ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ; ಇವಿಎಂ ಬದಲು ಮತಪತ್ರ ಬಳಕೆ ಮಸೂದೆ ಬಾಕಿ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದ ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿರುವುದಾಗಿ ವರದಿಯಾಗಿದೆ.
ಚುನಾವಣೆಗಳಲ್ಲಿ ಮತಪತ್ರ ಬಳಸುವುದಕ್ಕೆ ಸಂಬಂಧಿಸಿದ ‘ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ 2026’ ರಾಜ್ಯಪಾಲರ ಪರಿಶೀಲನೆ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ.
ಮರ್ಯಾದೆಗೇಡು ಹತ್ಯೆಯನ್ನು ತಡೆಯುವ ನಿಟ್ಟಿನಲ್ಲಿ ರೂಪಿಸಿದ ‘ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ ನಮ್ಮವ) ವಿಧೇಯಕ, ಕರ್ನಾಟಕ ಧನ ವಿನಿಯೋಗ ಮಸೂದೆ, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ತಿದ್ದುಪಡಿ ಮಸೂದೆ, ಕರ್ನಾಟಕ ಪೊಲೀಸ್ ಮಸೂದೆ, ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ, ಕರ್ನಾಟಕ ವೃತ್ತಿಗಳ, ಕಸುಬುಗಳ, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಿನ ತೆರಿಗೆ ಮಸೂದೆ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಮಸೂದೆ, ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಯ ಭೂಮಿ (ರಕ್ಷಣೆ ಮತ್ತು ಸಕ್ರಮಾತಿ) ಮಸೂದೆಗಳು ಒಪ್ಪಿಗೆ ಪಡೆದಿದೆ.





