Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಂಡ್ಯ ಜಿಲ್ಲೆಗೂ ‘ಕೋಮು ಹಿಂಸೆ ನಿಗ್ರಹ...

ಮಂಡ್ಯ ಜಿಲ್ಲೆಗೂ ‘ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ’ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ5 Dec 2025 8:33 PM IST
share
ಮಂಡ್ಯ ಜಿಲ್ಲೆಗೂ ‘ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ’ : ಗೃಹ ಸಚಿವ ಡಾ.ಜಿ.ಪರಮೇಶ್ವರ್
‘ಬೆಳ್ತಂಗಡಿಯಲ್ಲಿ ಸಿಐಡಿ ಉಪವಿಭಾಗ ಸ್ಥಾಪನೆ’

ಬೆಂಗಳೂರು : ಕರಾವಳಿ ಭಾಗದಲ್ಲಿ ಕೊಲೆ, ಕೋಮು ಗಲಭೆಗಳನ್ನು ತಡೆಗಟ್ಟಲು ವಿಶೇಷ ಕಾರ್ಯಪಡೆ ಸ್ಥಾಪಿಸಿದಂತೆಯೇ ಮಂಡ್ಯ ಜಿಲ್ಲೆಗೂ ವಿಶೇಷ ಕಾರ್ಯಪಡೆ ನೇಮಕ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶುಕ್ರವಾರ ಬೆಂಗಳೂರಿನ ನೃಪತುಂಗ ರಸ್ತೆಯ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಹಾಗೂ ರೆನಾಲ್ಟ್ ನಿಸ್ಸಾನ್ ಟೆಕ್ನಾಲಜಿ ಮತ್ತು ಬಿಸಿನೆಸ್ ಸೆಂಟರ್ ಇಂಡಿಯಾ ಸಂಸ್ಥೆಯ ಸಹಯೋಗದಲ್ಲಿ ಬೆಂಗಳೂರು ನಗರ ಪೊಲೀಸ್ ಘಟಕಕ್ಕೆ ‘ಹೈಜಿನ್ ಆನ್ ಗೋ’ ವಾಹನಗಳ ಹಸ್ತಾಂತರ ಹಾಗೂ ಪೊಲೀಸ್ ಇಲಾಖೆಯ ‘ಪ್ರಗತಿಯ ಸ್ತಂಭಗಳು’ ಪುಸ್ತಕವನ್ನು ಬಿಡುಗಡೆಗೊಳಿಸಿ ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕರಾವಳಿ ಭಾಗದಲ್ಲಿ ಹಲವು ಕೊಲೆ, ಕೋಮು ಗಲಭೆಗಳು ನಡೆದವು. ಶಾಂತಿ ಇಲ್ಲದಂತಾಗಿತ್ತು. ಸಮಾಜದಲ್ಲಿ ದ್ವೇಷದ ಭಾವನೆ ಮೂಡುತ್ತಿರುವುದನ್ನು ಗಮನಿಸಿ, ದಕ್ಷಿಣಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ವಿಶೇಷ ಕಾರ್ಯಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ಸ್ಥಾಪನೆ ಮಾಡಲಾಯಿತು. ಈ ಕಾರ್ಯಪಡೆಯಲ್ಲಿ 300ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ವಿಶೇಷ ತರಬೇತಿ ನೀಡಲಾಗಿದೆ ಎಂದು ಅವರು ಹೇಳಿದರು.

ನಮಗೆ ಸಿಕ್ಕ ಮಾಹಿತಿ ಆಧರಿಸಿ ಮಂಡ್ಯ ಜಿಲ್ಲೆಗೂ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ ನೇಮಕ ಮಾಡಲಾಗಿದೆ. ಈ ನೇಮಕ ಕಾರ್ಯಪಡೆ ಮಾಡಿದ ಬಳಿಕ ಕರಾವಳಿ ಭಾಗದಲ್ಲಿ ಯಾವುದೇ ರೀತಿಯ ಕೊಲೆ, ಗಲಭೆಗಳಾಗಿಲ್ಲ. ಸಂಪೂರ್ಣವಾಗಿ ನಿಯಂತ್ರಿಸಲಾಗಿದೆ. ಮೂರು ದಿನಗಳ ಹಿಂದೆ ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಸರಕಾರದ ಕಾರ್ಯವೈಖರಿ ಬಗ್ಗೆ ಸ್ಥಳೀಯರಿಂದ ಪ್ರಶಂಸೆ ವ್ಯಕ್ತವಾಯಿತು ಎಂದು ಜಿ.ಪರಮೇಶ್ವರ್ ತಿಳಿಸಿದರು.

