ಮತ್ತೆ ಏರು ಹಾದಿಯಲ್ಲಿ ಚಿನ್ನದ ಬೆಲೆ; ಮಂಗಳೂರಿನಲ್ಲಿ ಇಂದಿನ ದರವೆಷ್ಟು?

ಸಾಂದರ್ಭಿಕ ಚಿತ್ರ | Photo Credit : magnific.com
ಗುರುವಾರದಿಂದ ಏರುಹಾದಿಯಲ್ಲಿರುವ ಚಿನ್ನದ ದರ ವಾರದ ಮಟ್ಟದಲ್ಲಿ ನೋಡಿದರೆ ಲಾಭದಲ್ಲಿ ಸಾಗುತ್ತಿದೆ.
ಆಗಸ್ಟ್ ಮೊದಲ ವಾರದಲ್ಲಿ ಕಂಡುಬಂದ ಚಿನ್ನದ ದರ ಏರಿಕೆಯ ಟ್ರೆಂಡ್ ಇಡೀ ತಿಂಗಳು ಮುಂದುವರಿದಿತ್ತು. ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಂಗೆ 15,000 ರೂ.ವರೆಗೆ ಏರಿಕೆಯಾಗಿತ್ತು. ಆದರೆ, ಆಗಸ್ಟ್ ಕೊನೆ ವಾರದಲ್ಲಿ ಮತ್ತೆ ಇಳಿಕೆ ದಾಖಲಿಸಿದೆ. ಸೆಪ್ಟೆಂಬರ್ 1ರಿಂದ ಚಿನ್ನದ ದರ ತೀವ್ರ ಕುಸಿತದ ಹಾದಿಯಲ್ಲಿದ್ದು, ಖರೀದಿದಾರರಿಗೆ ಉತ್ತಮ ಅವಕಾಶ ಲಭಿಸಿತ್ತು. ಆದರೆ ಗುರುವಾರದಿಂದ ಬೆಲೆ ಮತ್ತೆ ಏರುತ್ತಿದೆ. ಶುಕ್ರವಾರದಂದು ವಾರದ ಮಟ್ಟದಲ್ಲಿ ನೋಡಿದರೆ ಸ್ವಲ್ಪ ಲಾಭದಲ್ಲಿ ಸಾಗುತ್ತಿದೆ.
ಹೂಡಿಕೆದಾರರು ಅಮೆರಿಕದ ಉದ್ಯೋಗ ವರದಿಯನ್ನು ಕಾಯುತ್ತಿರುವುದು ಚಿನ್ನದ ಬೆಲೆ ಸ್ಥಿರವಾಗಿ ಏರಲು ಮುಖ್ಯ ಕಾರಣವಾಗಿದೆ. ವರದಿಯಲ್ಲಿ ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ಬಡ್ಡಿದರ ಏರಿಸುವ ಸಾಧ್ಯತೆ ಬಗ್ಗೆ ಸೂಚನೆ ಸಿಗಬಹುದು ಎಂದು ವರದಿಯಾಗಿದೆ.
ಚಿನ್ನದ ದರದಲ್ಲಿ ಏರಿಕೆ
ಸೆಪ್ಟೆಂಬರ್ 4ರಂದು ಶುಕ್ರವಾರ 11 ಗಂಟೆಯ ವಹಿವಾಟಿನಲ್ಲಿ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಗುರುವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 131 ರೂ. ಏರಿಕೆಯಾಗಿ, ಹತ್ತು ಗ್ರಾಂ ಬೆಲೆ 1,56,660 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 120 ರೂ. ಏರಿದ್ದು, ಹತ್ತು ಗ್ರಾಂಗೆ 1,43,600 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 98 ರೂ. ಹೆಚ್ಚಾಗಿ, ಹತ್ತು ಗ್ರಾಂಗೆ 1,17,490 ರೂ. ಗೆ ತಲುಪಿದೆ.
ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?
ಸೆಪ್ಟೆಂಬರ್ 4ರಂದು ಶುಕ್ರವಾರ ಬೆಳಗಿನ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ದಾಖಲಿಸಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,666 (+131) ರೂ. ರಷ್ಟಕ್ಕೆ ತಲುಪಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,360 (+120) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,749 (+98) ರೂ. ಬೆಲೆಗೆ ಬಂದು ನಿಂತಿದೆ.
