ನಾಡಗೀತೆಗೆ ‘ಬೌದ್ಧರುದ್ಯಾನ’ ಸಾಲನ್ನು ಸೇರಿಸಲು ಸರಕಾರವೇ ತಜ್ಞರ ಸಮಿತಿ ರಚಿಸಿದೆ: ಡಾ.ಪುರುಷೋತ್ತಮ ಬಿಳಿಮಲೆ ಸ್ಪಷ್ಟನೆ

ಡಾ.ಪುರುಷೋತ್ತಮ ಬಿಳಿಮಲೆ
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರು ರಚಿಸಿದ ಜಯ ಭಾರತ ಜನನಿಯ ತನುಜಾತೆ ನಾಡಗೀತೆಗೆ ‘ಬೌದ್ಧರುದ್ಯಾನ’ ಸಾಲನ್ನು ಸೇರಿಸಲು ಸರಕಾರವೇ ತಜ್ಞರ ಸಮಿತಿ ರಚಿಸಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಸ್ಪಷ್ಟನೆ ನೀಡಿದ್ದಾರೆ.
ಶುಕ್ರವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸಮಿತಿಯನ್ನು ರಚಿಸಿತು ಎಂದು ಹಲವರು ಬರೆಯುತ್ತಿರುವುದನ್ನು ಗಮನಿಸಿದ್ದೇನೆ. ತಜ್ಞರ ಸಮಿತಿಯನ್ನು ರಚಿಸಿದ್ದು ಕರ್ನಾಟಕ ಸರಕಾರದ ಕನ್ನಡ ಸಂಸ್ಕೃತಿ ಇಲಾಖೆ. ಸರಕಾರದ ಆದೇಶದ ಪ್ರಕಾರ ಸಮಿತಿಯ ಅಧ್ಯಕ್ಷನಾಗಿದ್ದ ನಾನು ಸದಸ್ಯರ ಅಭಿಪ್ರಾಯವನ್ನು ಕ್ರೋಢೀಕರಿಸಿ ಕನ್ನಡ ಸಂಸ್ಕೃತಿ ಇಲಾಖೆಗೆ ಸಲ್ಲಿಸಿ ನನ್ನ ಕರ್ತವ್ಯವನ್ನು ಪೂರೈಸಿದ್ದೇನೆ ಎಂದು ತಿಳಿಸಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೂ ‘ಬೌದ್ಧರುದ್ಯಾನ’ ವಿಷಯಕ್ಕೂ ಯಾವುದೇ ಸಂಬಂಧವಿಲ್ಲ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸರ್ವ ಸದಸ್ಯರ ಸಭೆಯಲ್ಲಿ ಈ ವಿಷಯದ ಬಗೆಗೆ ಚರ್ಚೆಯೂ ಆಗಿಲ್ಲ ಎಂದು ತಿಳಿಸಿದ್ದಾರೆ.




