Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಾಂತಿಯುತ ಪ್ರತಿಭಟನೆಗೆ ಸರಕಾರದ...

ಶಾಂತಿಯುತ ಪ್ರತಿಭಟನೆಗೆ ಸರಕಾರದ ವಿರೋಧಲ್ಲ, ಕಾನೂನು ಕೈಗೆತ್ತಿಕೊಂಡರೆ ಕ್ರಮ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ28 Dec 2023 4:49 PM IST
share
ಶಾಂತಿಯುತ ಪ್ರತಿಭಟನೆಗೆ ಸರಕಾರದ ವಿರೋಧಲ್ಲ, ಕಾನೂನು ಕೈಗೆತ್ತಿಕೊಂಡರೆ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕನ್ನಡ ಪರ ಹೋರಾಟಗಾರರು ಕಾನೂನು ರೀತಿಯಲ್ಲಿ ಶಾಂತಿಯುತ ಪ್ರತಿಭಟನೆ ಮಾಡಿದರೆ ಸರ್ಕಾರದಿಂದ ಯಾವುದೇ ಅಡ್ಡಿ ಇರುವುದಿಲ್ಲ, ಆದರೆ ಕಾನೂನನ್ನು ಕೈಗೆತ್ತಿಕೊಂಡರೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆ, ವ್ಯಕ್ತಿಗಳು ಅಥವಾ ಖಾಸಗಿ ಸಂಸ್ಥೆ ಯಾರೇ ಆದರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಮನವಿ ಮಾಡಿಕೊಂಡರು.

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮಇದರಲ್ಲಿ ಯಾವುದೇ ರಾಜಿ ಇಲ್ಲ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ನ್ಯಾಸಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ.

ಇದಕ್ಕೂ ಮೊದಲು 2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕಗಳಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಎಂದು ಮುಖ್ಯಮಂತ್ರಿ ಸಿದ್ದರಾಮ್ಯ ತಿಳಿಸಿದ್ದಾರೆ.

“ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರತಕ್ಕದ್ದು. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು” ಎಂದರು.

ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ʼಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆʼ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲʼ ಎಂದು ಎಚ್ಚರಿಸಿದ್ದಾರೆ.

ಮಾರ್ಚ್ 3, 2022ರಂದು “ಕರ್ನಾಟಕ ಉಚ್ಚನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು, ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶವನ್ನು ಹೊರಡಿಸಿದೆ. ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ʼಸಂಘಟನೆ, ವ್ಯಕ್ತಿಗಳು, ಖಾಸಗಿ ಸಂಸ್ಥೆಗಳು ಯಾರೇ ಆದರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನು ಕೈಗೆತ್ತಿಕೊಳ್ಳಬೇಡಿ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿʼ ಎಂದು ಮನವಿ ಮಾಡಿದರು.

ʼಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿಯವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕುʼ ಎಂದು ಮುಖ್ಯಮಂತ್ರಿ ಸಿದ್ದರಾಮ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X