ಬೆಂಗಳೂರು ನಗರದಲ್ಲಿ ಹೊಸದಾಗಿ ಮೂರು ವಿಭಾಗಗಳನ್ನು ಮಾಡಲಾಗಿದೆ. ಸಿಐಡಿಯಲ್ಲಿ ಠೇವಣಿ ವಂಚನೆ ಮತ್ತು ಕ್ರಿಮಿನಲ್ ಗುಪ್ತಚರ ಘಟಕವನ್ನು ಮಾಡಲಾಗಿದೆ. ಬೆಳ್ತಂಗಡಿಯಲ್ಲಿ ಸಿಐಡಿ ಉಪ ವಿಭಾಗವನ್ನು ಸ್ಥಾಪನೆ ಮಾಡಲಾಗಿದೆ. ಅನೇಕ ಘಟನೆಗಳು ಮತ್ತು ಪ್ರಕರಣಗಳು ಬರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಸಿಐಡಿ ಉಪವಿಭಾಗ ಸ್ಥಾಪಿಸಲಾಗಿದೆ ಎಂದು ಜಿ.ಪರಮೇಶ್ವರ್ ವಿವರಿಸಿದರು.

ಪೊಲೀಸ್ ಇಲಾಖೆಯು ಜನಸ್ನೇಹಿಯಾಗಿ, ನಾಗರಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜನರಿಗೆ ಕೇಂದ್ರಿಕೃತವಾಗಿ ಕೆಲಸ ಮಾಡುತ್ತಿದೆ. ಹಿಂದಿನ ಎರಡು ವರ್ಷದಲ್ಲಿ ನಮ್ಮ ಸರಕಾರ ಹಾಗೂ ಪೊಲೀಸ್ ಇಲಾಖೆ ಅನೇಕ ಸವಾಲುಗಳನ್ನು ಎದುರಿಸಿಕೊಂಡು ಬಂದಿದೆ. ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂಬುದು ಪೊಲೀಸ್ ಇಲಾಖೆಯ ಉದ್ದೇಶ. ಯಾವುದೇ ಅಹಿತಕರ ಘಟನೆ ಆಗಬಾರದು. ಎರಡು ವರ್ಷದ ಅವಧಿಯಲ್ಲಿ ಈ ನಿಟ್ಟಿನಲ್ಲೇ ಕೆಲಸ ಇಲಾಖೆ ಮಾಡಿದೆ ಎಂದು ಜಿ.ಪರಮೇಶ್ವರ್ ಹೇಳಿದರು.

ಇಲಾಖೆಯಲ್ಲಿ ಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಬದಲಾವಣೆಗಳನ್ನು ತಂದಿದ್ದೇವೆ. ರಾಜ್ಯದ ಪೊಲೀಸ್ ಇಲಾಖೆ ಸ್ನೇಹತ್ವದಿಂದ ಜನಗಳ ಕೆಲಸಗಳಾಗಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಅನ್ಯರಿಗೆ ತೊಂದರೆಯಾಗಬಾರದು. ಬದಲಾದ ಪರಿಸ್ಥಿತಿಯಲ್ಲಿ ತಂತ್ರಜ್ಞಾನವನ್ನು ಉಪಯೋಗದಿಂದ ಅಪರಾಧಗಳನ್ನು ಕಂಡು ಹಿಡಿಯುವ ರೀತಿಯಲ್ಲಿ ಕೆಲಸ ಮಾಡಲಾಗಿದೆ ಎಂದು ಜಿ.ಪರಮೇಶ್ವರ್ ತಿಳಿಸಿದರು.

ನಮ್ಮ ಸರಕಾರವು ಅನೇಕ ಬದಲಾವಣೆಗಳನ್ನು ತಂದಿದೆ. ದೇಶದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ 33 ಡಿಸಿಆರ್‌ಇ ಠಾಣೆಗಳನ್ನು ಸ್ಥಾಪಿಸಲಾಗಿದೆ. ಡಿಸಿಆರ್‌ ಇ ಅಧಿಕಾರಿಗಳು ಪ್ರತಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈಗ ಪ್ರತ್ಯೇಕಗೊಳಿಸಿ ಎಸ್‍ಸಿ, ಎಸ್‍ಟಿ ಸಮುದಾಯಗಳ ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಜಿ.ಪರಮೇಶ್ವರ್ ತಿಳಿಸಿದರು.

