Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. GBA | ಜುಲೈ 1ರಿಂದ ‘ಸುರಕ್ಷಿತ ಪಾದಚಾರಿ...

GBA | ಜುಲೈ 1ರಿಂದ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’ ಆರಂಭ : ಸಚಿವ ಕೃಷ್ಣಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ24 Jun 2026 8:33 PM IST
share
GBA | ಜುಲೈ 1ರಿಂದ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’ ಆರಂಭ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಜಿಬಿಎ ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ ಉಂಟಾಗಿರುವ ಒತ್ತುವರಿಗಳನ್ನು ಅಂಗಡಿ ಮಾಲಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿಕೊಳ್ಳಲು ಜುಲೈ 1 ರವರೆಗೆ ಅವಕಾಶ ನೀಡಲಾಗುವುದು. ಜು.1ರ ನಂತರ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’ ಆರಂಭಿಸಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಹಾಗೂ ದುರಸ್ತಿ ಕಾಮಗಾರಿಗಳ ಕುರಿತು ಬುಧವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಾದಚಾರಿ ಮಾರ್ಗದಲ್ಲಿ ನಡೆಯುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಹಲವು ನಿರ್ದೇಶನಗಳನ್ನು ನೀಡಿದ್ದೇನೆ ಎಂದರು.

ನಗರದಲ್ಲಿ ಸುಮಾರು 13 ಸಾವಿರ ಕಿ.ಮೀ. ರಸ್ತೆ ಜಾಲವಿದ್ದು, ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳಂತಹ ಆದ್ಯತಾ ರಸ್ತೆಗಳಾದ ಸುಮಾರು 2ಸಾವಿರ ಕಿ.ಮೀ. ವ್ಯಾಪ್ತಿಯಲ್ಲಿ ಪಾದಚಾರಿಗಳ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಎಲ್ಲ ಅಡೆತಡೆಗಳನ್ನು ತೆರವುಗೊಳಿಸಲು ಆಂದೋಲನ ಮಾದರಿಯಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಕೃಷ್ಣಬೈರೇಗೌಡ ಹೇಳಿದರು.

ನಗರಾದ್ಯಂತ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲಾಗುವುದು. ಅನೇಕ ಅಂಗಡಿಗಳು ತಮ್ಮ ಸಾಮಗ್ರಿಗಳು, ನಾಮಫಲಕಗಳು ಹಾಗೂ ಇತರೆ ವಸ್ತುಗಳನ್ನು ಪಾದಚಾರಿ ಮಾರ್ಗಗಳ ಮೇಲೆ ಇರಿಸುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ಕೃಷ್ಣಬೈರೇಗೌಡ ಹೇಳಿದರು.

ಆದ್ದರಿಂದ ಅಂಗಡಿ ಮಾಲಕರಿಗೆ ಜುಲೈ 1ರವರೆಗೆ ಸ್ವಯಂ ಪ್ರೇರಿತವಾಗಿ ಒತ್ತುವರಿಗಳನ್ನು ತೆರವುಗೊಳಿಸಿಕೊಳ್ಳಲು ಅವಕಾಶ ನೀಡಲಾಗುತ್ತಿದೆ. ಆ ಬಳಿಕವೂ ಒತ್ತುವರಿ ಮುಂದುವರಿದಲ್ಲಿ ಪಾಲಿಕೆಯಿಂದಲೇ ತೆರವುಗೊಳಿಸಿ, ನಿಯಮಾನುಸಾರ ದುಬಾರಿ ದಂಡ ವಿಧಿಸಲಾಗುವುದು ಎಂದು ಕೃಷ್ಣಬೈರೇಗೌಡ ತಿಳಿಸಿದರು.

