ಚುನಾವಣಾ ಆಯೋಗದ SIR ಪ್ರಕ್ರಿಯೆ | ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ಚುನಾವಣಾ ಆಯೋಗ ನಡೆಸುವ SIR ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ಆದರೆ ನಿಜವಾದ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದೆಂಬುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಸೋಮವಾರ ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.
ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ಪ್ರಕ್ರಿಯೆಯಂತೆ ರಾಜ್ಯದ 3 ಕೋಟಿ ಮತದಾರರು ಮ್ಯಾಪ್ ಆಗಿಲ್ಲವೆಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಎಸ್ ಐ ಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇಎಂದು ಬಿಎಲ್ ಒ ಗಳಿಗೆ ಸೂಚಿಸಲಾಗಿದೆ ಎಂದರು.
ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ
ಮಹಾನಗರ ಪಾಲಿಕೆ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕ ನಡೆಯುವ ಬೇಡಿಕೆ ಎದ್ದಿರುವ ಬಗ್ಗೆ ಉತ್ತರಿಸಿ, ಸ್ಥಳೀಯ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕವೇ ನಡೆಯಬೇಕೆಂಬುದು ನಮ್ಮ ಬೇಡಿಕೆಯೂ ಆಗಿದೆ ಎಂದರು.
ಒಳಮೀಸಲಾತಿ ವಿಧೇಯಕ
ಒಳಮೀಸಲಾತಿ ವಿಧೇಯಕವನ್ನು ರಾಜ್ಯಪಾಲರು ಹಿಂದಿರುಗಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಧೇಯಕದ ಸಂಬಂಧ ರಾಜ್ಯಪಾಲರು ಕೇಳಿರುವ ಪ್ರಶ್ನೆಗಳಿಗೆ ಸೂಕ್ತ ವಿವರಣೆಗಳನ್ನು ನೀಡಲಾಗುವುದು ಎಂದರು.







