Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಪರಿಶಿಷ್ಟರ ಮೀಸಲಾತಿ’ ವಿಶೇಷ ಅನುಮತಿ...

‘ಪರಿಶಿಷ್ಟರ ಮೀಸಲಾತಿ’ ವಿಶೇಷ ಅನುಮತಿ ಅರ್ಜಿ ಸಲ್ಲಿಕೆಗೆ ಸರಕಾರದ ತಯಾರಿ : ಜಿ.ಪರಮೇಶ್ವರ್

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ26 Oct 2026 7:01 PM IST
share
‘ಪರಿಶಿಷ್ಟರ ಮೀಸಲಾತಿ’ ವಿಶೇಷ ಅನುಮತಿ ಅರ್ಜಿ ಸಲ್ಲಿಕೆಗೆ ಸರಕಾರದ ತಯಾರಿ : ಜಿ.ಪರಮೇಶ್ವರ್

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳವನ್ನು ರದ್ದುಗೊಳಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‍ನಲ್ಲಿ ವಿಶೇಷ ಅನುಮತಿ ಅರ್ಜಿ (ಎಸ್‍ಎಲ್‍ಪಿ)ಸಲ್ಲಿಸಲು ರಾಜ್ಯ ಸರಕಾರ ತಯಾರಿ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೈಕೋರ್ಟ್ ತೀರ್ಪಿನ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲೇಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.

ಮುಂದೆ ಇದನ್ನು ಹೇಗೆ ಸಂವಿಧಾನದ ಒಂಬತ್ತನೆ ಶೆಡ್ಯೂಲ್ ಅಡಿಯಲ್ಲಿ ತಂದು ಶಾಶ್ವತ ರಕ್ಷಣೆ ಒದಗಿಸಬೇಕು ಎನ್ನುವ ವಿಚಾರದ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಜತೆಗೆ, ಮೀಸಲಾತಿ ಹೆಚ್ಚಳಕ್ಕೆ ಶಾಶ್ವತ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸಂವಿಧಾನದ ಒಂಬತ್ತನೆ ಅನುಸೂಚಿಗೆ ಸೇರಿಸುವ ಕುರಿತು ಕೇಂದ್ರ ಸರಕಾರಕ್ಕೆ ಒತ್ತಾಯಿಸಲಾಗುವುದು. ಒಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗೆ ರಾಜ್ಯದ ಕಾಂಗ್ರೆಸ್ ಸರಕಾರ ಬದ್ಧವಾಗಿದ್ದು, ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಎಸ್‍ಸಿ-ಎಸ್‍ಟಿ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲಾಗಿತ್ತು. ಆದರೆ, ಹೈಕೋರ್ಟ್ ಮೀಸಲಾತಿ ಪ್ರಮಾಣವನ್ನು ಶೇ.56ರಿಂದ ಶೇ.50ಕ್ಕೆ ಇಳಿಸಿರುವುದು ಆಶ್ಚರ್ಯ ತಂದಿದೆ. ನ್ಯಾಯಾಧೀಶರನ್ನು ದೂಷಿಸುವ ಉದ್ದೇಶ ನಮಗಿಲ್ಲ. ಆದರೆ, ಜನಸಂಖ್ಯೆಯ ಆಧಾರದಲ್ಲಿ ಹೆಚ್ಚಿಸಲಾಗಿದ್ದ ಮೀಸಲಾತಿಯನ್ನು ಯಾವ ಕಾರಣಕ್ಕಾಗಿ ರದ್ದುಗೊಳಿಸಲಾಗಿದೆ ಎಂಬುದು ಅರ್ಥವಾಗುತ್ತಿಲ್ಲ.

2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಯವರು ಶೇ.17ರಷ್ಟು ಮತ್ತು ಪರಿಶಿಷ್ಟ ಪಂಗಡದವರು ಶೇ.7ರಷ್ಟಿದ್ದಾರೆ. ಒಟ್ಟಾರೆ ಈ ಸಮುದಾಯಗಳ ಜನಸಂಖ್ಯೆ ಸುಮಾರು ಶೇ.24.1ರಷ್ಟಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕೆಂಬ ಉದ್ದೇಶದಿಂದಲೇ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿತ್ತು ಎಂದು ಅವರು ತಿಳಿಸಿದರು.

