Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಿಬಿಎ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ...

ಜಿಬಿಎ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಮುಂದುವರೆಯಲಿದೆ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ10 July 2026 8:17 PM IST
share
ಜಿಬಿಎ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಮುಂದುವರೆಯಲಿದೆ : ಸಿಎಂ ಡಿ.ಕೆ.ಶಿವಕುಮಾರ್
‘ಈವರೆಗೂ 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ಒತ್ತುವರಿ ತೆರವು’

ಬೆಂಗಳೂರು : ಜುಲೈ 1ರಿಂದ ಇಲ್ಲಿಯವರೆಗು ಒಟ್ಟು 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿ ಒಟ್ಟು 9,878 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನಗರದ ವಿವಿಧ ಕಡೆಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಹಾಗೂ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಕುರಿತು ಸಿಎಂ ಡಿ.ಕೆ.ಶಿವಕುಮಾರ್ ಶುಕ್ರವಾರ ನಗರ ಪ್ರದಕ್ಷಿಣೆ ನಡೆಸಿ ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣಬೈರೇಗೌಡರಿಂದ ಮಾಹಿತಿ ಪಡೆದರು. ನಂತರ ಜಯನಗರದ ಅಶೋಕ ಸ್ಥಂಭದ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಇದುವರೆಗಿನ ಒತ್ತುವರಿಯಲ್ಲಿ ಒಟ್ಟು 1,340 ಅಂಗಡಿಗಳಿದ್ದವು, ಸುಮಾರು 1,800 ತಳ್ಳುವ ಗಾಡಿಗಳಿದ್ದವು. ತಳ್ಳುವ ಗಾಡಿಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಸುಮಾರು 2,267 ಅಂಗಡಿ ಮುಂಭಾಗದಲ್ಲಿ ತಗಡಿನ ಶೀಟ್ ಗಳನ್ನು ಅಳವಡಿಸಲಾಗಿತ್ತು ಅದನ್ನೂ ಸಹ ತೆಗೆಯಲಾಗಿದೆ. 2,300 ಮೆಟ್ಟಿಲು, ರ್ಯಾಂಪ್‌ ಗಳು, 2,662 ಪಿಲ್ಲರ್‌ ಗಳು ಬೋರ್ಡ್ ಗಳು, 2,247 ಶೆಡ್ ಗಳನ್ನು ತೆರವುಗೊಳಿಸಲಾಗಿದೆ. ತೆರವಾದ ತ್ಯಾಜ್ಯವನ್ನು ವಿಲೇವಾರಿ ಮಾಡಿದ್ದು ಜೊತೆಗೆ ಪಾದಚಾರಿ ಮಾರ್ಗಗಳನ್ನು ದುರಸ್ಥಿ ಮಾಡುವ ಕೆಲಸವನ್ನೂ ಮಾಡಿಕೊಂಡು ಬರಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ವಿವರಿಸಿದರು.

