ಶಾಸಕರು ಹೈಕಮಾಂಡ್ ಭೇಟಿಯಾದರೆ ಬೇರೆ ಅರ್ಥ ಬೇಡ : ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯ ನಾಯಕರು ಅಥವಾ ಶಾಸಕರು ಹೊಸದಿಲ್ಲಿಯಲ್ಲಿ ಹೈಕಮಾಂಡ್ ಭೇಟಿಯಾದರೆ, ಇದಕ್ಕೆ ಬೇರೆ ಅರ್ಥ ಕೊಡುವುದು ಬೇಡ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಚೆಲುವರಾಯಸ್ವಾಮಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದಕ್ಕೆ ಬೇರೆ ಕಾರಣ ಇರುತ್ತದೆ.ಆದರೆ, ಅದಕ್ಕೆ ಬೇರೆ ಅರ್ಥ ಕೊಡೋದು ಸರಿಯಲ್ಲ ಎಂದರು.
ಹೈಕಮಾಂಡ್ ಮಧ್ಯಪ್ರವೇಶಿಸುವಂತೆ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ ಎನ್ನಲಾಗಿರುವ ವಿಚಾರವಾಗಿ ಮಾತನಾಡಿ, ಬಹಳ ಊಹಾಪೋಹಗಳಿವೆ. ಯಾವುದೇ ತೀರ್ಮಾನವಿರಲಿ, ಅದನ್ನು ಹೈಕಮಾಂಡ್ ತೀರ್ಮಾನಿಸಬೇಕು. ಸ್ಥಳೀಯವಾಗಿ ಯಾರೂ ಮಾಡಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.
Next Story