ತಮಿಳುನಾಡಿನಲ್ಲಿ ಶೇ.69ರಷ್ಟು ಮೀಸಲಾತಿ ವ್ಯವಸ್ಥೆಯನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸಲಾಗಿದೆ. ಕೇಂದ್ರ ಸರಕಾರ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (ಇಡಬ್ಲ್ಯೂಎಸ್) ಶೇ.10ರಷ್ಟು ಮೀಸಲಾತಿ ಕಲ್ಪಿಸಿದೆ. ಆದರೆ, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿಯನ್ನು ಶೇ.6ರಷ್ಟು ಹೆಚ್ಚಿಸಿದಾಗ ಅದನ್ನು ರದ್ದುಗೊಳಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದರ ಅರ್ಥವೇನು ಎಂದು ಅವರು ಪ್ರಶ್ನಿಸಿದರು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ಅನೇಕ ಗೊಂದಲಗಳಿರುವುದು ನಿಜ. ಈ ಹಿಂದೆ ಎಚ್.ಆಂಜನೇಯ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಮುಕ್ತವಾಗಿ ಅನುದಾನ ನೀಡುತ್ತಿದ್ದರು. ಸ್ವಾಮೀಜಿಯವರು 5 ಕೋಟಿ ಅನುದಾನ ಕೇಳಿದಾಗ ಅದನ್ನು ಮಂಜೂರು ಮಾಡಿದ್ದರು. ಈಗ ಎಲ್ಲ ಇಲಾಖೆಗಳಲ್ಲಿಯೂ ಶೇ.17ರಷ್ಟು ಅನುದಾನವನ್ನು ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಡಬೇಕೆಂಬ ನಿಯಮವಿದೆ. ಈ ಅನುದಾನವನ್ನು ಸಮುದಾಯಗಳ ಅಭಿವೃದ್ಧಿಗೆ ಬಳಸಲಾಗಿದೆ. ಗಂಗಾಕಲ್ಯಾಣ ಯೋಜನೆಯಡಿ ಸಾವಿರಾರು ಫಲಾನುಭವಿಗಳಿಗೆ ಕೊಳವೆಬಾವಿ ಸೌಲಭ್ಯ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ 162 ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ರೀತಿಯ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ರಾಜಕೀಯ ಕಾರಣಗಳಿಗಾಗಿ ಗೊಂದಲ ಸೃಷ್ಟಿಸಲಾಯಿತು. ಇದರಿಂದ ಯಾರಿಗೂ ತೊಂದರೆಯಾಗಿಲ್ಲ. ಆ ಸಂದರ್ಭದಲ್ಲಿ ನಾನೇ ಗೃಹ ಸಚಿವನಾಗಿದ್ದೆ. ಆರೋಪಕ್ಕೆ ಸಂಬಂಧಿಸಿದಂತೆ ಉಲ್ಲೇಖಿಸಲಾಗಿದ್ದ ಎಲ್ಲ ಹಣವೂ ವಾಪಸ್ ಬಂದಿದೆ ಎಂದ ಅವರು, ನಾವು ಪ್ರತಿನಿಧಿಸುವ ಸಮುದಾಯಗಳು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಏಳಿಗೆ ಹೊಂದದಿದ್ದರೆ ಜನಪ್ರತಿನಿಧಿಗಳಾಗಿರುವ ನಮಗೆ ಯಾವುದೇ ಅರ್ಹತೆ ಇರುವುದಿಲ್ಲ. ಆದ್ದರಿಂದ ಸಮುದಾಯಗಳ ಸರ್ವಾಂ ಗೀಣ ಅಭಿವೃದ್ಧಿಗೆ ಆದ್ಯತೆ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ ಪರಿಶಿಷ್ಟ ಪಂಗಡಗಳ ಶೈಕ್ಷಣಿಕ ಸ್ಥಿತಿಯಲ್ಲಿ ನಿರೀಕ್ಷಿತ ಮಟ್ಟದ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ. ಪರಿಶಿಷ್ಟ ಪಂಗಡಗಳಲ್ಲಿ ಸಾಕ್ಷರತಾ ಪ್ರಮಾಣ ಶೇ.49ರಷ್ಟಿದ್ದು, ಮಹಿಳೆಯರ ಸಾಕ್ಷರತಾ ಪ್ರಮಾಣ ಶೇ.38ರಷ್ಟಿದೆ. ದೇಶದ ಒಟ್ಟಾರೆ ಸಾಕ್ಷರತೆ ಶೇ.80ರ ಮಟ್ಟ ತಲುಪಿರುವ ಸಂದರ್ಭದಲ್ಲಿ ಪರಿಶಿಷ್ಟ ಸಮುದಾಯಗಳು ಇನ್ನೂ ಶೇ.50ರ ಮಟ್ಟವನ್ನೂ ತಲುಪದಿರುವುದು ಗಂಭೀರವಾಗಿ ಪರಿಗಣಿಸಬೇಕಾದ ವಿಚಾರವಾಗಿದೆ ಎಂದು ಅವರು ಹೇಳಿದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ 10 ಮಂದಿ ಸಾಧಕರಿಗೆ 2026-27ನೆ ಸಾಲಿನ ವಾಲ್ಮೀಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ.ರಘುಮೂರ್ತಿ, ಆಹಾರ ಸಚಿವ ರಿಝ್ವಾನ್ ಆರ್ಶದ್, ಶಾಸಕರಾದ ಬಿ.ದೇವೇಂದ್ರಪ್ಪ, ರಾಜಾ ವೇಣುಗೋಪಾಲ್ ನಾಯಕ್, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಉಗ್ರಪ್ಪ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದಪುರಿ ಸ್ವಾಮಿ, ಇಲಾಖೆ ಕಾರ್ಯದರ್ಶಿ ಎಂ.ಕನಗವಲ್ಲಿ, ನಿರ್ದೇಶಕ ಡಾ.ಅಶೋಕ್ ಡಿ.ಆರ್, ಎಸ್‍ಟಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶೋಕ ದುಡಗುಂಟಿ ಸೇರಿದಂತೆ ಅಧಿಕಾರಿಗಳು ಹಾಗೂ ಇತರರು ಹಾಜರಿದ್ದರು.

