Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರಗಳು ಜಾತೀಯತೆ, ಇಸ್ಲಾಮೋಫೋಬಿಯಾ...

ಸರಕಾರಗಳು ಜಾತೀಯತೆ, ಇಸ್ಲಾಮೋಫೋಬಿಯಾ ಪ್ರೋತ್ಸಾಹಿಸುತ್ತಿವೆ: ವಿನಯ್‍ಶ್ರೀನಿವಾಸ್

ವಾರ್ತಾಭಾರತಿವಾರ್ತಾಭಾರತಿ2 Sept 2023 11:46 PM IST
share
ಸರಕಾರಗಳು ಜಾತೀಯತೆ, ಇಸ್ಲಾಮೋಫೋಬಿಯಾ ಪ್ರೋತ್ಸಾಹಿಸುತ್ತಿವೆ: ವಿನಯ್‍ಶ್ರೀನಿವಾಸ್

ಬೆಂಗಳೂರು, ಸೆ.2: ‘ಸರಕಾರಗಳು ಜಾತೀಯತೆ ಮತ್ತು ಇಸ್ಲಾಮೋಫೋಬಿಯಾವನ್ನು ಪ್ರೋತ್ಸಾಹಿಸುತ್ತಿವೆ. ಪ್ರಭುತ್ವದ ಪ್ರತಿಕ್ರಿಯೆಯು ಇವೆರಡನ್ನೂ ಕುಗ್ಗಿಸುವ ಬದಲು ಉತ್ತೇಜಿಸುವಂತಿದೆ’ ಎಂದು ವಕೀಲ ವಿನಯ್ ಶ್ರೀನಿವಾಸ್ ದೂರಿದ್ದಾರೆ.

ಶನಿವಾರ ನಗರದ ಪುರಭವನದ ಬಳಿ ಆಲ್ ಇಂಡಿಯಾ ಸ್ಟುಡೆಂಟ್ ಅಸೋಸಿಯೇಶನ್, ಪ್ರಭುತ್ವ ಕರ್ನಾಟಕ, ಆಪ್ ಪಕ್ಷ ಕರ್ನಾಟಕ ಸೇರಿದಂತೆ ಹಲವರು ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಜಾತೀಯತೆ ಮತ್ತು ಇಸ್ಲಾಮೋಫೋಬಿಯಾ ವಿರುದ್ಧ ನಾವೆಲ್ಲರೂ ಪ್ರತಿಜ್ಞೆ ಮಾಡಬೇಕು. ಈ ಎರಡೂ ಮನಸ್ಥಿತಿಗಳು ನಮ್ಮ ಸಾಂವಿಧಾನಿಕ ಮೌಲ್ಯಗಳಾದ ಸಮಾನತೆ, ಘನತೆ ಮತ್ತು ಬಂದುತ್ವ ವಿರುದ್ಧವಾಗಿದೆ ಎಂದರು.

ನಮ್ಮ ಪ್ರಧಾನಿ, ಗೃಹ ಸಚಿವ ಅಥವಾ ರೈಲ್ವೆ ಸಚಿವರಾಗಲಿ ಜೈಪುರ್-ಮುಂಬೈ ರೈಲು ಗುಂಡಿನ ದಾಳಿಯನ್ನು ಖಂಡಿಸಲಿಲ್ಲ. ಸಾರ್ವಜನಿಕ ಒತ್ತಡ ಹೆಚ್ಚಾಗುವವರೆಗೂ ಆರ್‍ಪಿಎಫ್ ಸಿಬ್ಬಂದಿ ವಿರುದ್ಧದ ಎಫ್‍ಐಆರ್ ದ್ವೇಷದ ಅಪರಾಧಗಳ ನಿಬಂಧನೆಗಳನ್ನು ಒಳಗೊಂಡಿರಲಿಲ್ಲ. ಇದನ್ನು ದ್ವೇಷದ ಅಪರಾಧವಲ್ಲ ಬದಲಿಗೆ ಮಾನಸಿಕ ಅಸ್ವಸ್ಥತೆಯಿಂದ ಕೊಲೆ ಎಂದು ರವಾನಿಸುವ ಪ್ರಯತ್ನಗಳು ನಡೆಯುತ್ತಿವೆ. ಇನ್ನು ಹರಿಯಾಣದಲ್ಲಿ, ರಾಜ್ಯದ ಗೃಹ ಸಚಿವರು, ಡಿಸಿಗಳು ಮತ್ತು ಇತರ ಅಧಿಕಾರಿಗಳು ಎಲ್ಲಾ ಕಾನೂನು ಮತ್ತು ನೀತಿಗಳನ್ನು ಉಲ್ಲಂಘಿಸಿ ಮುಸ್ಲಿಮರ ಮನೆಗಳನ್ನು ಕೆಡವಲು ಬಹಿರಂಗವಾಗಿ ಕರೆ ನೀಡಿದ್ದರು ಎಂದು ವಿನಯ್‍ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದರು.

