ಆಶಾ ಕಾರ್ಯಕರ್ತೆಯರಿಗೆ ಒಂದು ಸಾವಿರ ರೂ. ಪ್ರೋತ್ಸಾಹಧನ; ರಾಜ್ಯ ಸರಕಾರ ಆದೇಶ

ಬೆಂಗಳೂರು : ಬಜೆಟ್‍ನಲ್ಲಿ ಘೋಷಣೆ ಮಾಡಿದಂತೆ ಆಶಾ ಕಾರ್ಯಕರ್ತೆಯರ ಗೌರವಧನದೊಂದಿಗೆ ಒಂದು ಸಾವಿರ ರೂ.ಗಳನ್ನು ಪ್ರೋತ್ಸಾಹಧನವಾಗಿ ನೀಡಲಾಗುವುದು ಎಂದು ರಾಜ್ಯ ಸರಕಾರ ಶುಕ್ರವಾರದಂದು ಆದೇಶ ಹೊರಡಿಸಿದೆ.
ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೇರಿಸಿದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಗೌರವಧನದೊಂದಿಗೆ ಒಂದು ಸಾವಿರ ರೂ.ಗಳ ತಂಡ ಆಧಾರಿತ ಪ್ರೋತ್ಸಾಹಧನವನ್ನು ಪಾವತಿಸಲಾಗುವುದು. ಇದಕ್ಕಾಗಿ 18 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
Next Story