ಪುಷ್ಪಾರ್ಚನೆ, ವಾಲ್ಮೀಕಿ ನಡಿಗೆ: ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೂ ಮುನ್ನ ಶಾಸಕರ ಭವನದ ಮುಂಭಾಗದ ತಪೋವನದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ರಘುಮೂರ್ತಿ ಹಾಗೂ ಇತರೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ನಂತರ ಎಲ್ಲ ಗಣ್ಯರು ವಾಲ್ಮೀಕಿ ತಪೋವನದಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ವರೆಗೆ ಪಾದಯಾತ್ರೆ ಕೈಗೊಂಡು ಆಗಮಿಸಿದರು.

ಮುಖ್ಯಮಂತ್ರಿಗಳ ವೀಡಿಯೊ ಸಂದೇಶ: ಸಮಾರಂಭದ ಮಧ್ಯದಲ್ಲಿ ಮುಖ್ಯಮಂತ್ರಿಗಳ ವೀಡಿಯೊ ಸಂದೇಶವನ್ನು ಪ್ರಸಾರ ಮಾಡಲಾಯಿತು. ಬೆಳಗಾವಿಗೆ ತೆರಳಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ವಿಡಿಯೊ ಸಂದೇಶದಲ್ಲಿ ವಾಲ್ಮೀಕಿ ಜಯಂತಿ ಶುಭಾ ಕೋರಿ ಸರಕಾರ ತಮ್ಮ ಬೇಡಿಕೆಗಳನ್ನು ಪರಿಶೀಲನೆ ನಡೆಸಲಿದೆ ಎಂದು ಭರವಸೆ ನೀಡಿದರು.

‘ಹೆಣ್ಣು-ಗಂಡು, ಮೇಲು-ಕೀಳು, ಬಡವ-ಬಲ್ಲಿದ ಎಂಬ ಬೇಧಭಾವಗಳಿಲ್ಲದೆ ನಾವೆಲ್ಲಾ ಒಂದೇ ಎನ್ನುವ ಮನೋಭಾವನೆಯಲ್ಲಿ ಬದುಕಬೇಕು. ಸಮಾನತೆ ಪ್ರತಿಯೊಬ್ಬರ ಹಕ್ಕು ಎಂಬುದನ್ನು ತಿಳಿಯಬೇಕು. ಆಗ ಶೋಷಣೆ ರಹಿತ ಸಮಾಜವನ್ನು ಕಟ್ಟುವುದಕ್ಕೆ ಸಾಧ್ಯ ಎಂಬುದನ್ನು ವಾಲ್ಮೀಕಿ ನಿರೂಪಿಸಿದ್ದಾರೆ. ಸಂವಿಧಾನದ ಮೂಲ ಆಶಯವನ್ನು ಅಂದೇ ಶ್ರೀ ಮಹರ್ಷಿ ವಾಲ್ಮೀಕಿ ಅವರು ಸಾಕಾರಗೊಳಿಸಿದ್ದಾರೆ’

-ಟಿ.ರಘುಮೂರ್ತಿ, ಸಚಿವ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ

Tags

G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X