Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‌ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ...

‌ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಪ್ರಕರಣ ರದ್ದುಪಡಿಸಬಾರದು: ಹೈಕೋರ್ಟ್‌ನಲ್ಲಿ ಸರ್ಕಾರದ ಪ್ರತಿಪಾದನೆ

ವಾರ್ತಾಭಾರತಿವಾರ್ತಾಭಾರತಿ11 Feb 2026 9:35 PM IST
share
‌ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಪ್ರಕರಣ ರದ್ದುಪಡಿಸಬಾರದು: ಹೈಕೋರ್ಟ್‌ನಲ್ಲಿ ಸರ್ಕಾರದ ಪ್ರತಿಪಾದನೆ
"ಕೋಮುದ್ವೇಷ ಭಾಷಣ ಪ್ರಭಾಕರ ಭಟ್ ಅವರ ಹವ್ಯಾಸವಾಗಿದೆ"

ಬೆಂಗಳೂರು: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರಿಗೆ ಕೋಮುದ್ವೇಷ ಭಾಷಣ ಮಾಡುವುದು ಹವ್ಯಾಸವಾಗಿದ್ದು, ಸಮುದಾಯಗಳು ಇರಲಿ, ಅವರು ದೇವರುಗಳನ್ನೂ ಬಿಟ್ಟಿಲ್ಲ. ಆದ್ದರಿಂದ, ಅವರ ವಿರುದ್ಧದ ಪ್ರಕರಣ ರದ್ದುಪಡಿಸಬಾರದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಪ್ರತಿಪಾದಿಸಿತು.

ಕೋಮು ದ್ವೇಷದ ಮಾತುಗಳನ್ನಾಡಿದ ಸಂಬಂಧ ಯೂಟ್ಯೂಬ್‌ ಚಾನಲ್‌ನಲ್ಲಿ ಪ್ರಸಾರವಾದ ವಿಡಿಯೊ ಆಧರಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪಟ್ಟಣ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಡಾ. ಕಲ್ಲಡ್ಕ ಪ್ರಭಾಕರ ಭಟ್‌ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ನ್ಯಾಯಪೀಠ, ಸತ್ಯೇಂದರ್‌ ಕುಮಾರ್‌ ಆಂಟಿಲ್‌ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ರೂಪಿಸಿರುವ ಪ್ರಕ್ರಿಯೆಯನ್ನು ಪಾಲಿಸಲಾಗಿಲ್ಲ. ಬಿಎನ್‌ಎಸ್‌ಎಸ್‌ ಸೆಕ್ಷನ್‌ 35(3) ಅಡಿ ಪೊಲೀಸರು ಪ್ರಭಾಕರ್‌ ಭಟ್‌ ಅವರಿಗೆ ನೋಟಿಸ್‌ ನೀಡಿಲ್ಲ ಎಂದಿತು.

ಇದಕ್ಕೆ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕಿ ಆಸ್ಮಾ ಕೌಸರ್ ಅವರು, ಅರ್ನೇಶ್‌ ಕುಮಾರ್‌ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ನಿರ್ದೇಶಿಸಿರುವಂತೆ ಬಿಎನ್‌ಎಸ್‌ಎಸ್‌ ಸೆಕ್ಷನ್‌ 35(3) ಅಡಿ ನೋಟಿಸ್‌ ನೀಡಲಾಗಿದ್ದು, ಅದಕ್ಕೆ ಪ್ರತಿಕ್ರಿಯೆ ಪಡೆಯಲಾಗಿದೆ. ಅವರ ಮನೆಗೆ ನೋಟಿಸ್‌ ಅಂಟಿಸಲಾಗಿತ್ತು. ಆನಂತರ, ಪ್ರಭಾಕರ್‌ ಭಟ್‌ ಅವರು ಧ್ವನಿ ಮಾದರಿ ನೀಡಿದ್ದು, ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ದೂರುದಾರರು ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ. ಎಫ್‌ಐಆರ್‌ ದಾಖಲಿಸುವುದಕ್ಕೂ ಮುನ್ನ ಪ್ರಾಥಮಿಕ ತನಿಖೆ ನಡೆಸಲಾಗಿದೆ ಎಂದರು.

