Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಾರಿಗೆ...

ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಾರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೆಚ್ಚುಗೆ

ವಾರ್ತಾಭಾರತಿವಾರ್ತಾಭಾರತಿ15 Aug 2024 8:05 PM IST
share
ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಾರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೆಚ್ಚುಗೆ

ಬೆಂಗಳೂರು : ರಾಜ್ಯದ ಮಹಿಳೆಯರು, ಬಡ-ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ನಿರುದ್ಯೋಗಿ ಯುವಜನರಿಗೆ ಸಹಾಯ ಮಾಡಲು ರಾಜ್ಯ ಸರಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗುತ್ತಿದೆ ಎಂದು ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಇಂದಿಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗುರುವಾರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಾಜಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕರ್ನಾಟಕ ದೇಶದ ಪ್ರಗತಿಪರ ರಾಜ್ಯ. ಕರ್ನಾಟಕವು ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ ಎಂದು ನುಡಿದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿ, ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಬೇಕು. ವಿವಿಧ ನವೀನ ಮತ್ತು ಅಂತರ್ಗತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ನಮ್ಮ ರಾಜ್ಯವು ಪ್ರವರ್ತಕವಾಗಿದೆ. ಆ.15 ನಮಗೆ ಐತಿಹಾಸಿಕ ದಿನವಾಗಿದೆ. ಸ್ವಾತಂತ್ರ್ಯ ಹೋರಾಟದ ಹುತಾತ್ಮರನ್ನು ಸ್ಮರಿಸಬೇಕು. ಈ ದಿನ ಅವರಿಂದ ಸ್ಫೂರ್ತಿ ಪಡೆದು ಹೊಸ ಹಾದಿ ಮತ್ತು ಸಂಕಲ್ಪದೊಂದಿಗೆ ಮುನ್ನಡೆಯಲು ಅವಕಾಶವಿದೆ ಎಂದು ಅವರು ತಿಳಿಸಿದರು.

ಸ್ವಾತಂತ್ರ್ಯಾನಂತರ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿ ಸರ್ವತೋಮುಖ ಅಭಿವೃದ್ಧಿಯಾಗಿದ್ದು, ದೇಶದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ ಪ್ರಮುಖ ದೇಶಗಳಲ್ಲಿ 5ನೆ ಸ್ಥಾನದಲ್ಲಿದೆ. ಸ್ವಾತಂತ್ರ್ಯದ 100 ನೇ ವರ್ಷಾಚರಣೆಯ ಸಂದರ್ಭದಲ್ಲಿ ಭಾರತವು ಶೇ.100ರಷ್ಟು ವಿದ್ಯಾವಂತರಾಗಿ, ಆರ್ಥಿಕವಾಗಿ ಸದೃಢವಾಗಬೇಕು. ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿರಬೇಕು. ಎಂಬುದು ಭಾರತದ ನಿರೀಕ್ಷೆಯಾಗಿದೆ. ಇದಕ್ಕಾಗಿ ನಾವೆಲ್ಲರೂ ದೇಶಕ್ಕಾಗಿ ನಮ್ಮ ಕರ್ತವ್ಯಗಳನ್ನು ಭಕ್ತಿ ಮತ್ತು ಸಮರ್ಪಣಾ ಭಾವದಿಂದ ನಿರ್ವಹಿಸಬೇಕಾಗಿದೆ ಎಂದು ಅವರು ಹೇಳಿದರು.

ಭಾರತ ಸೇರಿದಂತೆ ವಿಶ್ವದಲ್ಲಿ ಪರಿಸರ ಅಸಮತೋಲನದ ಗಂಭೀರ ಸಮಸ್ಯೆ ಇದೆ. ಪರಿಸರವನ್ನು ರಕ್ಷಿಸುವ ಮತ್ತು ಸುಧಾರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ‘ಅಮ್ಮನ ಹೆಸರಲ್ಲಿ ಒಂದು ಮರ’ ಅಭಿಯಾನದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಮಹತ್ವದ ಕೆಲಸ ಮಾಡಬೇಕು. ಪ್ಯಾರಿಸ್‍ನಲ್ಲಿ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪದಕಗಳನ್ನು ಗೆದ್ದು ಉತ್ತಮ ಪ್ರದರ್ಶನ ನೀಡಿದ ಎಲ್ಲ ಭಾರತೀಯ ಕ್ರೀಡಾಪಟುಗಳಿಗೆ ಅಭಿನಂದನೆಗಳು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್, ರಾಜ್ಯಪಾಲರ ಆಪ್ತ ಕಾರ್ಯದರ್ಶಿ ಪಂಕಜ್ ಮೆಹ್ತಾ, ಉಪ ಕಾರ್ಯದರ್ಶಿ ಯೋಗೇಶ್ ಉಪಧ್ಯಾಯ್, ಎಡಿಸಿ ಸಾಬುಥಾಮಸ್, ಎಡಿಸಿ ಸಂದೀಪ್ ಶರ್ಮಾ, ಒಎಸ್ ಡಿಗಳಾದ ಶಂಕರ್ ಲಾಲ್ ಗುಜರ್, ಆದರ್ಶ್ ಪಾಸ್ವಾನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X