ದೇಶದಲ್ಲಿ ಬೇರೆ ಯಾವ ರಾಜ್ಯದಲ್ಲಿಯೂ ಡಿಸಿಆರ್‌ಇ ಪ್ರತ್ಯೇಕ ಪೊಲೀಸ್ ಠಾಣೆಗಳನ್ನು ಸ್ಥಾಪಿಸಿಲ್ಲ. ಜಿಲ್ಲೆಗಳ ಪೊಲೀಸ್ ಪ್ರಗತಿ ಪರಿಶೀಲನೆ ವೇಳೆ ಎಸ್‍ಸಿ, ಎಸ್‍ಟಿ ವಿಚಾರಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವುದಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು. ಇದನ್ನು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ. ಎರಡು ಐಆರ್‌ಬಿ ಬೆಟಾಲಿಯನ್ ಸ್ಥಾಪಿಸಲಾಗುತ್ತಿದೆ. ಕೆಜಿಎಫ್ ಮತ್ತು ಆಹುತಿಯಲ್ಲಿ ಎರಡು ಐಆರ್‌ಬಿ ಬೆಟಾಲಿಯನ್ ಆರಂಭಿಸಿಲಾಗುವುದು ಎಂದು ಜಿ.ಪರಮೇಶ್ವರ್ ವಿವರಿಸಿದರು

ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ(ಎಮೆರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಮ್) 112 ಸಹಾಯವಾಣಿಗೆ ಪ್ರತಿದಿನ ರಾಜ್ಯಾದ್ಯಂತ 24 ಸಾವಿರ ಕರೆಗಳು ಬರುತ್ತಿವೆ. 1400 ದೂರುಗಳಿಗೆ ನಮ್ಮ ಸಿಬ್ಬಂದಿಗಳು ಸ್ಪಂದಿಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ 112 ಸಹಾಯವಾಣಿ ದೂರುಗಳಿಗೆ 6.59 ನಿಮಿಷದಲ್ಲಿ ಸ್ಪಂದಿಸುತ್ತಾರೆ. ಗ್ರಾಮೀಣ ಭಾಗದಲ್ಲಿ 13.58 ನಿಮಿಷದಲ್ಲಿ ಘಟನಾ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಜಿ.ಪರಮೇಶ್ವರ್ ಹೇಳಿದರು.

ಕರ್ನಾಟಕ ಪೊಲೀಸ್‍ಗೆ ದೇಶದಲ್ಲೇ ಮೊದಲ ಸ್ಥಾನ: ಕರ್ನಾಟಕ ಪೊಲೀಸ್ ನಾಗರಿಕರಿಗೆ ನ್ಯಾಯವನ್ನು ಒದಗಿಸುವುದರಲ್ಲಿ ಇಡೀ ದೇಶದಲ್ಲಿ ಮೊದಲನೇ ಸ್ಥಾನದಲ್ಲಿದೆ. ವಿವಿಧ ಮಾನದಂಡಗಳನ್ನು ಇಟ್ಟುಕೊಂಡು ಇಂಡಿಯಾ ಜಸ್ಟೀಸ್ ರಿಪೋರ್ಟ್ ಸಮೀಕ್ಷಾ ವರದಿ ನೀಡಿದೆ. 10 ಅಂಕಗಳಲ್ಲಿ ಕರ್ನಾಟಕಕ್ಕೆ 6.78 ಅಂಕಗಳನ್ನು ಪಡೆದು ಮೊದಲನೆಯ ಸ್ಥಾನ ಗಳಿಸಿದೆ. ಪೊಲೀಸ್ ಮತ್ತು ನ್ಯಾಯಾಂಗ ಎರಡು ಸಾಮ್ಯತೆಯಿಂದ ಕೆಲಸ ಮಾಡಿ, ವಿಶೇಷವಾಗಿ ಶೋಷಿತ ಸಮುದಾಯಗಳಿಗೆ ನ್ಯಾಯ ಕೊಡಿಸುವುದರಲ್ಲಿ ಮೊದಲನೇ ಸ್ಥಾನದಲ್ಲಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X