ಬಿ.ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಬಿ.ನಾಗೇಂದ್ರ ಅವರು ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ.
ಸಚಿವ ಸ್ಥಾನಕ್ಕೆ ನಾಗೇಂದ್ರ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ಸಿಎಂ ಡಿ.ಕೆ.ಶಿವಕುಮಾರ್ ಅವರು ಲೋಕಭವನಕ್ಕೆ ಕಳುಹಿಸಿದ್ದರು. ಈ ರಾಜೀನಾಮೆ ಅಂಗೀಕಾರಕ್ಕೆ ಶಿಫಾರಸು ಮಾಡಿದ್ದರು. ಅವರ ಶಿಫಾರಸಿನ ಅನ್ವಯ ರಾಜೀನಾಮೆ ಅಂಗೀಕರಿಸಿರುವುದಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ತಿಳಿಸಿದ್ದಾರೆ ಎಂದು ಲೋಕಭವನ ಪ್ರಕಟಣೆ ತಿಳಿಸಿದೆ.
Next Story