ಮುಂದುವರಿದು, ಪ್ರಭಾಕರ ಭಟ್‌ ಅವರ ಭಾಷಣವು ಕಾನೂನಿಗೆ ವಿರುದ್ಧವಾಗಿದ್ದು, ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿ ದ್ವೇಷ ಕಾರಿದ್ದಾರೆ. ಇತರರನ್ನು ಪ್ರಚೋದಿಸಿದ್ದಾರೆ. ಪ್ರಭಾಕರ್‌ ಭಟ್‌ ಅವರು ರಾಜಕಾರಣಿಯಲ್ಲ. ಇದು ರಾಜಕೀಯ ಪ್ರೇರಿತ ದ್ವೇಷ ಭಾಷಣವಲ್ಲ. ಯುವಕರನ್ನು ಅನ್ಯ ಕೋಮುಗಳ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡಿದ್ದಾರೆ. ವಿವೇಕಾನಂದ ಜಯಂತಿಯಲ್ಲಿ ಪ್ರಭಾಕರ ಭಟ್‌ ಮಾಡಿರುವ ಭಾಷಣಕ್ಕೆ ಸಂಬಂಧಿಸಿದಂತೆ ಪೆನ್‌ ಡ್ರೈವ್‌ ಸಹ ಸಲ್ಲಿಸಲಾಗಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿದ್ದು, ಅಲ್ಲಿ 1,500-2,000 ವಿದ್ಯಾರ್ಥಿಗಳಿದ್ದಾರೆ. ಅಲ್ಲಿ ಕಲಿಯುತ್ತಿರುವ ಎಲ್ಲವೂ ಯುವ ಮನಸ್ಸುಗಳು, ಭಾಷಣ ಅವರ ಮನಸ್ಸಿನ ಮೇಲೆ ಬೇರೆಯದೇ ಪರಿಣಾಮ ಬೀರುತ್ತದೆ ಎಂದರು.

ಪ್ರಭಾಕರ ಭಟ್‌ ಪರ ಹಿರಿಯ ವಕೀಲ ಎಂ. ಅರುಣ್‌ ಶ್ಯಾಮ್‌ ಅವರು, "ಅರ್ಜಿದಾರರಿಗೆ ನೋಟಿಸ್‌ ನೀಡಿಲ್ಲ. ಮನೆಯ ಗೋಡೆಗೆ ಪೊಲೀಸರು ನೋಟಿಸ್‌ ಅಂಟಿಸಿ ಹೋಗಿದ್ದರು. 2026ರ ಜನವರಿ 21ರಂದು ಎಫ್‌ಐಆರ್‌ ಆಗಿದ್ದು, 22ರಂದು ಪ್ರಭಾಕರ್‌ ಭಟ್‌ ಧ್ವನಿ ಮಾದರಿ ನೀಡಿದ್ದಾರೆ ಎಂದರಲ್ಲದೆ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಸುಪ್ರೀಂಕೋರ್ಟ್‌ನ ಇತ್ತೀಚೆಗಿನ ತೀರ್ಪನ್ನು ಆಧರಿಸಿ ಸುತ್ತೋಲೆ ಹೊರಡಿಸಿದ್ದಾರೆ. ಹಾಲಿ ಪ್ರಕರಣವು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದ ಪೋಸ್ಟ್‌ಗೆ ಸಂಬಂಧಿಸಿರುವುದರಿಂದ ಮಾರ್ಗಸೂಚಿಯನ್ನು ರೂಪಿಸಬೇಕು. ಇದಕ್ಕೆ ಪೂರಕವಾಗಿ ಕೆಲವು ಅಂಶಗಳನ್ನು ಸಲ್ಲಿಸಿದ್ದೇನೆ. ದೂರುದಾರರಿಗೆ ನೋಟಿಸ್‌ ನೀಡಲಾಗಿಲ್ಲ. ದೂರುದಾರರು ಬಾದಿತ ವ್ಯಕ್ತಿಯಲ್ಲ" ಎಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿ ವಜಾಗೊಳಿಸುವಂತೆ ಸರ್ಕಾರಿ ಅಭಿಯೋಜಕರು ಕೋರಿದ್ದಾರೆ. ದೂರುದಾರರಿಗೆ ನೋಟಿಸ್‌ ಜಾರಿ ಮಾಡಲಾಗಿಲ್ಲ. ಅವರಿಗೆ ಹ್ಯಾಂಡ್‌ ಸಮನ್ಸ್‌ ನೀಡಬೇಕು. ಅದನ್ನು ಸೋಮವಾರದೊಳಗೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿತಲ್ಲದೆ, ಪ್ರಕರಣಕ್ಕೆ ತಡೆ ನೀಡಿ ಫೆಬ್ರವರಿ 6ರಂದು ಹೊರಡಿಸಲಾಗಿದ್ದ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.

