ಬಳ್ಳಾರಿ ಗಲಾಟೆ ಪ್ರಕರಣ | ಸಿಐಡಿ ತನಿಖೆಗೆ ಚಿಂತನೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು, ಜ.4: ಬಳ್ಳಾರಿ ಗಲಾಟೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ಒಪ್ಪಿಸುವ ಚಿಂತನೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಗಲಾಟೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ನಿಟ್ಟಿನಲ್ಲಿ ತನಿಖೆಯ ಹೊಣೆಯನ್ನು ಸಿಐಡಿ ಅಧಿಕಾರಿಗಳಿಗೆ ನೀಡಬೇಕು ಎನ್ನುವ ಚಿಂತನೆ ಇದೆ. ಹಾಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ ಬಳಿಕ ಮುಂದಿನ ತೀರ್ಮಾನ ಪ್ರಕಟಿಸುತ್ತೇವೆ ಎಂದು ತಿಳಿಸಿದರು.
ಬಳ್ಳಾರಿ ಗಲಾಟೆಯಲ್ಲಿ ಗುಂಡಿನ ಸದ್ದು ಬಂದಿರುವುದು ಖಾಸಗಿ ವ್ಯಕ್ತಿಯ ಪಿಸ್ತೂಲಿನಿಂದ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಖಾಸಗಿ ಗನ್‍ಮ್ಯಾನ್‍ಗಳ ಪಿಸ್ತೂಲುಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಯಾವ ಪಿಸ್ತೂಲಿನಿಂದ ಗುಂಡು ಹಾರಿಸಲಾಗಿದೆ ಎಂದು ಪರಿಶೀಲನೆ ಮಾಡಲು ತಜ್ಞರಿಗೆ ಕೊಡಲಾಗಿದೆ ಎಂದು ಅವರು ಹೇಳಿದರು.
Next Story