ಬೀದಿ ಬದಿ ವ್ಯಾಪಾರಿಗಳು ನಮ್ಮವರೇ: ಬೀದಿಬದಿ ವ್ಯಾಪಾರಿಗಳು ನಮ್ಮವರೇ, ಯಾರೂ ಆತಂಕ ಪಡಬಾರದು. ಖಾಸಗಿ ಅಥವಾ ಸರಕಾರಿ ಜಾಗ ಇರಬಹುದು ಯಾವುದೋ ಜಾಗದಲ್ಲಿ ವ್ಯಾಪಾರ ಮಾಡುವುದಕ್ಕೆ ಆಗುವುದಿಲ್ಲ. ಬೀದಿಬದಿ ವ್ಯಾಪಾರಿಗಳಿಗೂ ನಮ್ಮ ಸರಕಾರ ಅವಕಾಶ ಮಾಡಿಕೊಡುತ್ತದೆ. ಬೀದಿ ಬದಿ ವ್ಯಾಪಾರಿಗಳು ಬದುಕಬೇಕು ಎಂಬ ಆಸೆ ನಮಗೂ ಇದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ನಾವು ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿದ್ದೆವು. ಅದಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು, ಈಗ ಮತ್ತೆ ಈ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ. ನಿಮಗಾಗಿಯೇ ಸೂಚಿತ ಜಾಗಗಳನ್ನು ಗುರುತಿಸಲಾಗುವುದು. ಅಲ್ಲಿ ನೀವು ವ್ಯಾಪಾರ ನಡೆಸಬಹುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರಿನ ಸುಧಾರಣೆಗಾಗಿ ನಾವು ಟೀಕೆಗಳನ್ನು ಸ್ವೀಕರಿಸಲು ಸಿದ್ಧರಿದ್ದೇವೆ. ರೌಡಿಗಳು ವ್ಯಾಪಾರಿಗಳಿಂದ ವಸೂಲಿ ಮಾಡುವ ಕೆಲಸಗಳು ನಡೆದಿವೆ. ಇದರ ಹಿಂದೆ ದೊಡ್ಡ ಮಾಫಿಯಾ ಇದೆ. ಈ ಬಗ್ಗೆ ಮಾಹಿತಿಯೂ ನಮಗಿದೆ. ಪೊಲೀಸ್ ಹಾಗೂ ಜಿಬಿಎ ಅಧಿಕಾರಿಗಳಿಗೆ ನಾವು ಸ್ವಾತಂತ್ರ್ಯ ನೀಡಿದ್ದೇವೆ. ಸ್ವಚ್ಚ ಬೆಂಗಳೂರು ನಮ್ಮ ಗುರಿ. ಇಡೀ ದೇಶ ಬೆಂಗಳೂರನ್ನು ಗಮನಿಸುತ್ತಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಈಗಾಗಲೇ ಮೂರು ವರ್ಷಗಳಲ್ಲಿ ಸುಮಾರು 900ಕ್ಕೂ ಹೆಚ್ಚು ಪಾದಚಾರಿಗಳ ಸಾವಾಗಿದೆ. ಅದ್ದರಿಂದ ನಾಗರಿಕರು ಅನುಕೂಲಕ್ಕಾಗಿ ನಾವು ಈ ಕೆಲಸ ಮಾಡುತ್ತಿದ್ದೇವೆ. ಇದೇನು ನಮ್ಮ ಸ್ವಂತ ಲಾಭಕ್ಕಾಗಿ ಮಾಡುತ್ತಿರುವ ಕೆಲಸವಲ್ಲ. ಪಾದಚಾರಿ ಮಾರ್ಗ ಇಲ್ಲ ಎಂದರೆ ಜನ ರಸ್ತೆಯಲ್ಲಿ ನಡೆಯುತ್ತಾರೆ. ಆಗ ವಾಹನಗಳ ಓಡಾಟಕ್ಕೂ ತೊಂದರೆ ಉಂಟಾಗಲಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಬೀದಿಬದಿ ವ್ಯಾಪಾರಿಗಳಿಗೆ ತೊಂದರೆಯಿಲ್ಲದ ಜಾಗದ ವ್ಯವಸ್ಥೆ: ಸಿಎಂ ಭರವಸೆ

ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಲ್ಲ ಎಂದು ಆರೋಪ ಮಾಡಲಾಗುತ್ತಿದೆ ಎಂದು ಕೇಳಿದಾಗ, “ಆರೋಪ ಮಾಡುವವರೆಲ್ಲಾ ಆರೋಪ ಮಾಡಲಿ. ಅವರಿಗೆ ಬೇರೆ ಜಾಗಗಳನ್ನು ನಾವು ಗುರುತಿಸಿ ನೀಡುತ್ತೇವೆ. ಹೆಚ್ಚು ವಾಹನಗಳು ಓಡಾಡುವ ಕಡೆ ಹಾಗೂ ಯಾರದೋ ಆಸ್ತಿಯ ಮುಂದೆ ವ್ಯಾಪಾರ ಮಾಡಲು ಅವಕಾಶವಿಲ್ಲ. ಯಾವುದೇ ತೊಂದರೆಯಿಲ್ಲದ ಜಾಗವನ್ನು ನೋಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ಜಯನಗರ ಮಾರುಕಟ್ಟೆ ಬಗ್ಗೆ ಶೀಘ್ರ ತೀರ್ಮಾನ..:

ಜಯನಗರ ಮಾರುಕಟ್ಟೆ ಬಗ್ಗೆ ಸದ್ಯದಲ್ಲೇ ತೀರ್ಮಾನ ಮಾಡಲಾಗುವುದು. ಅರ್ಧ ಕಟ್ಟಡ ನಿರ್ಮಾಣವಾಗಿದೆ. ಇನ್ನರ್ಧ ಕೆಲಸವಾಗಬೇಕು. ಶೀಘ್ರದಲ್ಲೇ ಈ ಕೆಲಸವನ್ನೂ ಮಾಡಲಾಗುವುದು. ಯಾವುದಾದರೂ ಒಂದು ಯೋಜನೆಯ ಅಡಿಯಲ್ಲಿ ಈ ಕೆಲಸ ಮಾಡಲಾಗುವುದು. ನಮ್ಮ ಆಸ್ತಿಗಳನ್ನು ರಕ್ಷಣೆ ಮಾಡಿ ನಾಗರಿಕರಿಗೆ ಗೌರವ ಕೊಡುವಂತಹ ಕೆಲಸಗಳನ್ನು ನಾವು ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

Tags

GBACM D.K.Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X