ಸ್ಥಿರವಾದ ಬೆಳ್ಳಿಯ ದರ
ಜುಲೈ 11ರಿಂದ ಬೆಳ್ಳಿಯ ದರ ಬಹುತೇಕ ಪ್ರತಿ ಕೆಜಿಗೆ 2,35,000 ರೂ.ಗೆ ಸ್ಥಿರವಾಗಿತ್ತು. ಆದರೆ ಆಗಸ್ಟ್ ಆರಂಭದ ವಾರಗಳಲ್ಲಿ ಮತ್ತೆ ಏರಿಕೆಯಾಗಿ ಪ್ರತಿ ಕೆಜಿಗೆ 2,60,000 ರೂ.ವರೆಗೆ ಏರಿತ್ತು. ಆಗಸ್ಟ್ ಕೊನೆ ವಾರದಲ್ಲಿ ಮತ್ತು ಸೆಪ್ಟೆಂಬರ್ ಆರಂಭದಲ್ಲಿ ಬೆಳ್ಳಿಯ ದರ ಕುಸಿದು ಪ್ರತಿ ಕೆಜಿಗೆ 2,45,000 ರೂ.ಗೆ ಬಂದು ನಿಂತಿತ್ತು. ಇದೀಗ ಮತ್ತೆ ಗುರುವಾರ ಪ್ರತಿ ಗ್ರಾಂ ಬೆಳ್ಳಿ ದರ 5 ರೂ. ಏರಿಕೆ ಕಂಡು ಪ್ರತಿ ಕೆಜಿಗೆ 2,50,000 ರೂ.ಗೆ ಬಂದು ತಲುಪಿದೆ. ಶುಕ್ರವಾರ ಅದೇ ಬೆಲೆಗೆ ಸ್ಥಿರವಾಗಿ ನಿಂತಿದೆ.
ವಿವಿಧ ನಗರಗಳಲ್ಲಿ 1 ಗ್ರಾಂ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?
ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 15,681 (+131) ರೂ., 22 ಕ್ಯಾರೆಟ್ ಚಿನ್ನದ ದರ 14,375 (+120) ರೂ.
ಮುಂಬೈ: 24 ಕ್ಯಾರೆಟ್ ಚಿನ್ನದ ದರ 15,666 (+131) ರೂ., 22 ಕ್ಯಾರೆಟ್ ಚಿನ್ನದ ದರ 14,360 (+120) ರೂ.
ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 15,671 (+131) ರೂ., 22 ಕ್ಯಾರೆಟ್ ಚಿನ್ನದ ದರ 14,365 (+120) ರೂ.
ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 15,666 (+131) ರೂ., 22 ಕ್ಯಾರೆಟ್ ಚಿನ್ನದ ದರ 14,360 (+120) ರೂ.
ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 15,666 (+131) ರೂ., 22 ಕ್ಯಾರೆಟ್ ಚಿನ್ನದ ದರ 14,360 (+120) ರೂ.
ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 15,666 (+131) ರೂ., 22 ಕ್ಯಾರೆಟ್ ಚಿನ್ನದ ದರ 14,360 (+120) ರೂ.
ಜೈಪುರ: 24 ಕ್ಯಾರೆಟ್ ಚಿನ್ನದ ದರ 15,681 (+131) ರೂ., 22 ಕ್ಯಾರೆಟ್ ಚಿನ್ನದ ದರ 14,375 (+120) ರೂ.
ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 15,681 (+131) ರೂ., 22 ಕ್ಯಾರೆಟ್ ಚಿನ್ನದ ದರ 14,375 (+120) ರೂ.
ಲಕ್ನೋ: 24 ಕ್ಯಾರೆಟ್ ಚಿನ್ನದ ದರ 15,681 (+131) ರೂ., 22 ಕ್ಯಾರೆಟ್ ಚಿನ್ನದ ದರ 14,375 (+120) ರೂ.
ಕೊಚ್ಚಿ: 24 ಕ್ಯಾರೆಟ್ ಚಿನ್ನದ ದರ 15,666 (+131) ರೂ., 22 ಕ್ಯಾರೆಟ್ ಚಿನ್ನದ ದರ 14,360 (+120) ರೂ.






