ಕಲಾವಿದರ ಮಾಸಾಶನ ಹೆಚ್ಚಳ: ರಾಜ್ಯ ಸರಕಾರ ಆದೇಶ

ಬೆಂಗಳೂರು : 2025-26ನೆ ಸಾಲಿನ ಬಜೆಟ್ ಘೋಷಣೆಯಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2ಸಾವಿರ ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲು ರಾಜ್ಯ ಸರಕಾರ ಅನುಮೋದನೆ ನೀಡಿದೆ.
ಕಲಾವಿದರ ಮಾಸಾಶನ ಪಾವತಿಸಲು ತಗಲುವ ವೆಚ್ಚವನ್ನು 2025-26ನೆ ಸಾಲಿನ ಕ್ರಿಯಾ ಯೋಜನೆಯಲ್ಲಿ 32.94 ಕೋಟಿ ರೂ.ಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಿಗೆ ಬಿಡುಗಡೆ ಮಾಡಲು ಸರಕಾರ ಮಂಜೂರಾತಿ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Next Story





