Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 2 ಲಕ್ಷ ಎಕರೆ ಅರಣ್ಯ ಭೂಮಿ ತೆರವುಗೊಳಿಸಲು...

2 ಲಕ್ಷ ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಸಜ್ಜು: ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ2 Jan 2024 9:54 PM IST
share
2 ಲಕ್ಷ ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಸಜ್ಜು: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ರಾಜ್ಯ ವ್ಯಾಪಿ ಸರಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ದೊಡ್ಡ ಪ್ರಮಾಣದ ಒತ್ತುವರಿಯನ್ನು ಮೊದಲಿಗೆ ತೆರವುಗೊಳಿಸುವಂತೆ ಇಲಾಖೆಯ ಉನ್ನತಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಮಂಗಳವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಸಂಪತ್ತಿನ ಸಂರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿವಿಧ ಕಾಯಿದೆ ರಚಿಸಿದ್ದಾಗ್ಯೂ, ಸುಮಾರು 2 ಲಕ್ಷ ಎಕರೆ ಅರಣ್ಯಭೂಮಿ ಒತ್ತುವರಿ ಆಗಿರುವುದು ಆಘಾತಕಾರಿ ವಿಷಯ ಎಂದರು.

ಯಾರೇ ಅರಣ್ಯ ಭೂಮಿ ಒತ್ತುವರಿ ಮಾಡಿದರೂ ಅದು ಅಪರಾಧ. ಬೆಂಗಳೂರು ನಗರದ ಸುತ್ತಮುತ್ತ ಮತ್ತು ಪಟ್ಟಣ, ನಗರ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಬೆಲೆಬಾಳುವ ಅರಣ್ಯ ಭೂಮಿಯ ಒತ್ತುವರಿ ತೆರವಿಗೆ ಮೊದಲ ಆದ್ಯತೆ ನೀಡುವುದು ಅಗತ್ಯವಿದೆ ಎಂದು ಹೇಳಿದರು.

ಇನ್ನೊಂದೆಡೆ, ಅರಣ್ಯದಲ್ಲಿ ವನ್ಯ ಮೃಗಗಳ ಸಂಖ್ಯೆ ಹೆಚ್ಚಳವಾಗುತ್ತಿದೆ, ಆದರೆ ಅದಕ್ಕೆ ಅನುಗುಣವಾಗಿ ವನ ಪ್ರದೇಶ ಹೆಚ್ಚಾಗುತ್ತಿಲ್ಲ. ಹೀಗಾಗಿ ಮಾನವ ಮತ್ತು ವನ್ಯ ಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಅರಣ್ಯ ಒತ್ತುವರಿ ತೆರವು ಅತ್ಯಗತ್ಯ ಕ್ರಮವಾಗಿದೆ ಎಂದ ಅವರು, ಅರಣ್ಯ ಸಂರಕ್ಷಣಾ ಕಾಯಿದೆ 1980ರ ಜಾರಿಗೂ ಮುನ್ನ ಅರಣ್ಯ ಭೂಮಿ ಒತ್ತುವರಿ ಮಾಡಿ ನಿಗದಿತ ಕಾಲಮಿತಿಯೊಳಗೆ ಅರ್ಜಿ ಸಲ್ಲಿಸಿರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಬೇಕಿದೆ. ಸುಮಾರು 13,155 ಪ್ರಕರಣಗಳ 31,864 ಎಕರೆ ಭೂಮಿ ಇದ್ದು, ಈ ಪೈಕಿ ಸುಮಾರು 7 ಸಾವಿರ ಪ್ರಕರಣಗಳಲ್ಲಿ ಪಟ್ಟಾ ಕೊಡಲು ಕ್ರಮ ವಹಿಸಬಹುದಾಗಿದೆ ಎಂದು ವಿವರಿಸಿದರು.

1980ಕ್ಕೆ ಮುನ್ನ 3 ಎಕರೆಗಿಂತ ಕಡಿಮೆ ಭೂಮಿ ಒತ್ತುವರಿ ಮಾಡಿ ಮನೆ ಕಟ್ಟಿರುವ ಮತ್ತು ಉಳಿಮೆ ಮಾಡುತ್ತಿರುವ ಬಡ ರೈತರಿಗೆ ಕಿರುಕುಳ ನೀಡದೆ, ದೊಡ್ಡ ಒತ್ತುವರಿಗಳನ್ನು ಮೊದಲು ತೆರವು ಮಾಡಿಸಲು ಕ್ರಮ ವಹಿಸುವಂತೆಯೂ ಆದೇಶಿಸಲಾಗಿದೆ. ಹಾಗೇ, ಅರಣ್ಯ ಒತ್ತುವರಿ ಕುರಿತಂತೆ ವಲಯವಾರು, ವಿಭಾಗವಾರು, ವೃತ್ತವಾರು ಮಾಹಿತಿ ಕೈಸೇರಿದ ಬಳಿಕ ಕ್ರಮ ವಹಿಸುವುದಾಗಿ ಈಶ್ವರ ಖಂಡ್ರೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X