Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ...

ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು; ಪಿಆರ್‌ಸಿ ನೀಡುವ ಪ್ರಕ್ರಿಯೆಯಲ್ಲಿ ವಿಳಂಬ ಬೇಡ : ಜಿ.ಪರಮೇಶ್ವರ್

► "ಪ್ರಜಾಸೇವಾ ಅಭಿಯಾನದಲ್ಲಿ ಬರುವ ಅರ್ಜಿಗಳ ತ್ವರಿತ ವಿಲೇವಾರಿ ಮಾಡಿ" ► ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ16 Sept 2026 3:30 PM IST
share
ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು; ಪಿಆರ್‌ಸಿ ನೀಡುವ ಪ್ರಕ್ರಿಯೆಯಲ್ಲಿ ವಿಳಂಬ ಬೇಡ : ಜಿ.ಪರಮೇಶ್ವರ್

ಬೆಂಗಳೂರು : ಬೇರೆ ಊರುಗಳಿಗೆ ಸ್ಥಳಾಂತರಗೊಂಡು ನೆಲೆಸಿರುವ ಜನರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗೊಳಿಯಬಾರದು ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಸೂಚನೆ ನೀಡಿದರು.

ಇಂದು ವಿಧಾನಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ರಾಜ್ಯದಾದ್ಯಂತ 43.81 ಲಕ್ಷ ಮತದಾರರ ಮ್ಯಾಪಿಂಗ್ ಆಗಿಲ್ಲ. ಹೆಸರು ತಿದ್ದುಪಡಿ ಸೇರಿದಂತೆ ಇನ್ನಿತರ ವಿಚಾರಗಳಿಗೆ ನೋಟಿಸ್ ನೀಡಲಾಗಿದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.

ಶಾಶ್ವತ ನಿವಾಸಿಗಳ ಸರ್ಟಿಫಿಕೇಟ್ (ಪಿಆರ್‌ಸಿ) ನೀಡುವ ಪ್ರಕ್ರಿಯೆಯಲ್ಲಿ ವಿಳಂಬವಾಗಬಾರದು. ಅರ್ಜಿ ನಮೂನೆ 6 ಬಗ್ಗೆ ಹೆಚ್ಚಿನ ಒತ್ತು ನೀಡಬೇಕು. ಕಾರಣಾಂತರಗಳಿಂದ ಊರು ತೊರೆದು ಹಲವು ವರ್ಷಗಳಿಂದ ಬೇರೆ ಕಡೆ ನೆಲೆಸಿರುವ ಮತದಾರರು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆಯೂ ಇರುತ್ತದೆ. ಈ ಬಗ್ಗೆ ನಿರ್ಲಕ್ಷ್ಯವಹಿಸುವುದು ಬೇಡ. ಸ್ಥಳಾಂತರಗೊಂಡಿರುವವರ ಅಗತ್ಯ ಮಾಹಿತಿಯನ್ನು ಎಸ್‌ಐಆರ್ ಪ್ರಕ್ರಿಯೆಯಲ್ಲಿ ದಾಖಲಿಸಬೇಕು ಎಂದು ತಿಳಿಸಿದರು.

ಭಾರತ್ ಜೋಡೋ ಯುವ ಸಂಘದ ನೋಂದಣಿ ಕಾರ್ಯ ತ್ವರಿತಗೊಳಿಸಿ : ಭಾರತ್ ಜೋಡೋ ಯುವ ಸಂಘ ಮುಖ್ಯಮಂತ್ರಿಯವರ ಕನಸಿನ ಯೋಜನೆಯಾಗಿದೆ. ಸಂಘಗಳ ನೋಂದಣಿ, ಮೆಂಟರ್ಸ್‌ಗಳ ನೇಮಕ ಸೇರಿದಂತೆ ಸಂಘ ಪ್ರಾರಂಭಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು. ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಕೂಡಲೇ ಅರ್ಜಿ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿಸಬೇಕು. ಭಾರತ್ ಜೋಡೋ ಯುವಕ ಸಂಘ ಇಡೀ ದೇಶದಲ್ಲಿ ಮೊದಲ ಬಾರಿಗೆ ಜಾರಿಗೊಳಿಸುತ್ತಿರುವ ಕಾರ್ಯಕ್ರಮ. ಇದರಿಂದ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಒಳ್ಳೆ ಹೆಸರು ಬರಲಿದೆ ಎಂದರು.

ಪ್ರಜಾಸೇವಾ ಅಭಿಯಾನದಲ್ಲಿ ಬರುವ ಅರ್ಜಿಗಳ ತ್ವರಿತ ವಿಲೇವಾರಿ ಮಾಡಿ : ಪ್ರಜಾಸೇವಾ ಅಭಿಯಾನದಲ್ಲಿ ಹೆಚ್ಚಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಬರುತ್ತಿವೆ‌. ಪಹಣಿ ತಿದ್ದುಪಡಿ, ಪೋಡಿ, ಪಿಂಚಣಿ ಸಮಸ್ಯೆ ಸೇರಿದಂತೆ ಮುಂತಾದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು. ಆರ್‌ಟಿಸಿ, ಪೋಡಿ ಪ್ರಕರಣಗಳನ್ನು ಸರಳೀಕರಣಗೊಳಿಸಲಾಗಿದೆ. ಆದಾಗ್ಯೂ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳಿಂದ ಅಗತ್ಯ ಸಲಹೆ ಪಡೆದು, ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಬಡವರಿಗೆ ನಿವೇಶನ ನಿರ್ಲಕ್ಷ್ಯ ಬೇಡ:

ಬಡವರಿಗೆ ನಿವೇಶನ ನೀಡುವ ಕಾರ್ಯಕ್ರಮ ಘೋಷಣೆಯಾದ ಬಳಿಕ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ಯೋಜನೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಕೆಲ ಜಿಲ್ಲೆಗಳಲ್ಲಿ ಭೂಮಿ ಗುರುತಿಸುವ ಕೆಲಸ ಆಗಿಲ್ಲ. ನಿವೇಶನ ಸಿದ್ಧಪಡಿಸಲು ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಿಂಗಳಾಂತ್ಯದ ವೇಳೆಗೆ ಪೂರ್ಣಗೊಳಿಸಬೇಕು. ಈ ಬಗ್ಗೆ ನಿರ್ಲಕ್ಷಿಸುವುದು ಬೇಡ. ಹಿರಿಯ ಅಧಿಕಾರಿಗಳು ಟೆಕ್ನಿಕಲ್‌ ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್‌ ಕುಮಾರ್ ಕಟಾರಿಯಾ, ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕಂದಾಯ ಆಯುಕ್ತೆ ಮೀನಾ ನಾಗರಾಜ್, ಭೂ ಮಾಪನ ಮತ್ತು ಭೂ ದಾಖಲೆ‌ ಇಲಾಖೆಯ ಆಯುಕ್ತ ವೆಂಕಟರಾಜ್ ಮುಂತಾದವರು ಉಪಸ್ಥಿತರಿದ್ದರು.

Tags

G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X