ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಡಾ.ಅಂಬೇಡ್ಕರ್ ಜಯಂತಿ ಆಚರಿಸುವಂತೆ ಆದೇಶ

Photo credit: PTI
ಬೆಂಗಳೂರು: ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬೇಸಿಗೆ ರಜೆ ಆರಂಭವಾಗಿದ್ದು, 2024-25ನೇ ಶೈಕ್ಷಣಿಕ ವರ್ಷ ಎ.10ರಂದು ಮುಕ್ತಾಯವಾಗಿದೆ. ಆದರೆ ರಾಜ್ಯದ ಎಲ್ಲ ಶಾಲೆಗಳಲ್ಲಿ ಎ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಕ್ರಮವಹಿಸಬೇಕು ಎಂದು ಸರಕಾರ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕ, ಸಹ ಶಿಕ್ಷಕ, ಸಿಬ್ಬಂದಿ, ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಸೋಮವಾರದಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರವರ ಜಯಂತಿಯನ್ನು ಆಚರಿಸಬೇಕು ಎಂದು ಆದೇಶಿಸಲಾಗಿದೆ.
Next Story





