿಖೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಕಲೆ ಹಾಕಬೇಕು ಎಂದು ಹೇಳುತ್ತಿದ್ದಾರೆ. ಹಿಂದಿನ ಸರ್ಕಾರದಲ್ಲಿ ನಡೆದ ಅಕ್ರಮ ಪ್ರಕರಣಗಳ ತನಿಖೆಯ ಪರಿಶೀಲನೆ ಸಮಿತಿಯ ಸಭೆಯನ್ನು ನಿನ್ನೆ ನಡೆಸಿದ್ದೇನೆ. ಹಲವು ವಿಚಾರಗಳು ಚರ್ಚಿಸಲಾಗಿದೆ. ಕೋವಿಡ್ ತನಿಖೆಯ ಪ್ರಕರಣಕ್ಕೆ ಪ್ರತ್ಯೇಕ ಸಮಿತಿ ಮಾಡಿರುವುದರಿಂದ ವಿಷಯ ನಮ್ಮ ಮುಂದೆ ಚರ್ಚೆಗೆ ಬಂದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X