ಪಾದಚಾರಿ ಮಾರ್ಗ ಸಾರ್ವಜನಿಕರ ಆಸ್ತಿ: ಪಾದಚಾರಿ ಮಾರ್ಗಗಳು ನಗರದ ಸುಮಾರು 1.5 ಕೋಟಿ ಜನರ ಆಸ್ತಿಯಾಗಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ತಮ್ಮ ವ್ಯಾಪಾರ ಚಟುವಟಿಕೆಗಳನ್ನು ತಮ್ಮ ಜಾಗದ ಮಿತಿಯಲ್ಲಿಯೇ ನಡೆಸಬೇಕು. ಸುರಕ್ಷಿತ ಪಾದಚಾರಿ ಮಾರ್ಗಗಳ ನಿರ್ಮಾಣ ಜನರ ಬಹುದಿನಗಳ ಬೇಡಿಕೆಯಾಗಿದೆ. ಎಲ್ಲರೂ ಒತ್ತುವರಿಗಳನ್ನು ತೆರವುಗೊಳಿಸಲು ಸಹಕರಿಸಬೇಕು ಎಂದು ಕೃಷ್ಣಬೈರೇಗೌಡ ಮನವಿ ಮಾಡಿದರು.

ಜುಲೈ 1ರಿಂದ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳ ಪಾದಚಾರಿ ಮಾರ್ಗಗಳು ಮತ್ತು ಪ್ರಮುಖ ರಸ್ತೆಗಳಲ್ಲಿ ತಳ್ಳುಗಾಡಿಗಳ ಮೂಲಕ ವ್ಯಾಪಾರ ಮಾಡಲು ಅವಕಾಶ ಇರುವುದಿಲ್ಲ. ನಿಯಮ ಉಲ್ಲಂಘಿಸಿದಲ್ಲಿ ತಳ್ಳುಗಾಡಿಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುವುದು. ಇತರೆ ಅನುಮತಿತ ಪ್ರದೇಶಗಳಲ್ಲಿ ಮಾತ್ರ ವ್ಯಾಪಾರ ನಡೆಸಬಹುದು ಎಂದು ಕೃಷ್ಣಬೈರೇಗೌಡ ಹೇಳಿದರು.

ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಆಯುಕ್ತರಾದ ರಮೇಶ್ ಡಿ.ಎಸ್., ಪೆÇಮ್ಮಲ್ ಸುನೀಲ್ ಕುಮಾರ್, ಜಿ.ಜಗದೀಶ್, ರಮೇಶ್ ಕೆ.ಎನ್., ಡಾ.ರಾಜೇಂದ್ರ ಕೆ.ವಿ., ಸಂಚಾರ ಪೆÇಲೀಸ್ ವಿಭಾಗದ ಜಂಟಿ ಆಯುಕ್ತ ಕಾರ್ತಿಕ್ ರೆಡ್ಡಿ, ಅಪರ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಶೇ.30ರಷ್ಟು ಪಾದಚಾರಿಗಳ ಸಾವು: ನಗರದಲ್ಲಿ ಪ್ರತಿವರ್ಷ ಸುಮಾರು 1 ಸಾವಿರ ಮಂದಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದು, ಅವರಲ್ಲಿ ಸುಮಾರು ಶೇ.30ರಷ್ಟು ಪಾದಚಾರಿಗಳೇ ಆಗಿದ್ದಾರೆ. ಸುರಕ್ಷಿತ ಹಾಗೂ ಸುಗಮ ಪಾದಚಾರಿ ಮಾರ್ಗಗಳು ಲಭ್ಯವಿದ್ದರೆ ಇಂತಹ ಅನೇಕ ಅಪಘಾತಗಳನ್ನು ತಡೆಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಕೃಷ್ಣಬೈರೇಗೌಡ ಕೋರಿದರು.

ಪಾರ್ಕಿಂಗ್‍ಗೆ ಅವಕಾಶವಿಲ್ಲ: ಪಾದಚಾರಿ ಮಾರ್ಗಗಳು ಸಾರ್ವಜನಿಕರ ಸಂಚಾರಕ್ಕಾಗಿ ನಿರ್ಮಿಸಲಾಗಿದ್ದು, ವಾಹನ ನಿಲುಗಡೆಗಾಗಿ ಅಲ್ಲ. ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಪಾದಚಾರಿ ಮಾರ್ಗಗಳಲ್ಲಿ ವಾಹನಗಳನ್ನು ನಿಲ್ಲಿಸಿದರೆ ಯಾವುದೇ ಮುಲಾಜಿಲ್ಲದೆ ಟೋಯಿಂಗ್ ಮೂಲಕ ತೆರವುಗೊಳಿಸಲಾಗುವುದು ಎಂದು ಕೃಷ್ಣಬೈರೇಗೌಡ ಎಚ್ಚರಿಕೆ ನೀಡಿದರು.

Tags

GBAMinister Krishna Byre Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X