Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ 137 ಅಕ್ರಮ ವಲಸಿಗರ ವಿರುದ್ಧ...

ರಾಜ್ಯದಲ್ಲಿ 137 ಅಕ್ರಮ ವಲಸಿಗರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದೇವೆ : ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ5 March 2025 8:47 PM IST
share
ರಾಜ್ಯದಲ್ಲಿ 137 ಅಕ್ರಮ ವಲಸಿಗರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದೇವೆ : ಜಿ.ಪರಮೇಶ್ವರ್

ಬೆಂಗಳೂರು ರಾಜ್ಯದಲ್ಲಿ ಈವರೆಗೆ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ 137 ಅಕ್ರಮ ವಲಸಿಗರನ್ನು ಗುರುತಿಸಿ, ಬಂಧಿಸಿ, ಕಾನೂನು ಕ್ರಮ ಕೈಗೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಗಮನ ಸೆಳೆದ ಸೂಚನೆಗೆ ಉತ್ತರಿಸಿದ ಅವರು, ಕೆಲವು ಸಂದರ್ಭದಲ್ಲಿ ರಾಯಭಾರಿ ಕಚೇರಿಗಳಿಗೆ ಮಾಹಿತಿ ತಲುಪಿಸುತ್ತೇವೆ. ವಿದೇಶಾಂಶ ವ್ಯವಹಾರ ಇಲಾಖೆಗೂ ಮಾಹಿತಿ ನೀಡುತ್ತೇವೆ. ಅವರು ಆಯಾ ದೇಶಗಳ ರಾಯಭಾರಿ ಕಚೇರಿಗಳಿಗೆ ಮಾಹಿತಿ ನೀಡುತ್ತಾರೆ. ಅಕ್ರಮ ವಲಸಿಗರನ್ನು ಗಡಿಪಾರು ಮಾಡುವವರೆಗೆ ನಾವು ಕಾಯಬೇಕು ಎಂದು ಹೇಳಿದರು.

ಅಕ್ರಮ ವಲಸಿಗರನ್ನು ಇರಿಸಲು ನಾವು ಫಾರಿನರ್ಸ್ ಡಿಟೇಂಷನ್ ಸೆಂಟರ್ ಮಾಡಿದ್ದೇವೆ. ಆಯಾ ದೇಶಗಳಿಂದ ಅನುಮತಿ ಸಿಕ್ಕ ಕೂಡಲೆ ನಾವು ಅವರನ್ನು ಗಡಿಪಾರು ಮಾಡುತ್ತೇವೆ. ಈವರೆಗೆ ರಾಜ್ಯದಲ್ಲಿ 25 ಮಂದಿ ಪಾಕಿಸ್ತಾನದವರನ್ನು ಪತ್ತೆ ಹಚ್ಚಿ ಜೈಲಿನಲ್ಲಿಡಲಾಗಿದೆ. ಅದೇ ರೀತಿ ಬಾಂಗ್ಲಾ ದೇಶದವರನ್ನು ಬಂಧಿಸಿದ್ದೇವೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ 84, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 27, ಶಿವಮೊಗ್ಗ ಜಿಲ್ಲೆಯಲ್ಲಿ 12, ಹಾಸನ ಜಿಲ್ಲೆಯಲ್ಲಿ 3, ಮಂಗಳೂರು 1, ಉಡುಪಿಯಲ್ಲಿ 10 ಜನರನ್ನು ಬಂಧಿಸಿದ್ದೇವೆ. ಈ ಪೈಕಿ ಬಿಜಾಪುರ ಇಲ್ಲ. ಆದರೆ, ಬಿಜಾಪುರದಲ್ಲಿ 2016ರಲ್ಲಿ 33 ಜನ ಬಾಂಗ್ಲಾ ದೇಶಿಯರು ನೆಲೆಸಿದ್ದರು ಎಂದು ತಿಳಿದು ಬರುತ್ತಿದ್ದಂತೆ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ, ಅವರನ್ನು ಗಡಿಪಾರು ಮಾಡಲಾಗಿದೆ ಎಂದು ಅವರು ಹೇಳಿದರು.

ಬಿಜಾಪುರದಲ್ಲಿ ಯಾವುದೇ ಪಾಕಿಸ್ತಾನ, ಬಾಂಗ್ಲಾದೇಶಿಯರು ಇಲ್ಲ. ಭೂ ಮಾಫಿಯಾಕ್ಕೆ ಸಂಬಂಧಿಸಿದಂತೆ 27 ಪ್ರಕರಣ ದಾಖಲು ಮಾಡಲಾಗಿದೆ. ಎಂಟು ಪ್ರಕರಣಗಳಲ್ಲಿ ಎಫ್‍ಐಆರ್ ಆಗಿದೆ. 9 ಪ್ರಕರಣಗಳಲ್ಲಿ ತನಿಖೆ ಮುಂದುವರೆದಿದೆ. 170 ಜನರ ವಿರುದ್ಧ ಈ ಪ್ರಕರಣಗಳಲ್ಲಿ ಕ್ರಮ ಕೈಗೊಂಡಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು.

ಎನ್‍ಐಎ ಘಟಕ ರಚನೆ ಮಾಡೋದು ಕೇಂದ್ರ ಸರಕಾರಕ್ಕೆ ಬಿಟ್ಟಿದ್ದು. ನಾವು ಪ್ರಸ್ತಾವನೆ ಸಲ್ಲಿಸಲು ಹೋಗುವುದಿಲ್ಲ. ಆಫ್ರಿಕನ್ ದೇಶಗಳಿಂದ ಡ್ರಗ್ ಪೆಡ್ಲಿಂಗ್‍ಗಳನ್ನು ನಡೆಸುತ್ತಿದ್ದಾರೆ ಅವರನ್ನು ಗುರುತಿಸಿ, ಗಡಿಪಾರು ಮಾಡಿದ್ದೇವೆ. ಅದೇ ರೀತಿ ಬಾಂಗ್ಲಾ ದೇಶಿಯರನ್ನು ಗುರುತಿಸಿ ಗಡಿಪಾರು ಮಾಡಿದ್ದೇವೆ. ಕಾಫಿ ಪ್ಲಾಂಟೇಷನ್‍ಗಳಲ್ಲಿ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. ಅವರು ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಎಲ್ಲವನ್ನೂ ಮಾಡಿಕೊಳ್ಳುತ್ತಾರೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X