ಉತ್ತರ ಪ್ರದೇಶದಲ್ಲಿ ಮುಸ್ಲಿಮ್ ಮಗುವಿನ ಮೇಲೆ ಶಿಕ್ಷಕಿಯ ದೌರ್ಜನ್ಯ, ಹಿಂಸಾಚಾರವನ್ನು ಪ್ರಚೋದಿಸುವ ಯಾವುದೇ ಆರೋಪಗಳನ್ನು ನಮ್ಮ ಪ್ರಭುತ್ವ ವ್ಯವಸ್ಥೆ ಎದುರಿಸಲಿಲ್ಲ, ಬದಲಿಗೆ ಈ ಬಗ್ಗೆ ಟ್ವೀಟ್ ಮಾಡಿದ ಅನೇಕರಲ್ಲಿ ಒಬ್ಬರಾದ ಪತ್ರಕರ್ತ ಮುಹಮ್ಮದ್ ಝುಬೈರ್ ಅವರನ್ನು ಗುರಿಯಾಗಿಸಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ವಿನಯ್‍ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಮತ್ತು ಕೇಂದ್ರ ಸರಕಾರಗಳು ಮರ್ಯಾದೆಗೇಡು ಹತ್ಯೆಗಳನ್ನು ತಡೆಯುವ ಮಾರ್ಗಗಳ ಕುರಿತು ಸರಕಾರಗಳು ಸಾರ್ವಜನಿಕ ಸಮಾಲೋಚನೆಯನ್ನು ಆಯೋಜಿಸಬೇಕು. ದಲಿತ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಲು ವಿಶೇಷ ಅಧಿವೇಶನ ಮತ್ತು ಸಂಸತ್ತಿನ ಅಧಿವೇಶನ ನಡೆಸಲು ದಲಿತ ಗುಂಪುಗಳ ಬೇಡಿಕೆಗಳಿಗೆ ಗಮನ ಕೊಡಬೇಕು. ಹೆಚ್ಚುತ್ತಿರುವ ಇಸ್ಲಾಮೋಫೆÇೀಬಿಯಾವನ್ನು ಕೇಂದ್ರ ಸರಕಾರ ಗುರುತಿಸಿ ಅದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ವಿನಯ್‍ಶ್ರೀನಿವಾಸ್ ಒತ್ತಾಯಿಸಿದರು.

ಆಪ್ ಪಕ್ಷದ ರಾಜ್ಯ ಉಪಾಧ್ಯಕ್ಷ ಡಾ.ರಮೇಶ್‍ಬೆಲ್ಲಮ್‍ಕೊಂಡ ಮಾತನಾಡಿ, ಜಾತೀಯತೆ ಮತ್ತು ಇಸಾಮೋಫೋಬಿಯಾ ದ್ವೇಷದ ಅಪರಾಧಗಳಿಗೆ ಕಾರಣವಾಗುತ್ತಿದೆ ಮತ್ತು ನಮ್ಮ ಸಮಾಜವನ್ನು ಛಿದ್ರಗೊಳಿಸುತ್ತಿದೆ. ನಾವು ಇದರ ವಿರುದ್ಧ ಹೋರಾಡಬೇಕು ಎಂದರು.

ದೇಶದಲ್ಲಿ ನಡೆಯುತ್ತಿರುವ ದ್ವೇಷದ ಅಪರಾಧಗಳು ಆತಂಕ ಸೃಷ್ಟಿಪಡಿಸುತ್ತಿದೆ. ಜಾತಿ, ಧರ್ಮದ ತಾರತಮ್ಯ ಹೆಚ್ಚಾಗಿ ದುಷ್ಕøತ್ಯಗಳು ಹೆಚ್ಚುತ್ತಿವೆ. ದೇಶದ ಆಡಳಿತ ವ್ಯವಸ್ಥೆ ಸತ್ತು ಹೋಗಿದೆ. ನಾವೆಲ್ಲರೂ ಎಚ್ಚೆತ್ತುಕೊಂಡು ಸರಿಯಾದ ಸಾಂವಿಧಾನಿಕ ಆಡಳಿತವನ್ನು ರೂಪಿಸಬೇಕಿದೆ ಎಂದು ಡಾ.ರಮೇಶ್‍ಬೆಲ್ಲಮ್‍ಕೊಂಡ ಕರೆ ನೀಡಿದರು. ಪ್ರತಿಭಟನೆಯಲ್ಲಿ ಆಲ್ ಇಂಡಿಯಾ ಸ್ಟುಡೆಂಟ್ ಅಸೋಸಿಯೇಶನ್ ಮುಖಂಡ ಶರತ್, ಆಪ್ ಪಕ್ಷದ ಸುರಭಿ ರೇಣುಕಾಂಭಿಕೆ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X