ಪ್ರಕರಣದ ಹಿನ್ನೆಲೆ: ಪ್ರಭಾಕರ್‌ ಭಟ್‌ ವಿರುದ್ಧದ ದೂರಿನಲ್ಲಿ, ಪುತ್ತೂರಿನ ವಿವೇಕಾನಂದ ಕಾಲೇಜಿನ ಆವರಣದಲ್ಲಿ ವಿವೇಕಾನಂದ ಜಯಂತಿಯಲ್ಲಿ ಭಾಗವಹಿಸಿದ್ದ ಪ್ರಭಾಕರ್‌ ಭಟ್‌ ಅವರು ಮುಸ್ಲಿಮ್‌, ಕ್ರಿಶ್ಚಿಯನ್‌ ಸಮುದಾಯಗಳ ವಿರುದ್ಧ ದ್ವೇಷ ಹರಡುವಂತ ಭಾಷಣ ಮಾಡಿದ್ದಾರೆ. ಮೊದಲಿಗೆ ಮೊಘಲರು ಆನಂತರ ಕ್ರಿಶ್ಚಿಯನ್ನರು ದಾಳಿ ನಡೆಸಿದ್ದಾರೆ. ಪ್ರತ್ಯೇಕ ಪಾಕಿಸ್ತಾನ ನೀಡದೇ ಇದ್ದರೆ ಹಿಂದೂಗಳ ಮೇಲೆ ದಾಳಿ ಮಾಡುತ್ತೇವೆ ಎಂದು ಹೇಳಿದ್ದರು. ದೇವಸ್ಥಾನ ಒಡೆದು, ಗೋವು ಕತ್ತರಿಸಿ, ತಾಯಂದಿರ ಮೇಲೆ ಅತ್ಯಾಚಾರ ಮಾಡಿದ್ದಾರೆ. ಲಕ್ಷಾಂತರ ಹಿಂದೂಗಳ ಹತ್ಯೆ ಮಾಡಿದ್ದಾರೆ. ಆವತ್ತಿನ ಚಿತ್ರ ಮತ್ತೆ ಇಂದೂ ಕಾಣುತ್ತಿದೆ ಎಂದು 2026ರ ಜನವರಿ 12ರಂದು ಭಾಷಣ ಮಾಡಿದ್ದರು. ಈ ಭಾಷಣವನ್ನು ವಿಕಸನ ಟಿವಿಯು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಿತ್ತು ಎಂದು ಆರೋಪಿಸಲಾಗಿತ್ತು.

ಇದನ್ನು ಆಧರಿಸಿ ಕಲ್ಲಡ್ಕ ಪ್ರಭಾಕರ ಭಟ್‌, ವಿಕಸನ ಯೂಟ್ಯೂಬ್‌ ಮತ್ತು ಕಾರ್ಯಕ್ರಮದ ಸಂಘಟಕರ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ಗಳಾದ 196, 299, 302, 353(2) ಜತೆಗೆ 3(5) ಅಡಿ ಪ್ರಕರಣ ದಾಖಲಿಸಲಾಗಿದೆ.

Tags

Kalladka Prabhakar BhatHate speechKarnataka high court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X