Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ...

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ರಾಜ್ಯ ಸರಕಾರ ತೀರ್ಮಾನ

ರಾಹುಲ್ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ3 April 2025 6:53 PM IST
share
ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ರಾಜ್ಯ ಸರಕಾರ ತೀರ್ಮಾನ

ಹೊಸದಿಲ್ಲಿ : ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅಮೆಝಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು.

ಹೊಸದಿಲ್ಲಿಯಲ್ಲಿರುವ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಪಾಲ್ಗೊಂಡು ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದರು. ಸಭೆ ಫಲಪ್ರದವಾಗಿದ್ದು ‘ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ’ ಸ್ಥಾಪಿಸುವ ತೀರ್ಮಾನಕ್ಕೆ ಬರಲಾಗಿದೆ.

ಸಂಬಂಧಿತ ಸಂಸ್ಥೆಗಳಿಂದ ಶೇ.5ರಷ್ಟು ಸೆಸ್ ಸಂಗ್ರಹಿಸುವುದು ಮತ್ತು ಉಳಿದ ಅಗತ್ಯ ಹಣವನ್ನು ಸರಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಗಿಗ್ ಕಾರ್ಮಿಕ ವಲಯದ ಕಾರ್ಯಕರ್ತರಿಗೆ ಅವಕಾಶ: ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮೂವರು ಸಚಿವರ ನೇತೃತ್ವದಲ್ಲಿ ನಡೆದ ಸಭೆಗೆ ಆಗಮಿಸಲು ಗಿಗ್ ಕಾರ್ಮಿಕರ ವಲಯದ ಪರವಾಗಿ ಮೂವರು ಕಾರ್ಯಕರ್ತರಿಗೂ ಅವಕಾಶ ಒದಗಿಸಲಾಗಿತ್ತು.

ರಾಜ್ಯದವರಾದ ರಕ್ಷಿತಾ ದೇವ್, ಹೈದರಾಬಾದಿನ ಶೇಖ್ ಸಲಾಹುದ್ದೀನ್, ನಿಖಿಲ್ ದೇವ್ ಸಭೆಯಲ್ಲಿ ಭಾಗವಹಿಸಿದ್ದರು. ಕಾರ್ಮಿಕ ಇಲಾಖೆ ಸಿದ್ದಪಡಿಸಿದ್ದ ಎಲ್ಲಾ ಎಂಟು ಅಂಶಗಳನ್ನೂ ರಾಹುಲ್ ಗಾಂಧಿ ಮೆಚ್ಚಿಕೊಂಡಿದ್ದಾರೆ.

ಮುಂದಿನ ಹಂತವಾಗಿ ಸಮಗ್ರ ಅಂಶಗಳನ್ನು ಒಳಗೊಂಡ ಮಸೂದೆಯನ್ನು ಸಂಪುಟದ ಮುಂದೆ ಮಂಡಿಸಲು ತೀರ್ಮಾನಿಸಲಾಗಿದೆ. ಕಾರ್ಮಿಕ ಇಲಾಖೆ ಈಗಾಗಲೇ ಕಾರ್ಮಿಕರ ಗ್ರಾಚುಟಿ, ಸಿನಿಮಾ ಕಾರ್ಮಿಕರ ಬಿಲ್ ಸೇರಿ ಮೂರು ಪ್ರಮುಖ ಮಸೂದೆಗಳನ್ನು ತಂದಿದ್ದು ಈಗ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಕಾಯ್ದೆ ತರಲು ಮುಂದಾಗಿರುವುದಕ್ಕೆ ರಾಜ್ಯದ ಅಸಂಘಟಿತ ಕಾರ್ಮಿಕ ವಲಯ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದು ಸರಕಾರದ ಈ ಕಾಳಜಿಗೆ ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X